ಬ್ರೇಕಿಂಗ್ ನ್ಯೂಸ್
27-05-22 04:07 pm HK News Desk ಕ್ರೈಂ
ನವದೆಹಲಿ, ಮೇ 27 : ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಹರಿಯಾಣದ ಮಾಜಿ ಸಿಎಂ ಓಂಪ್ರಕಾಶ್ ಚೌಟಾಲಾ ಅವರಿಗೆ ದೆಹಲಿಯ ವಿಶೇಷ ಸಿಬಿಐ ನ್ಯಾಯಾಲಯ ನಾಲ್ಕು ವರ್ಷಗಳ ಜೈಲು ಶಿಕ್ಷೆ ಮತ್ತು 50 ಲಕ್ಷ ರೂ. ದಂಡ ವಿಧಿಸಿ ತೀರ್ಪು ನೀಡಿದೆ.
ಇದೆ ವೇಳೆ, ಓಂಪ್ರಕಾಶ್ ಚೌಟಾಲಾ ಅಕ್ರಮ ಹಣದಿಂದ ಗಳಿಸಿರುವ ನಾಲ್ಕು ಕಡೆಗಳ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳುವಂತೆ ಕೋರ್ಟ್ ಆದೇಶಿಸಿದೆ.
1993ರಿಂದ 2006ರ ವರೆಗಿನ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದೋಷಿಯಾಗಿದ್ದ ಚೌಟಾಲಾ ಪರ ವಕೀಲರು ಹಾಗೂ ಸಿಬಿಐ ಪರ ವಕೀಲರ ವಾದವನ್ನು ವಿಶೇಷ ಕೋರ್ಟ್ ನ್ಯಾಯಾಧೀಶ ವಿಕಾಸ್ ಧುಲ್ ಗುರುವಾರ ಆಲಿಸಿದ್ದರು. ಚೌಟಾಲಾ ಅವರ ವೈದ್ಯಕೀಯ ಸಮಸ್ಯೆ ಮತ್ತು ವೃದ್ಧಾಪ್ಯವನ್ನು ಉಲ್ಲೇಖಿಸಿ ಅವರಿಗೆ ಕನಿಷ್ಠ ಶಿಕ್ಷೆಯನ್ನು ನೀಡಬೇಕೆಂದು ನ್ಯಾಯಾಲಯವನ್ನು ಕೋರಿದ್ದರು. ಆದರೆ ಸಿಬಿಐ ಪರ ವಕೀಲರು ಆರೋಪಿಗೆ ಗರಿಷ್ಠ ಶಿಕ್ಷೆ ವಿಧಿಸುವಂತೆ ಕೋರಿದ್ದಲ್ಲದೆ, ಇದು ಸಮಾಜಕ್ಕೆ ಸಂದೇಶವನ್ನು ನೀಡಬೇಕು ಎಂದು ಮನವಿ ಮಾಡಿತ್ತು.
ಸಿಬಿಐ ಅಧಿಕಾರಿಗಳು ಈ ಬಗ್ಗೆ 2005 ರಲ್ಲಿ ಪ್ರಕರಣ ದಾಖಲಿಸಿದ್ದು 1993 ಮತ್ತು 2006 ರ ನಡುವೆ ಅಕ್ರಮ ಆಸ್ತಿಯನ್ನು ಗಳಿಸಿದ ಆರೋಪದ ಮೇಲೆ ಮಾರ್ಚ್ 26, 2010 ರಂದು ಚಾರ್ಜ್ ಶೀಟ್ ಸಲ್ಲಿಸಿದ್ದರು. ಆನಂತರ ಕೋರ್ಟಿನಲ್ಲಿ ವಿಚಾರಣೆ ನಡೆದು ಸುದೀರ್ಘ ಅವಧಿಯ ಬಳಿಕ ಸಾವಿನ ಅಂಚಿನಲ್ಲಿರುವ ಚೌಟಾಲಾಗೆ ಶಿಕ್ಷೆ ವಿಧಿಸಿದೆ. ಭ್ರಷ್ಟಾಚಾರ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಒಬ್ಬರಿಗೆ ಶಿಕ್ಷೆಯಾಗಿದ್ದು ಇದೇ ಮೊದಲು.
A decision has been taken on the punishment of former Haryana Chief Minister Om Prakash Chautala in the disproportionate assets case. A special CBI court in Delhi on Friday sentenced former Haryana Chief Minister Om Prakash Chautala to four years' imprisonment and also imposed a fine of Rs.50 lakhs, convicted in the disproportionate assets case. Not only this, the court has also ordered confiscation of four properties of Chautala.
05-08-25 01:45 pm
Bangalore Correspondent
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
05-08-25 03:23 pm
HK News Desk
ಯೆಮೆನ್ ಬಳಿಯ ಸಮುದ್ರದಲ್ಲಿ ಪ್ಯಾಸೆಂಜರ್ ಹಡಗು ಮುಳುಗ...
04-08-25 05:11 pm
ಗೆಳೆಯನೊಂದಿಗೆ ಪತ್ನಿಯ ಸರಸ ; ಪರಿ ಪರಿ ಬೇಡಿಕೊಂಡರೂ...
04-08-25 02:16 pm
ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ ; ಅಶಿಸ್ತ...
03-08-25 05:44 pm
ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ನರೇಂದ್ರ ಮೋದಿ, ಭಾಗ...
03-08-25 04:25 pm
05-08-25 04:29 pm
Mangalore Correspondent
Dcc Bank, Mangalore, Dr Udaya Kumar: ಸಹಕಾರ ಚಳ...
04-08-25 10:58 pm
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
Mangalore Congress: ಮೆಸ್ಕಾಂ ನೌಕರರ ಪಿಂಚಣಿಗೆ ಗ್...
04-08-25 09:51 pm
Dharmasthala Case, SIT, Body Found: ಬಂಗ್ಲೆಗುಡ...
04-08-25 07:38 pm
03-08-25 10:11 pm
Mangalore Correspondent
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm