ಉತ್ತರ ಪ್ರದೇಶದಲ್ಲಿ ಮತ್ತೊಂದು ನಿರ್ಭಯಾ ಪ್ರಕರಣ ! ಬಸ್ಸಿನಲ್ಲೇ ಮಹಿಳೆಯ ಅತ್ಯಾಚಾರ 

27-09-20 06:45 pm       Headline Karnataka News Network   ಕ್ರೈಂ

ಚಲಿಸುತ್ತಿದ್ದ ಬಸ್ ಒಂದರಲ್ಲಿ ಮಹಿಳೆಯ ಮೇಲೆ ಅತ್ಯಾಚಾರ ನಡೆಸಿರುವ ಘಟನೆ ಉತ್ತರ ಪ್ರದೇಶದ ಮೀರತ್ ನಲ್ಲಿ ನಡೆದಿದೆ.

ಲಕ್ನೋ, ಸೆಪ್ಟಂಬರ್ 27: ದೆಹಲಿಯ ನಿರ್ಭಯಾ ಪ್ರಕರಣದ ಮಾದರಿಯಲ್ಲೇ ಉತ್ತರ ಪ್ರದೇಶದಲ್ಲಿ ಮತ್ತೊಂದು ಘಟನೆ ನಡೆದಿದೆ. ಚಲಿಸುತ್ತಿದ್ದ ಬಸ್ ಒಂದರಲ್ಲಿ ಮಹಿಳೆಯ ಮೇಲೆ ಅತ್ಯಾಚಾರ ನಡೆಸಿರುವ ಘಟನೆ ಉತ್ತರ ಪ್ರದೇಶದ ಮೀರತ್ ನಲ್ಲಿ ನಡೆದಿದೆ. ಅತ್ಯಾಚಾರದ ಬಳಿಕ ಕಾಮುಕರು ಅರೆಪ್ರಜ್ಞೆ ಸ್ಥಿತಿಯಲ್ಲಿದ್ದ ಸಂತ್ರಸ್ತೆ ಯುವತಿಯನ್ನ ರಸ್ತೆಯಲ್ಲಿ ಇಳಿಸಿ ಪರಾರಿಯಾಗಿದ್ದಾರೆ. 

ತಂಪು ಪಾನೀಯದಲ್ಲಿ ಮತ್ತು ಬರಿಸುವ ಪದಾರ್ಥ ಸೇರಿಸಿ ಮಹಿಳೆಗೆ ಕುಡಿಸಿ ಅತ್ಯಾಚಾರ ಎಸಗಿದ್ದಾರೆ ಎನ್ನಲಾಗುತ್ತಿದೆ. ನಂತರ ಬಸ್ ಕಂಡಕ್ಟರ್ ಮತ್ತು ಚಾಲಕ ಸಂತ್ರಸ್ತೆಯನ್ನು ನಡುರಸ್ತೆಯಲ್ಲಿ ಎಸೆದು ಪರಾರಿಯಾಗಿದ್ದಾರೆ. ಮಹಿಳೆಯ ಕುಟುಂಬಸ್ಥರನ್ನು ಪತ್ತೆ ಮಾಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಹಿಳೆಯನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಕೆಯ ಕುಟುಂಬದ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಹೇಳಿದ್ದಾರೆ. 

ದೆಹಲಿಯಲ್ಲಿ ಮೂರು ವರ್ಷಗಳ ಹಿಂದೆ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಒಂಟಿ ಮಹಿಳೆಯನ್ನು ದುರುಳರು ಅತ್ಯಾಚಾರಗೈದು ವಿಕೃತವಾಗಿ ಬಳಸಿಕೊಂಡಿದ್ದರು. ಬಳಿಕ ಆಸ್ಪತ್ರೆಯಲ್ಲಿ ಯುವತಿ ಕೊನೆಯುಸಿರೆಳೆದಿದ್ದರು. ಈ ಪ್ರಕರಣ ದೇಶಾದ್ಯಂತ ಭಾರೀ ಸಂಚಲನಕ್ಕೆ ಕಾರಣವಾಗಿತ್ತು.