ಬ್ರೇಕಿಂಗ್ ನ್ಯೂಸ್
04-06-22 06:19 pm Mangalore Correspondent ಕ್ರೈಂ
ಪುತ್ತೂರು, ಜೂನ್ 4: ಹಿಂದು ಜಾಗರಣ ವೇದಿಕೆ ಮುಖಂಡ ಕಾರ್ತಿಕ್ ಮೇರ್ಲ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ಚರಣ್ ರಾಜ್ ಎಂಬಾತನನ್ನು ಹಾಡಹಗಲೇ ಬೈಕಿನಲ್ಲಿ ಬಂದ ದುಷ್ಕರ್ಮಿಗಳು ಕಡಿದು ಹತ್ಯೆ ಮಾಡಿದ್ದಾರೆ.
ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಪೆರ್ಲಂಪಾಡಿಯಲ್ಲಿ ಘಟನೆ ನಡೆದಿದೆ. ಪುತ್ತೂರು ತಾಲೂಕಿನ ಆರ್ಯಾಪು ನಿವಾಸಿ ಚರಣ್ ರಾಜ್, ಪೆರ್ಲಂಪಾಡಿಯ ಮೇಲಿನ ಪೇಟೆಯಲ್ಲಿ ಮೆಡಿಕಲ್ ಶಾಪ್ ತೆರೆಯಲು ಸಿದ್ಧತೆ ನಡೆಸುತ್ತಿದ್ದ. ಇಂದು ಮಧ್ಯಾಹ್ನ ಅಂಗಡಿಯಲ್ಲಿದ್ದುಕೊಂಡು ವ್ಯವಸ್ಥೆ ಮಾಡುತ್ತಿದ್ದಾಗಲೇ ಬೈಕಿನಲ್ಲಿ ಬಂದ ಇಬ್ಬರು ತಲವಾರಿನಿಂದ ಕಡಿದು ಹೋಗಿದ್ದಾರೆ. ಸ್ವಲ್ಪ ಹೊತ್ತು ನೆಲದಲ್ಲಿ ಬಿದ್ದು ಹೊರಳಾಡಿದ ಚರಣ್ ರಾಜ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.
2019ರ ಸೆ.4 ರಂದು ರಾತ್ರಿ ಗಣೇಶೋತ್ಸವ ಸಡಗರದಲ್ಲಿದ್ದ ಹಿಂಜಾವೇ ಮುಖಂಡ ಕಾರ್ತಿಕ್ ಮೇರ್ಲ ಅವರನ್ನು ತಂಡವೊಂದು ಹಳೆ ದ್ವೇಷದಿಂದ ಕಡಿದು ಹತ್ಯೆಗೈದಿತ್ತು. ಇದರಲ್ಲಿ ಸೋದರರಾದ ಚರಣ್ ಮತ್ತು ಕಿರಣ್ ಸೇರಿ ಮೂವರನ್ನು ಪೊಲೀಸರು ಬಂಧಿಸಿದ್ದರು. ಒಂದು ವರ್ಷ ಕಾಲ ಜೈಲಿನಲ್ಲಿದ್ದ ಇವರು ಬಳಿಕ ಜಾಮೀನು ಪಡೆದು ಹೊರಬಂದಿದ್ದರು. ಇದೀಗ ತನ್ನ ಪತ್ನಿ ಮನೆಯಿದ್ದ ಪೆರ್ಲಂಪಾಡಿಯಲ್ಲಿ ಮೆಡಿಕಲ್ ವ್ಯವಹಾರ ಆರಂಭಿಸಲು ಚರಣ್ ಸಿದ್ಧತೆ ನಡೆಸಿದ್ದ. ಕಾರ್ತಿಕ್ ಮೇರ್ಲ ಹತ್ಯೆಗೆ ಪ್ರತೀಕಾರಕ್ಕಾಗಿ ಕಾದಿದ್ದ ಹಂತಕರು ಇಂದು ಮಧ್ಯಾಹ್ನ ಶಾಪ್ ನಲ್ಲಿ ಒಬ್ಬಂಟಿಯಾಗಿದ್ದಾಗಲೇ ಬಂದು ಹತ್ಯೆ ಮಾಡಿದ್ದಾರೆ.
Puttur Murder of Hindu Jagaran Vedike leader Karthik Merla, prime accused Charan Raj killed over revenge in broad daylight.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 02:45 pm
Mangalore Correspondent
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
Headline Karnataka, Social Campaigning, Manga...
11-09-25 11:34 am
ಧರ್ಮಸ್ಥಳ ಕೇಸ್ ; ವಿಚಾರಣೆ ಮುಗಿಸಿ ಸತ್ಯಕ್ಕೆ ಜಯ ಎನ...
10-09-25 10:50 pm
Yenepoya Hospital, Mangalore: ಯೆನಪೋಯ ಆಸ್ಪತ್ರೆ...
10-09-25 08:46 pm
11-09-25 02:25 pm
HK STAFF
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm