ಬ್ರೇಕಿಂಗ್ ನ್ಯೂಸ್
08-06-22 11:20 am HK News Desk ಕ್ರೈಂ
ಲಕ್ನೋ, ಜೂನ್ 8: ಉತ್ತರ ಪ್ರದೇಶ ಮತ್ತು ಕರ್ನಾಟಕದ ಆರೆಸ್ಸೆಸ್ ಕಚೇರಿಗಳ ಮೇಲೆ ಬಾಂಬ್ ದಾಳಿ ನಡೆಸುವುದಾಗಿ ವಾಟ್ಸಪ್ ಮೆಸೇಜ್ ಕಳಿಸಿ, ಬೆದರಿಕೆ ಒಡ್ಡಿದ ಪ್ರಕರಣದಲ್ಲಿ ಉತ್ತರ ಪ್ರದೇಶದ ಎಟಿಎಸ್ ಪೊಲೀಸರು ತಮಿಳುನಾಡಿನಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ.
ತಮಿಳುನಾಡಿನ ಪುದುಕೋಟೈ ಜಿಲ್ಲೆಯ ನಿವಾಸಿ ರಾಜ್ ಮೊಹಮ್ಮದ್ ಬಂಧಿತ ವ್ಯಕ್ತಿಯಾಗಿದ್ದು, ಉತ್ತರ ಪ್ರದೇಶ ಎಟಿಎಸ್ ಪೊಲೀಸರ ಸೂಚನೆಯಂತೆ ತಮಿಳುನಾಡು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಉತ್ತರ ಪ್ರದೇಶ ಪೊಲೀಸರು ಟ್ರಾನ್ಸಿಟ್ ರಿಮ್ಯಾಂಡ್ ಪಡೆದು ತನಿಖೆಗೆ ಕರೆದೊಯ್ಯಲಿದ್ದಾರೆ. ವಾಟ್ಸಪ್ ಮೆಸೇಜ್ ಮೂಲಕ ಉತ್ತರ ಪ್ರದೇಶದಲ್ಲಿ ಎರಡು ಮತ್ತು ಕರ್ನಾಟಕದ ನಾಲ್ಕು ಕಡೆ ಆರೆಸ್ಸೆಸ್ ಕಚೇರಿಗಳನ್ನು ಸ್ಫೋಟಿಸುವುದಾಗಿ ಯುಪಿಯಲ್ಲಿರುವ ಕಚೇರಿಯೊಂದಕ್ಕೆ ಮೆಸೇಜ್ ರವಾನಿಸಿದ್ದ. ವಾಟ್ಸಪ್ ನಂಬರ್ ಆಧರಿಸಿ ಬೆನ್ನತ್ತಿದ ಪೊಲೀಸರು ಆರೋಪಿಯನ್ನು ತಮಿಳುನಾಡಿನಲ್ಲಿ ಸೆರೆ ಹಿಡಿದಿದ್ದಾರೆ.
ಉತ್ತರ ಪ್ರದೇಶದ ಲಕ್ನೋ ಮತ್ತು ಉನ್ನಾವೋದಲ್ಲಿನ ಆರೆಸ್ಸೆಸ್ ಕಚೇರಿ ಬ್ಲಾಸ್ಟ್ ಮಾಡುವುದಾಗಿ ಸಂದೇಶದಲ್ಲಿ ಉಲ್ಲೇಖ ಇತ್ತು. ಈ ಬಗ್ಗೆ ಲಕ್ನೋ ನಗರದ ಮಡಿಯಾಂವ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಆರೆಸ್ಸೆಸ್ ಕಾರ್ಯಕರ್ತ ನೀಲಕಂಠ ತಿವಾರಿ ಎಂಬವರ ಮೊಬೈಲಿಗೆ ಹಿಂದಿ, ಇಂಗ್ಲಿಷ್ ಮತ್ತು ಕನ್ನಡದಲ್ಲಿ ಈ ಮೆಸೇಜ್ ಬಂದಿತ್ತು. ಅಂತಾರಾಷ್ಟ್ರೀಯ ಮೊಬೈಲ್ ಸಂಖ್ಯೆಯಿಂದ ಜೂನ್ 6ರಂದು ರಾತ್ರಿ 8 ಗಂಟೆಗೆ ಮೆಸೇಜ್ ಬಂದಿದ್ದು ಸೈಬರ್ ಸೆಲ್ ಪೊಲೀಸರು ಅದರ ಜಾಡು ಹಿಡಿದು ಒಂದೇ ದಿನದಲ್ಲಿ ಒಬ್ಬ ಆರೋಪಿಯನ್ನು ಬಂಧಿಸಿದ್ದಾರೆ.
ಬೆದರಿಕೆ ಹಿನ್ನೆಲೆಯಲ್ಲಿ ಉತ್ತರ ಪ್ರದೇಶ, ಕರ್ನಾಟಕ ಸೇರಿದಂತೆ ವಿವಿಧ ಕಡೆಗಳಲ್ಲಿ ಆರೆಸ್ಸೆಸ್ ಕಚೇರಿಗಳಿಗೆ ಪೊಲೀಸ್ ಭದ್ರತೆ ಒದಗಿಸಲಾಗಿತ್ತು.
The Tamil Nadu police have nabbed a man named Raj Mohammed who had, on Monday, June 6, reportedly sent Whatapp messages threatening to blow up 6 RSS offices including two in Uttar Pradesh and 4 offices in Karnataka. Mohammad, a resident of the Pudukodi district of Tamil Nadu, was arrested by the state police based on the information provided by the Uttar Pradesh ATS. The UP ATS team will now be bringing the suspect to Lucknow on transit remand.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm