ಬ್ರೇಕಿಂಗ್ ನ್ಯೂಸ್
08-06-22 02:49 pm Mangalore Correspondent ಕ್ರೈಂ
ಮಂಗಳೂರು, ಜೂನ್ 8: ಬೆಂಗಳೂರಿನಿಂದ ಬರುತ್ತಿದ್ದ ಖಾಸಗಿ ಬಸ್ಸಿನಲ್ಲಿ ಯುವತಿಗೆ ಕಿರುಕುಳ ನೀಡಿದ ಘಟನೆ ನಡೆದಿದ್ದು, ಆರೋಪಿಯನ್ನು ಕಂಕನಾಡಿ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಮಹಮ್ಮದ್ ಮುಸ್ತಫಾ ಬಿ.ಸಿ.ರೋಡ್ ಎಂದು ಗುರುತಿಸಲಾಗಿದೆ.
ಜೂನ್ 6ರಂದು ರಾತ್ರಿ ಶರ್ಲಿನ್ ಮಾರ್ತಾ ಎಂಬ ಯುವತಿ ಬೆಂಗಳೂರಿನಿಂದ ಮಂಗಳೂರಿಗೆ ಖಾಸಗಿ ಬಸ್ಸಿನಲ್ಲಿ ಬಂದಿದ್ದು, ಬೆಳಗ್ಗೆ 5 ಗಂಟೆಗೆ ಬಸ್ ತಲುಪುತ್ತಿದ್ದಾಗ ಮಹಮ್ಮದ್ ಮುಸ್ತಫಾ ಕಿರುಕುಳ ನೀಡಿದ್ದಾನೆ. ಈ ಬಗ್ಗೆ ಯುವತಿ ಸಹ ಪ್ರಯಾಣಿಕರಲ್ಲಿ ತಿಳಿಸಿದ್ದು, ಕೂಡಲೇ ಇತರ ಪ್ರಯಾಣಿಕರು ಪ್ರಶ್ನೆ ಮಾಡಿದ್ದಾರೆ. ಆದರೆ, ಇತರ ಪ್ರಯಾಣಿಕರಲ್ಲಿ ನೀವೇನು ಮಾಡುತ್ತೀರಿ ಎಂದು ಜೋರು ದನಿಯಲ್ಲಿ ಮಾತನಾಡಿ ಒರಟಾಗಿ ವರ್ತಿಸಿದ್ದಾನೆ.
ವಾಗ್ವಾದ ನಡೆಯುತ್ತಿರುವಾಗಲೇ ಬಸ್ ಮಂಗಳೂರಿನ ಪಂಪ್ವೆಲ್ ತಲುಪಿದ್ದು, ಅಲ್ಲಿ ಬಸ್ ನಿಲ್ಲುತ್ತಿದ್ದಂತೆ ಆರೋಪಿ ಯುವಕ ಇಳಿದು ತಪ್ಪಿಸಿಕೊಂಡಿದ್ದ. ಯುವತಿ ಯಾವುದೋ ಕಂಪನಿಯಲ್ಲಿ ಇಂಟರ್ವ್ಯೂ ಇದ್ದ ಕಾರಣಕ್ಕೆ ಮಂಗಳೂರಿಗೆ ಬಂದಿದ್ದಳು. ಇಂಟರ್ವ್ಯೂ ಮುಗಿಸಿದ ಬಳಿಕ ಜೂನ್ 7ರಂದು ಸಂಜೆ ಕಂಕನಾಡಿ ಠಾಣೆಯಲ್ಲಿ ದೂರು ನೀಡಿದ್ದಾರೆ. ಆರೋಪಿಯನ್ನು ಕಂಕನಾಡಿ ಪೊಲೀಸರು ಬಂಧಿಸಿದ್ದು ಐಪಿಸಿ 354 ಪ್ರಕಾರ ಪ್ರಕರಣ ದಾಖಲಿಸಿದ್ದಾರೆ.
Mangalore Man arrested for sexually harassing girl in Bus by Kankandy police. The arrested has been identified as Mohammad Mustaffa.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm