ಬ್ರೇಕಿಂಗ್ ನ್ಯೂಸ್
08-06-22 10:33 pm Bengalore Correspondent ಕ್ರೈಂ
ಬೆಂಗಳೂರು, ಜೂನ್ 8 : ಕಿಡ್ನ್ಯಾಪ್ ಆಗಿದ್ದ ಮಗುವನ್ನು ಕೆಲವೇ ಗಂಟೆಗಳಲ್ಲಿ ಬೆಂಗಳೂರಿನ ಹೆಣ್ಣೂರು ಠಾಣೆ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ ರಕ್ಷಣೆ ಮಾಡಿದ್ದಾರೆ.
ಜೂನ್ 7 ರಂದು ಸಂಜೆ ವೇಳೆಗೆ 11 ವರ್ಷದ ಮಗು ಹೆಣ್ಣೂರಿನಲ್ಲಿ ಕಿಡ್ನ್ಯಾಪ್ ಆಗಿತ್ತು. ಕಿಡ್ನಾಪ್ ಆಗಿದ್ದ ಮಗು ಹೊರಮಾವು ನಿವಾಸಿಯಾಗಿರುವ ಬಿಎಂಟಿಸಿ ಚಾಲಕ ಸುಭಾಷ್ ಎಂಬುವವರ ಪುತ್ರನಾಗಿದ್ದು ಅಪಹರಣಕಾರರು 50 ಲಕ್ಷ ಬೇಡಿಕೆ ಇಟ್ಟಿದ್ದರು.
ಆರೋಪಿಗಳು ಕರೆ ಮಾಡಿ ಸುಮಾರು 50 ಲಕ್ಷ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದರಿಂದ ಪೋಷಕರು ರಾತ್ರಿ 9 ಗಂಟೆ ಹೊತ್ತಿಗೆ ಪೊಲೀಸ್ ಠಾಣೆಗೆ ಬಂದು ದೂರು ನೀಡಿದ್ದರು. ದೂರು ದಾಖಲಿಸಿಕೊಂಡಿದ್ದ ಪೊಲೀಸರು ನಂಬರ್ ಟ್ರೇಸ್ ಮಾಡಿದ್ದರು.
ಹಣಕ್ಕೆ ಬೇಡಿಕೆ ಇಟ್ಟಿದ್ದ ಆರೋಪಿಗಳ ಫೋನ್ ನಂಬರ್ ಹೆಣ್ಣೂರು ಠಾಣೆ ಪೊಲೀಸರು ತಕ್ಷಣ ಟ್ರೇಸ್ ಮಾಡಿದ್ದಾರೆ. ಈ ವೇಳೆ ಜಿಗಣಿ ಬಳಿ ಫಾರ್ಮ್ಹೌಸ್ನಲ್ಲಿ ಮಗು ಜತೆ ಆರೋಪಿಗಳು ಇದ್ದರು. ಸಿನಿಮೀಯ ರೀತಿ ಕಾಂಪೌಂಡ್ ಹಾರಿ ಒಳನುಗ್ಗಿ ಮಗುವನ್ನು ರಕ್ಷಣೆ ಮಾಡಿದ್ದು, ನೇಪಾಳ ಮೂಲದ ಆರೋಪಿಯನ್ನ ಬಂಧಿಸಿದ್ದಾರೆ. ಮಹಿಳೆಯೊಬ್ಬರು ಮಗುವನ್ನು ಅಪಹರಿಸಿ ನೇಪಾಳ ಮೂಲದ ವ್ಯಕ್ತಿಗೆ ನೀಡಿದ್ದಾಳೆ ಎಂದು ಹೇಳಲಾಗುತ್ತಿದೆ. ಸದ್ಯ ಮಗು ಕಿಡ್ನ್ಯಾಪ್ ಮಾಡಿದ್ದ ಮಹಿಳೆಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.
ಹೊರಮಾವು ನಿವಾಸಿ ಸುಭಾಷ್ ಅವರ ಮಗ ಐದನೇ ಕ್ಲಾಸ್ ಓದುತ್ತಿದ್ದ. ಶಾಲೆಯಿಂದ ಮನೆಗೆ ತೆರಳುತ್ತಿದ್ದಾಗಲೇ ಮಹಿಳೆ ಬಾಲಕನನ್ನು ಅಪಹರಿಸಿದ್ದಳು.
11 year old boy kidnapped, demand 50 lakhs as ransom, police nab accused within hours.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm