ಬ್ರೇಕಿಂಗ್ ನ್ಯೂಸ್
09-06-22 09:20 pm HK News Desk ಕ್ರೈಂ
ಕಾರವಾರ, ಜೂನ್ 9: ಮುಂಬೈನಿಂದ ಮಂಗಳೂರಿಗೆ ರೈಲಿನಲ್ಲಿ ಹವಾಲಾ ರೂಪದಲ್ಲಿ ತರುತ್ತಿದ್ದ ಎರಡು ಕೋಟಿ ರೂ. ನಗದನ್ನು ರೈಲ್ವೇ ಪೊಲೀಸರು ಕಾರವಾರದಲ್ಲಿ ಪತ್ತೆ ಮಾಡಿದ್ದಾರೆ.
ರೈಲು ಸಂಖ್ಯೆ - 12133 ಮುಂಬೈ ಛತ್ರಪತಿ ಶಿವಾಜಿ ಟರ್ಮಿನಲ್- ಮಂಗಳೂರು ಜಂಕ್ಷನ್ ಎಕ್ಸ್‌ಪ್ರೆಸ್‌ನಲ್ಲಿ ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಕಾರಣಕ್ಕೆ ವ್ಯಕ್ತಿಯನ್ನು ತಪಾಸಣೆಗೆ ಒಳಪಡಿಸಲಾಗಿತ್ತು. ರೈಲ್ವೇ ಟಿಕೆಟ್ ಪರೀಕ್ಷಕರು ವಿಚಾರಿಸಿದರೂ ಸರಿಯಾಗಿ ಉತ್ತರಿಸದೇ ಇದ್ದಾಗ ರೈಲ್ವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ರೈಲು ಕಾರವಾರ ನಿಲ್ದಾಣಕ್ಕೆ ಬಂದಾಗ ವ್ಯಕ್ತಿಯ ಜೊತೆಗಿದ್ದ ಬ್ಯಾಗ್ ತಪಾಸಣೆ ನಡೆಸಿದ್ದು, ಅದರಲ್ಲಿ ಬರೋಬ್ಬರಿ 2 ಕೋಟಿ ರೂ. ಭಾರತೀಯ ಕರೆನ್ಸಿ ನೋಟುಗಳು ಪತ್ತೆಯಾಗಿವೆ.
ಪ್ರಕರಣಕ್ಕೆ ಸಂಬಂಧಿಸಿ 22 ವರ್ಷದ ಚೇನ್ ಸಿಂಗ್ ಎಂಬಾತನನ್ನು ಬಂಧಿಸಲಾಗಿದ್ದು, ಈತ ರಾಜಸ್ಥಾನದ ಜಲೋರ್ ನಗರದ ನಿವಾಸಿ ಎಂದು ಪೊಲೀಸರು ಗುರುತಿಸಿದ್ದಾರೆ. ಬ್ಯಾಗ್ ತೆರೆಯಲು ಹೇಳಿದಾಗ, ಮೊದಲು ನಿರಾಕರಿಸಿದ್ದು ನಂತರ ಬ್ಯಾಗಿನಲ್ಲಿ ದುಡ್ಡಿರುವುದಾಗಿ ಒಪ್ಪಿಕೊಂಡಿದ್ದಾನೆ. ವಿಚಾರಣೆ ವೇಳೆ, ಮುಂಬೈನ ಭರತ್ ಭಾಯ್ ಅಲಿಯಾಸ್ ಪಿಂಟು ಎಂಬಾತನ ಬಳಿ ರೂ.15,000 ಮಾಸಿಕ ವೇತನಕ್ಕೆ ಕೆಲಸ ಮಾಡುತ್ತಿದ್ದು, ಹಣವನ್ನು ಮಂಗಳೂರಿನ ರಾಜ್ ಎನ್ನುವವರಿಗೆ ತಲುಪಿಸಲು ಒಯ್ಯುತ್ತಿದ್ದೇನೆ ಎಂದು ತಿಳಿಸಿದ್ದಾನೆ.
ಜಪ್ತಿಪಡಿಸಿದ ರೂ. 2 ಕೋಟಿ ರೂಪಾಯಿ ನಗದನ್ನು ಅಗತ್ಯ ಕ್ರಮಕ್ಕಾಗಿ ಆದಾಯ ತೆರಿಗೆ ಇಲಾಖೆಯ ನಿರ್ದೇಶನದಂತೆ ಕಾರವಾರ ಗ್ರಾಮೀಣ ಠಾಣೆಗೆ ಹಸ್ತಾಂತರಿಸಲಾಗಿದೆ. ಪೊಲೀಸರು ಅದೇ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು ಆರೋಪಿಯನ್ನು ಅದೇ ಠಾಣೆಗೆ ಹಸ್ತಾಂತರ ಮಾಡಲಾಗಿದೆ.
Karwar Hawala via train from Mumbai to Mangalore, two crores money seized, youth arrested. The arrested has been identified as Chin Sing (22).
15-05-25 11:59 am
HK News Desk
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
14-05-25 11:08 pm
HK News Desk
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
15-05-25 01:34 pm
Udupi Correspondent
Manjunath Bhandary, Kukke Temple, Mangalore:...
14-05-25 08:05 pm
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
Harish Injadi, President of Kukke Subrahmanya...
14-05-25 01:42 pm
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
15-05-25 12:14 pm
HK Staff
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm