ಸಚಿವೆ ಶೋಭಾ ಕರಂದ್ಲಾಜೆ ಆಪ್ತ ಎಂದು ಹೇಳಿ ಟೆಂಡರ್ ಕೊಡಿಸುವ ಆಮಿಷ ; ಉದ್ಯಮಿಗಳಿಂದ ಹಣ ಪಡೆದು ವಂಚನೆ ! 

19-06-22 08:58 pm       Bengalore Correspondent   ಕ್ರೈಂ

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆಪ್ತ ಎಂದು ಹೇಳಿಕೊಂಡು ವ್ಯಕ್ತಿಯೊಬ್ಬ ಚೆನ್ನೈ, ಊಟಿಯಲ್ಲಿ ಹಲವು ಜನರಿಂದ ಹಣ ಪಡೆದು ವಂಚನೆ ಮಾಡಿರುವ ಘಟನೆ ಬೆಳಕಿಗೆ ಬಂದಿದ್ದು ಈ ಬಗ್ಗೆ ಬೆಂಗಳೂರಿನ ಸಂಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಬೆಂಗಳೂರು, ಜೂನ್ 19 : ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆಪ್ತ ಎಂದು ಹೇಳಿಕೊಂಡು ವ್ಯಕ್ತಿಯೊಬ್ಬ ಚೆನ್ನೈ, ಊಟಿಯಲ್ಲಿ ಹಲವು ಜನರಿಂದ ಹಣ ಪಡೆದು ವಂಚನೆ ಮಾಡಿರುವ ಘಟನೆ ಬೆಳಕಿಗೆ ಬಂದಿದ್ದು ಈ ಬಗ್ಗೆ ಬೆಂಗಳೂರಿನ ಸಂಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಈ ಕುರಿತು ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಶೋಭಾ ಕರಂದ್ಲಾಜೆ, ಊಟಿ ಮತ್ತು ಚೆನ್ನೈನಲ್ಲಿರುವ ನನ್ನ ಕಚೇರಿ ಮತ್ತು ನನ್ನ ಹೆಸರನ್ನು ಕೆಲವರು ದುರ್ಬಳಕೆ ಮಾಡಿಕೊಂಡಿದ್ದಾರೆ. ಇದರ ಬಗ್ಗೆ ನನಗೆ ಮಾಹಿತಿ ಸಿಕ್ಕಿದೆ. ವ್ಯಕ್ತಿಯೊಬ್ಬರು ಕರೆ ಮಾಡಿ ನನಗೆ ಮಾಹಿತಿ ನೀಡಿದ್ದಾರೆ. ಈ ಕುರಿತು ಬೆಂಗಳೂರಿನ ಸಂಜಯ್ ನಗರದ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದೇನೆ. ತಕ್ಷಣ ಪ್ರಕರಣವನ್ನು ಸಿಸಿಬಿಗೆ ವರ್ಗಾಯಿಸಿ ನನ್ನ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವವರನ್ನು ಬಂಧಿಸಬೇಕು. ಇದರ ಹಿಂದೆ ಯಾರ ಕೈವಾಡವಿದೆ ಎನ್ನುವುದರ ಕುರಿತು ತನಿಖೆ ಮಾಡಲು ಪೊಲೀಸರಿಗೆ ತಿಳಿಸಿದ್ದೇನೆ ಎಂದರು.

Lucknow: Former banker arrested in Rs 45-crore fraud case - Cities News

ಪ್ರಸ್ತುತ ಮಾಹಿತಿಯ ಪ್ರಕಾರ ಪ್ರಕಾಶ್ ಎಂಬ ವ್ಯಕ್ತಿ ತಾನು ಶೋಭಾ ಕರಂದ್ಲಾಜೆ ಆಪ್ತ ಎಂದು ಹೇಳಿಕೊಂಡು ಜನರಿಗೆ ವಂಚಿಸುತ್ತಿದ್ದಾರೆ. ಕೇಂದ್ರ ಸರಕಾರದ ಟೆಂಡರ್‌ಗಳನ್ನು ಕೊಡಿಸುವುದಾಗಿ ಹೇಳಿ ಜನರಿಗೆ ಮೋಸ ಮಾಡುತ್ತಿದ್ದಾನೆ. ಊಟಿ, ಚೆನ್ನೈನ ಉದ್ಯಮಿಗಳು, ಕೃಷಿಕರಿಗೆ ಪ್ರಕಾಶ ವಂಚಿಸಿದ್ದಾನೆ ಎಂದು ತಿಳಿದುಬಂದಿದೆ. ಈ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.

The Sanjay Nagar police are step up investigation to track down a man who posing as PA of Minister of State for Agriculture and Farmers’ Welfare,Shobha Karandlaje cheating people in Tamil Nadu and Ooty.Senior officer told reporters,a victim In his complaint,Mr.Aditya said that Prakash is operating in Ooty and many parts of Tamil Nadu for the last three months cheating land owners,farmers and businessmen offering official favour.