ಬ್ರೇಕಿಂಗ್ ನ್ಯೂಸ್
23-06-22 03:41 pm HK News Desk ಕ್ರೈಂ
ಮೈಸೂರು, ಜೂನ್ 23 : 21 ವರ್ಷದ ಅರ್ಚಕನೊಬ್ಬ ಶಾಸ್ತ್ರ ಕೇಳಲು ಬಂದ 35 ವರ್ಷದ ಗೃಹಿಣಿಯನ್ನು ಮದುವೆಯಾಗುತ್ತೇನೆಂದು ಹೇಳಿ ಹತ್ತು ದಿನಗಳ ಕಾಲ ಜೊತೆಗಿದ್ದು ಆನಂತರ ಕಾಡಿನಲ್ಲಿ ಬಿಟ್ಟು ಎಸ್ಕೇಪ್ ಆಗಿರುವ ಘಟನೆ ಬೆಳಕಿಗೆ ಬಂದಿದೆ.
ಮೈಸೂರು ಜಿಲ್ಲೆ ನಂಜನಗೂಡು ತಾಲೂಕು ಕೊಲ್ಲೂಪುರ ಗ್ರಾಮದಲ್ಲಿ ಘಟನೆ ನಡೆದಿದೆ. ಅಲ್ಲಿನ ಮಹದೇಶ್ವರ ದೇವಸ್ಥಾನಕ್ಕೆ ಮಹಿಳೆ ಶಾಸ್ತ್ರ ಕೇಳಲು ಹೋಗಿದ್ದಾಗ ಅರ್ಚಕ ಪರಿಚಯವಾಗಿದ್ದ. ಆತನ ಮಾತು ಕೇಳಿ ಹತ್ತು ದಿನಗಳ ಹಿಂದೆ ತನ್ನ ಇಬ್ಬರು ಮಕ್ಕಳು, ಗಂಡನನ್ನು ಬಿಟ್ಟು ನಾಪತ್ತೆಯಾಗಿದ್ದಳು. ಬಾಳು ಕೊಡುವುದಾಗಿ ಅರ್ಚಕ ಸಂತೋಷ್ ಮಹಿಳೆಯನ್ನು ಜೊತೆಗೆ ಕರೆದೊಯ್ದಿದ್ದು ಆಕೆಯೊಂದಿಗೆ ಹತ್ತು ದಿನಗಳ ಕಾಲ ಸರಸ ಸಲ್ಲಾಪ ಮಾಡಿದ್ದಾನೆ. ನಂತರ ಬದುಕಲು ಸಾಧ್ಯವಿಲ್ಲ ಎಂದು ಹೇಳಿ ಕಾಡಿನಲ್ಲಿ ಆತ್ಮಹತ್ಯೆ ಮಾಡಿಕೊಳ್ಳೋಣ ಎಂದು ಹೇಳಿ ರಾತ್ರಿ ಕಾಡಿನೊಳಗೆ ತೆರಳಿ ಅಲ್ಲಿಯೇ ಮಹಿಳೆಯನ್ನು ಬಿಟ್ಟು ಪರಾರಿಯಾಗಿದ್ದಾನೆ.
ಎರಡು ಮಕ್ಕಳ ತಾಯಿ ಜೂನ್ 12 ರಂದು ತಂದೆ ಮನೆಯಿಂದ ನಾಪತ್ತೆಯಾಗಿದ್ದಳು. ಸಾಯುವುದಾಗಿ ಹೇಳಿ ರಾತ್ರೋರಾತ್ರಿ ಅರ್ಚಕ ಎಸ್ಕೇಪ್ ಆಗಿದ್ದರಿಂದ ಇಡೀ ರಾತ್ರಿ ಮಹಿಳೆ ಒಂಟಿಯಾಗಿ ಕಾಡಿನಲ್ಲಿ ಕಾಲ ಕಳೆದಿದ್ದಾಳೆ. ಮುಂಜಾನೆ ವೇಳೆಗೆ ಒಂಟಿ ಮಹಿಳೆ ಸ್ಥಳೀಯರ ಕಣ್ಣಿಗೆ ಬಿದ್ದಿದ್ದು ಆಕೆಯ ಕರುಣಾಜನಕ ಕಥೆ ಕೇಳಿ ಗ್ರಾಮಸ್ಥರು ಬೆಚ್ಚಿಬಿದ್ದಿದ್ದು ಹುಲ್ಲಹಳ್ಳಿ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಮಹಿಳೆಯನ್ನು ವಿಚಾರಣೆ ನಡೆಸಿದ್ದಾರೆ. ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದ್ದು ನಾಪತ್ತೆಯಾದ ಸಂತೋಷ್ ಪತ್ತೆಗೆ ಬಲೆ ಬೀಸಿದ್ದಾರೆ.
Mysuru Hindu priest in love with married woman cheats of marriage and flees away. The woman who had come to the priest for astrology made love with her and promised her of marriage leaves her in forest and flees away.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm