ಬ್ರೇಕಿಂಗ್ ನ್ಯೂಸ್
27-06-22 01:01 pm HK News Desk ಕ್ರೈಂ
ಉತ್ತರಾಖಂಡ, ಜೂ 27: ಲಿಫ್ಟ್ ಕೊಡುವ ನೆಪದಲ್ಲಿ ಮಹಿಳೆ ಹಾಗೂ ಆಕೆಯ ಆರು ವರ್ಷದ ಮಗಳ ಮೇಲೆ ಚಲಿಸುವ ಕಾರಲ್ಲಿ ಸಾಮೂಹಿಕ ಅತ್ಯಾಚಾರ ಎಸಗಿದ ಹೇಯ ಕೃತ್ಯ ಉತ್ತರಾಖಂಡದಿಂದ ವರದಿಯಾಗಿದೆ.
ಸಂತ್ರಸ್ತೆ ಮಹಿಳೆ ತನ್ನ ಮಗುವಿನ ಜತೆ ಪಿರಾನ್ ಕಲಿಯಾರ್ ಎಂಬಲ್ಲಿನ ಧಾರ್ಮಿಕ ಕೇಂದ್ರಕ್ಕೆ ತೆರಳಿ ಅಲ್ಲಿಂದ ಮನೆಗೆ ಹೋಗುವ ವೇಳೆ ರಾತ್ರಿಯಾಗಿತ್ತು. ಈ ವೇಳೆ ಕಾರಿನಲ್ಲಿ ಬಂದ ಕೆಲ ವ್ಯಕ್ತಿಗಳು ಲಿಫ್ಟ್ ನೀಡುವುದಾಗಿ ಕಾರಿಗೆ ಹತ್ತಿಸಿಕೊಂಡಿದ್ದಾರೆ. ಬಳಿಕ ಚಲಿಸುವ ಕಾರಿನಲ್ಲಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಕಾರಿನಲ್ಲಿ ಎಷ್ಟು ಮಂದಿ ಇದ್ದರು ಎನ್ನುವ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಆದರೆ ಕಾರು ಚಲಾಯಿಸುತ್ತಿದ್ದವ ಹೆಸರು ಸೋನು ಎಂದು ಸಂತ್ರಸ್ತೆ ಹೇಳಿದ್ದಾಗಿ ಘಟನೆಯ ಬಗ್ಗೆ ಪೊಲೀಸರು ಮಾಹಿತಿ ನೀಡಿದ್ದಾರೆ.
ತನ್ನ ಆರು ವರ್ಷದ ಮಗುವಿನೊಂದಿಗೆ ಮನೆ ಹೋಗಲು ಕಾಯುತ್ತಿದ್ದ ಮಹಿಳೆಗೆ ಲಿಫ್ಟ್ ಕೊಡಿಸುವುದಾಗಿ ಕಾರಿನಲ್ಲಿ ಬಂದ ಕೆಲ ವ್ಯಕ್ತಿಗಳು ಕಾರಿಗೆ ಹತ್ತಿಸಿಕೊಂಡಿದ್ದಾರೆ. ಬಳಿಕ ಮಗು ಹಾಗೂ ಆಕೆಯ ಮೇಲೆ ಚಲಿಸುವ ಕಾರಿನಲ್ಲೇ ಸಾಮೂಹಿಕ ಅತ್ಯಾಚಾರ ಎಸಗಿ ಕಾಲುವೆಗೆ ಎಸೆದಿದ್ದಾರೆ.
ಮಧ್ಯರಾತ್ರಿ ಅಲ್ಲಿಂದ ಪ್ರಯಾಸಪಟ್ಟು ಮಹಿಳೆ ಸ್ಥಳೀಯ ಪೊಲೀಸ್ ಠಾಣೆಗೆ ಬಂದು ದೂರು ನೀಡಿದ್ದಾರೆ. ದೂರು ದಾಖಲಿಸಿಕೊಂಡ ಪೊಲೀಸರು ಸಂತ್ರಸ್ತೆ ಹಾಗೂ ಆಕೆಯ ಮಗುವನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಕಾರಿನಲ್ಲಿ ಎಷ್ಟು ಮಂದಿ ಇದ್ದರು ಎನ್ನುವ ಬಗ್ಗೆ ಸಂತ್ರಸ್ತ ಮಹಿಳೆಗೆ ಯಾವುದೇ ಮಾಹಿತಿ ಇಲ್ಲ. ಆದರೆ ಕಾರು ಚಲಾಯಿಸುತ್ತಿದ್ದವ ಹೆಸರು ಸೋನು ಎನ್ನುವುದನ್ನಷ್ಟೇ ಸಂತ್ರಸ್ತೆ ಹೇಳಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಸಂತ್ರಸ್ತರನ್ನು ಪೊಲೀಸರು ರಾಖೀಯಲ್ಲಿರುವ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ವೈದ್ಯಕೀಯ ಪರೀಕ್ಷೆಯಲ್ಲಿ ಅವರಿಬ್ಬರ ಮೇಲೆ ಅತ್ಯಾಚಾರ ನಡೆದಿರುವುದು ಸಾಬೀತಾಗಿದೆ.
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದು, ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.
A woman and her six-year-old daughter were allegedly gangraped in a moving car in Haridwar's Roorkee by a man and his friends after giving her a lift in his car, police said Sunday.They said the woman was on her way home from Piran Kaliyar, a Muslim religious site, during the night with her six-year-old daughter when she was offered the lift by a man named Sonu.
01-08-25 11:34 pm
Mangaluru Correspondent
‘Comedy Kiladigalu’, Chandrashekhar Siddi Sui...
01-08-25 10:45 pm
Kannada Producer Ganesh, Film Dharmasthala Fi...
01-08-25 09:09 pm
Rape Case, Prajwal Revanna Verdict : ಮೈಸೂರಿನ...
01-08-25 02:55 pm
ಧರ್ಮ 'ಸ್ಥಳ' ಕೇಸ್ ; ಪಾಯಿಂಟ್ ನಂ.1ರಲ್ಲಿ ಸಿಕ್ಕ...
01-08-25 01:31 pm
01-08-25 10:48 pm
HK News Desk
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
Trump, Modi, Export Tariff: ಸ್ನೇಹಿತ ಎನ್ನುತ್ತಲ...
31-07-25 09:51 am
ಪಾಕಿಸ್ತಾನದ ಡಿಜಿಎಂಒ ಕರೆ ಮಾಡಿ ದಾಳಿ ನಿಲ್ಲಿಸಲು ಮನ...
30-07-25 09:06 am
02-08-25 10:51 pm
Mangalore Correspondent
Kallapu Highway News; ಕಲ್ಲಾಪು ಹೆದ್ದಾರಿಯಲ್ಲಿ ಬ...
02-08-25 03:51 pm
Inspector Manjunath Gowda, SIT, Dharmasthala:...
02-08-25 02:31 pm
Dharmasthala Case, UDR, SIT Police News; ಧರ್ಮ...
02-08-25 01:46 pm
Kerala Comes to Mangalore: Feast at Coral, Th...
02-08-25 01:40 pm
02-08-25 10:04 pm
Giridhar Shettt, Mangaluru
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm
Mangalore CCB Police, Drugs: ಆಂಧ್ರಪ್ರದೇಶದಿಂದ...
01-08-25 05:05 pm
13 ವರ್ಷದ ಬಾಲಕನ ಕಿಡ್ನಾಪ್ ; 5 ಲಕ್ಷ ರೂ. ಹಣ ತರುವಷ...
01-08-25 04:27 pm