ಬ್ರೇಕಿಂಗ್ ನ್ಯೂಸ್
02-07-22 05:02 pm HK News Desk ಕ್ರೈಂ
ನವದೆಹಲಿ, ಜುಲೈ 2: ಬಿಜೆಪಿ ನಾಯಕಿ ನೂಪುರ್ ಶರ್ಮಾ ಪರ ಪೋಸ್ಟ್ ಹಾಕಿದ್ದ ಉದಯಪುರದ ಕನ್ನಯ್ಯಲಾಲ್ ಕೊಲೆ ದೇಶದಲ್ಲಿ ಸದ್ದು ಮಾಡಿರುವ ಬೆನ್ನಲ್ಲೇ ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯಲ್ಲೂ ಇದೇ ರೀತಿಯ ಕೊಲೆ ಆಗಿರುವ ಶಂಕೆ ವ್ಯಕ್ತವಾಗಿದೆ.
ಅಮರಾವತಿ ನಗರದಲ್ಲಿ ಪಶು ಚಿಕಿತ್ಸಾಲಯದ ಮೆಡಿಕಲ್ ಶಾಪ್ ಹೊಂದಿದ್ದ ಉಮೇಶ್ ಪ್ರಹ್ಲಾದರಾವ್ ಕೊಲ್ಹೆ (54) ಎಂಬವರನ್ನು ಜೂನ್ 21 ರಂದು ರಾತ್ರಿ ಅಪರಿಚಿತ ವ್ಯಕ್ತಿಗಳು ಅಡ್ಡಗಟ್ಟಿ ಕೊಲೆ ಮಾಡಿದ್ದಾರೆ. ಉಮೇಶ್ ಕೊಲ್ಹೆ ಅವರು ಕೂಡ ಕೊಲೆಯಾಗುವುದಕ್ಕೂ ಮುನ್ನ ನೂಪುರ್ ಶರ್ಮಾ ಪರ ಪೋಸ್ಟ್ ಹಾಕಿದ್ದರು. ಆದರೆ ಆಗ ಯಾವ ಕಾರಣಕ್ಕೆ ಕೊಲೆ ಮಾಡಿದ್ದರು ಎನ್ನೋದು ತಿಳಿದುಬಂದಿರಲಿಲ್ಲ. ರಾತ್ರಿ ವೇಳೆ ಕಾರಿನಲ್ಲಿ ತೆರಳುತ್ತಿದ್ದಾಗ ಬೈಕಿನಲ್ಲಿ ಬಂದಿದ್ದ ಆಗಂತುಕರು ಚಾಕುವಿನಿಂದ ಕುತ್ತಿಗೆ ಕೊಯ್ದು ಕೊಂದಿದ್ದಾರೆ. ಈ ವೇಳೆ, ಉಮೇಶ್ ಅವರ ಮಗ, ಪತ್ನಿಯೂ ಇದ್ದುದರಿಂದ ರಸ್ತೆಗೆ ಬಂದು ಬೊಬ್ಬೆ ಹಾಕಿದ್ದರು. ಬಳಿಕ ಹಂತಕರು ಪರಾರಿಯಾಗಿದ್ದರೆ, ಉಮೇಶ್ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಸ್ಪಂದಿಸದೆ ಉಮೇಶ್ ಸಾವು ಕಂಡಿದ್ದರು.
ಮಗ ನೀಡಿದ ದೂರಿನಂತೆ ತನಿಖೆ ನಡೆಸಿದ ಪೊಲೀಸರು ಐದು ಮಂದಿಯನ್ನು ಬಂಧಿಸಿದ್ದಾರೆ. ಅಬ್ದುಲ್ ತೌಫೀಕ್ ತಸ್ಲಿಮ್ (22), ಶಾರುಖ್ ಪಠಾಣ್ (25), ಅಬ್ದುಲ್ ತೌಫಿಕ್ (24), ಶೋಯೆಬ್ ಖಾನ್ (22), ಅತಿಬ್ ರಶೀದ್ (22), ಮುದಾಸಿರ್ ಇಬ್ರಾಹಿಂ(23) ಬಂಧಿತರು.
ಇದೀಗ ಕನ್ನಯ್ಯ ಲಾಲ್ ಕೊಲೆಯ ವಿಚಾರ ಸಾಕಷ್ಟು ಸದ್ದು ಮಾಡಿರುವುದರಿಂದ ಉಮೇಶ್ ಅವರನ್ನೂ ಇದೇ ಕಾರಣಕ್ಕಾಗಿ ಕೊಲೆ ಮಾಡಲಾಗಿತ್ತು ಎಂದು ಅಮರಾವತಿ ಬಿಜೆಪಿ ಘಟಕದ ನಾಯಕರು ಆರೋಪಿಸಿದ್ದಾರೆ. ಅಲ್ಲದೆ, ಪೊಲೀಸರು ಕೊಲೆಯ ಹಿಂದಿನ ಕಾರಣ ಪತ್ತೆ ಮಾಡಬೇಕು ಎಂದು ಆಗ್ರಹ ಮಾಡಿದ್ದಾರೆ.
ಆರೋಪ ಕೇಳಿಬಂದ ಬೆನ್ನಲ್ಲೇ ಕೇಂದ್ರ ಗೃಹ ಸಚಿವ ಅಮಿತ್ ಷಾ ಉಮೇಶ್ ಕೊಲ್ಹೆ ಕೊಲೆ ಪ್ರಕರಣವನ್ನು ಎನ್ಐಎ ತನಿಖೆಗೆ ಒಪ್ಪಿಸಿದ್ದಾರೆ.
A 54-year-old chemist was hacked to death in Maharashtra’s Amravati for allegedly making a social media post in support of suspended BJP leader Nupur Sharma.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm