ಬ್ರೇಕಿಂಗ್ ನ್ಯೂಸ್
18-07-22 12:58 pm Mangalore Correspondent ಕ್ರೈಂ
ಮಂಗಳೂರು, ಜುಲೈ 18 : ತರಕಾರಿ ಅಂಗಡಿಗೆ ಬರುತ್ತಿದ್ದ ಕಾಲೇಜು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಕಾವೂರಿನ ಪಂಜಿಮೊಗರು ನಿವಾಸಿಯನ್ನು ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಮೂಲತಃ ಬೆಳ್ತಂಗಡಿ ತಾಲೂಕಿನ ಉಜಿರೆ ನಿವಾಸಿಯಾಗಿದ್ದು ಪಂಜಿಮೊಗರಿನಲ್ಲಿ ವಾಸ್ತವ್ಯ ಇದ್ದ ಮುಸ್ತಫಾ (35) ಬಂಧಿತ ಆರೋಪಿ. ಈತ ಕಾವೂರಿನ ಗಾಂಧಿ ನಗರದಲ್ಲಿ ತರಕಾರಿ ಅಂಗಡಿ ಹೊಂದಿದ್ದು ಅಲ್ಲಿಗೆ ಬರುತ್ತಿದ್ದ 15 ವರ್ಷದ ವಿದ್ಯಾರ್ಥಿನಿಯನ್ನು ಪುಸಲಾಯಿಸಿ ಕಿರುಕುಳ ನೀಡಿದ್ದಾನೆ.
ವಿದ್ಯಾರ್ಥಿನಿಗೆ ಜೂನ್ 10 ರಿಂದ ಜುಲೈ 8 ರ ವರೆಗೆ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಿ ಮಹಿಳಾ ಠಾಣೆಯಲ್ಲಿ ದೂರು ನೀಡಲಾಗಿದೆ. ಜುಲೈ 8ರಂದು ರಾತ್ರಿ ವಿದ್ಯಾರ್ಥಿನಿ ಮನೆಯಲ್ಲಿ ಒಬ್ಬಳೇ ಇರುವುದನ್ನು ತಿಳಿದು ಆರೋಪಿ ನುಗ್ಗಿದ್ದು ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ. ಈ ಬಗ್ಗೆ ಮನೆಯವರಲ್ಲಿ ಹೇಳಬೇಡ. ಹೇಳಿದರೆ ಜೀವ ಸಹಿತ ಬಿಡಲ್ಲ ಎಂದು ಬೆದರಿಸಿದ್ದ. ಇದರಿಂದ ಹೆದರಿದ ವಿದ್ಯಾರ್ಥಿನಿ ಮನೆಯಲ್ಲಿ ವಿಷಯ ತಿಳಿಸಿರಲಿಲ್ಲ. ಈ ನಡುವೆ, ಮೊಬೈಲಿನಲ್ಲಿ ವಿಡಿಯೋ ಕರೆ ಮಾಡುವಂತೆ ಪೀಡಿಸುತ್ತಿದ್ದು ತಾಯಿಗೆ ಸಂಶಯ ಬಂದು ವಿಚಾರಿಸಿದಾಗ ಘಟನೆ ಬೆಳಕಿಗೆ ಬಂದಿದೆ.
ತಾಯಿ ಬಳಿಕ ಮಗಳನ್ನು ಕರೆದೊಯ್ದು ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ಆರೋಪಿಯನ್ನು ಬಂಧಿಸಿ ಪೋಕ್ಸೋ ಕೇಸು ದಾಖಲಿಸಿದ್ದಾರೆ.
Mangalore Sexual harassment of minor girl by Vegetable vendor in Kavoor, accused arrested under POCSO act by Mangalore Police. The arrested has been identified as Mustafa.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm