ಬ್ರೇಕಿಂಗ್ ನ್ಯೂಸ್
26-07-22 10:17 pm Mangalore Correspondent ಕ್ರೈಂ
ಪುತ್ತೂರು, ಜುಲೈ 26: ನಾಲ್ಕು ದಿನಗಳ ಹಿಂದೆ ಬೆಳ್ಳಾರೆಯಲ್ಲಿ ನಡೆದಿದ್ದ ಮಸೂದ್ ಎಂಬ ಯುವಕನ ಕೊಲೆಗೆ ಪ್ರತೀಕಾರ ಎನ್ನುವಂತೆ ಬಿಜೆಪಿ ಯುವಮೋರ್ಚಾ ಕಾರ್ಯಕರ್ತನನ್ನು ಕಡಿದು ಹತ್ಯೆ ಮಾಡಲಾಗಿದೆ.
ದ.ಕ. ಜಿಲ್ಲಾ ಯುವಮೋರ್ಚಾ ಕಾರ್ಯಕಾರಿಣಿ ಸದಸ್ಯ, ಸ್ಥಳೀಯವಾಗಿ ಸಾಮಾಜಿಕ ಚಟುವಟಿಕೆಯಲ್ಲಿ ಸಕ್ರಿಯವಾಗಿದ್ದ ಪ್ರವೀಣ್ ಕುಮಾರ್ ನೆಟ್ಟಾರು (31) ಎಂಬ ಯುವಕನನ್ನು ಭೀಕರವಾಗಿ ಕಡಿದು ಹತ್ಯೆ ಮಾಡಲಾಗಿದೆ. ಬೆಳ್ಳಾರೆ ಸಮೀಪದ ಪೆರುವಾಜೆ ಕ್ರಾಸ್ ಬಳಿ ಕೋಳಿ ಮಾಂಸದ ಅಂಗಡಿ ಹೊಂದಿದ್ದ ಪ್ರವೀಣ್, ಮಂಗಳವಾರ ರಾತ್ರಿ 8 ಗಂಟೆ ಸುಮಾರಿಗೆ ಅಂಗಡಿ ಮುಚ್ಚಿ ತೆರಳಲು ಅನುವಾದ ಸಂದರ್ಭದಲ್ಲಿಯೇ ಬೈಕಿನಲ್ಲಿ ಬಂದಿದ್ದ ಮೂವರು ತಲವಾರಿನಿಂದ ಮಾರಣಾಂತಿಕ ದಾಳಿ ನಡೆಸಿದ್ದಾರೆ. ಕುತ್ತಿಗೆಯ ಭಾಗಕ್ಕೆ ತೀವ್ರ ಏಟು ಬಿದ್ದ ಪ್ರವೀಣ್ ಅವರನ್ನು ಆಸ್ಪತ್ರೆಗೆ ಒಯ್ಯುವ ದಾರಿಯಲ್ಲೇ ಮೃತಪಟ್ಟಿದ್ದಾರೆ ಎನ್ನುವ ಮಾಹಿತಿ ಲಭಿಸಿದೆ.
ನಾಲ್ಕು ದಿನಗಳ ಹಿಂದೆ ಕಾಸರಗೋಡು ಮೂಲದ ಮಸೂದ್ ಎನ್ನುವ ಯುವಕನ ಮೇಲೆ ಎಂಟು ಜನರು ಗುಂಪು ಹಲ್ಲೆ ನಡೆಸಿತ್ತು. ತಲೆಯ ಭಾಗಕ್ಕೆ ಬಾಟಲಿಯಿಂದ ಹಲ್ಲೆ ನಡೆಸಿದ್ದರಿಂದ ಎರಡು ದಿನಗಳ ನಂತರ ಮಂಗಳೂರಿನ ಆಸ್ಪತ್ರೆಯಲ್ಲಿ ಮಸೂದ್ ಸಾವನ್ನಪ್ಪಿದ್ದ. ಈ ಘಟನೆ ಬಗ್ಗೆ ಮುಸ್ಲಿಂ ಸಂಘಟನೆಗಳು, ನಾಯಕರು ಭಾರೀ ಆಕ್ರೋಶ ವ್ಯಕ್ತಪಡಿಸಿದ್ದರು. ಜಾಲತಾಣದಲ್ಲಿ ಇದಕ್ಕೆ ಪ್ರತೀಕಾರ ತೀರಿಸಿಯೇ ಸಿದ್ಧ ಎನ್ನುವ ಪೋಸ್ಟ್ ಗಳು ಹರಿದಾಡಿದ್ದವು. ಎರಡೇ ದಿನದ ಅಂತರದಲ್ಲಿ ಬಿಜೆಪಿ ಕಾರ್ಯಕರ್ತನನ್ನು ಕಡಿದು ಕೊಲ್ಲಲಾಗಿದೆ. ಮಸೂದ್ ನನ್ನು ಹೊಡೆದು ಹಾಕಿದ್ದ ಯುವಕರು ಹಿಂದು ಸಂಘಟನೆಯ ಕಾರ್ಯಕರ್ತರು ಎನ್ನುವ ಆರೋಪವೂ ಕೇಳಿಬಂದಿತ್ತು. ಅದೇ ಘಟನೆಗೆ ಈಗ ಕಾಸರಗೋಡಿನಿಂದ ಬಂದಿದ್ದ ಯುವಕರು ಪ್ರತೀಕಾರ ತೀರಿಸಿದ್ದಾರೆ ಎನ್ನುವ ಮಾತು ಕೇಳಿಬಂದಿದೆ.
ಪುತ್ತೂರಿನ ಆಸ್ಪತ್ರೆಯಲ್ಲಿ ಪ್ರವೀಣ್ ಅಸುನೀಗಿದ್ದಾರೆ. ವಿಷಯ ತಿಳಿಯುತ್ತಲೇ ಭಾರೀ ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದಾರೆ. ಪುತ್ತೂರು ನಗರ ಮತ್ತು ಬೆಳ್ಳಾರೆ ಪೇಟೆಯಲ್ಲಿ ಪೊಲೀಸರು ಅಂಗಡಿಗಳನ್ನು ಮುಚ್ಚಿಸಿದ್ದಾರೆ. ರಾತ್ರಿಯೇ ಉದ್ವಿಗ್ನ ಸ್ಥಿತಿ ನೆಲೆಸಿದೆ.
Bellare BJP leader Brutally murdered in Sullia. The deceased has been identified as Praveen. He was a BJP Yuva Morcha District Secretary. Revenge murder suspected. Recently a gang attacked a Mulsim youth brutally over a trivial reason in Kalenja of Bellare.
11-01-25 02:11 pm
HK News Desk
Asha Strick, CM Siddaramaiah ಆಶಾ ಕಾರ್ಯಕರ್ತೆಯರ...
10-01-25 11:01 pm
G Parameshwara: ನಕ್ಸಲರು ತಮ್ಮಲ್ಲಿದ್ದ ಶಸ್ತ್ರಾಸ್...
10-01-25 07:03 pm
NT chairman SN Subrahmanyan: ಇನ್ಫೋಸಿಸ್ ನಾರಾಯಣ...
10-01-25 02:44 pm
Car Accident, Chamarajanagar: ಶಬರಿಮಲೆ ಯಾತ್ರಿಕ...
10-01-25 02:06 pm
09-01-25 12:11 pm
HK News Desk
ತಿರುಪತಿಯಲ್ಲಿ ಕಾಲ್ತುಳಿತಕ್ಕೆ ಏಳು ಸಾವು ; ವೈಕುಂಠ...
09-01-25 11:22 am
StalinCM, Lipi: ಸಿಂಧೂ ನಾಗರಿಕತೆಯ ಲಿಪಿಗಳನ್ನು ಅರ...
08-01-25 11:07 pm
Crime News, Nagpur Couple: ಮಧ್ಯರಾತ್ರಿವರೆಗೆ 26...
08-01-25 10:53 pm
ಹೊಸವರ್ಷದ ಆರಂಭದಲ್ಲೇ ಟಿಬೆಟ್ ಮಂದಿಗೆ ಭಾರಿ ಆಘಾತ ;...
07-01-25 06:32 pm
11-01-25 04:57 pm
Mangaluru Correspondent
Lava Kusha Jodukare Kambala, Mangalore; ತೃತೀಯ...
11-01-25 02:25 pm
Mangalore Annamalai, Naxals: ನಕ್ಸಲ್ ಶರಣಾಗತಿ ಬ...
11-01-25 12:44 pm
Mangalore, Missing, Marriage; ಮುಸ್ಲಿಂ ಯುವತಿಯನ...
10-01-25 11:14 pm
Mini Olympics, Mangalore- Uudpi: ಜ.17ರಿಂದ 23...
10-01-25 06:23 pm
10-01-25 11:05 pm
HK News Desk
Bangladeshi national illegal, Mangalore: ಮುಕ್...
10-01-25 09:51 pm
Mangalore Robbery, Crime, Singari Beedi: ಸಿಂಗ...
10-01-25 10:11 am
Share Market Scam, Mangalore: ಷೇರು ಮಾರುಕಟ್ಟೆ...
09-01-25 10:43 pm
Drugs, Mangalore Crime: ಗೋವಾದಿಂದ ಮಂಗಳೂರಿಗೆ ಹೈ...
09-01-25 10:32 pm