ಬ್ರೇಕಿಂಗ್ ನ್ಯೂಸ್
29-07-22 12:32 pm Mangalore Correspondent ಕ್ರೈಂ
ಮಂಗಳೂರು, ಜುಲೈ 29: ಸುರತ್ಕಲ್ ಹತ್ಯೆ ಘಟನೆ ಹಿನ್ನೆಲೆಯಲ್ಲಿ ಪೊಲೀಸರು ಅಲರ್ಟ್ ಆಗಿದ್ದು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ. 144 ಕಲಂ ಸೆಕ್ಷನ್ ಇದ್ದರೂ ರಾತ್ರಿ ವೇಳೆ ಅನುಮಾನಾಸ್ಪದ ನೆಲೆಯಲ್ಲಿ ತಿರುಗಾಡುತ್ತಿದ್ದ 12 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಹತ್ಯೆ ಘಟನೆ ಬಗ್ಗೆ ವಶಕ್ಕೆ ಪಡೆದವರನ್ನು ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. 12 ಮಂದಿಯನ್ನು ಅನುಮಾನಾಸ್ಪದ ನೆಲೆಯಲ್ಲಿ ಬಂಧಿಸಿರುವುದನ್ನು ಕಮಿಷನರ್ ಶಶಿಕುಮಾರ್ ಖಚಿತ ಪಡಿಸಿದ್ದಾರೆ.
ಅಲ್ಲದೆ, ಘಟನೆ ಬಗ್ಗೆ ಸಿಸಿಟಿವಿಯಲ್ಲಿ ದಾಖಲಾಗಿರುವುದರಿಂದ ಅನುಕೂಲ ಆಗಿದೆ. ಅನುಮಾನಿತರನ್ನು ವಶಕ್ಕೆ ಪಡೆದು ಮಾಹಿತಿ ಪಡೆಯುತ್ತೇವೆ. ಯಾವುದೇ ಅಹಿತಕರ ಘಟನೆಗಳಿಗೆ ಆಸ್ಪದ ಕೊಡಬಾರದು. ನಾವು ಆರೋಪಿಗಳನ್ನು ಬಂಧಿಸುತ್ತೇವೆ. ವಶಕ್ಕೆ ಪಡೆದವರ ಪಾತ್ರ ಇಲ್ಲ ಎಂದಾದಲ್ಲಿ ಬಿಟ್ಟು ಬಿಡುತ್ತೇವೆ ಎಂದು ಕಮಿಷನರ್ ತಿಳಿಸಿದ್ದಾರೆ.
ಯಾವ ಕಾರಣಕ್ಕೆ ಕೊಲೆ ಆಗಿದೆ ಎಂದು ಹೇಳಲು ಯಾವುದೇ ಮಾಹಿತಿ ಇಲ್ಲ. ಶಾಂತಿ ಕಾಪಾಡುವ ಉದ್ದೇಶದಿಂದ ಬಿಗಿ ಕ್ರಮ ಕೈಗೊಳ್ಳಲಾಗಿದೆ. ಪ್ರಕರಣದಲ್ಲಿ ಬೇರೆ ಬೇರೆ ಪೊಲೀಸ್ ಠಾಣೆಗಳಲ್ಲಿ 12ಕ್ಕೂ ಹೆಚ್ಚು ಮಂದಿಯನ್ನು ವಶಕ್ಕೆ ಪಡೆದಿದ್ದೇವೆ. ಸಾಮಾಜಿಕ ಜಾಲತಾಣದಲ್ಲಿ ಬೇರೆ ಬೇರೆ ದೇಶಗಳಲ್ಲಿ ಕುಳಿತುಕೊಂಡು, ಫೇಕ್ ಖಾತೆಗಳಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಕೋದನ್ನ ನಿಲ್ಲಿಸಬೇಕು.
ರಾತ್ರಿ ವೇಳೆ ಅನಗತ್ಯವಾಗಿ ಓಡಾಡೋದನ್ನು ನಿಲ್ಲಿಸಿ. ಅದಷ್ಟು ಬೇಗ ಶಾಂತಿ ಮರುಕಳಿಸಲು ಸಹಕರಿಸುವಂತೆ ಜನರಲ್ಲಿ ಮನವಿ ಮಾಡುತ್ತೇನೆ ಎಂದು ಕಮಿಷನರ್ ಹೇಳಿದ್ದಾರೆ. 23 ವರ್ಷದ ಕಾಟಿಪಳ್ಳ ಮಂಗಳಪೇಟೆ ನಿವಾಸಿ ಫಾಜೀಲ್ನನ್ನು ಗುರುವಾರ ರಾತ್ರಿ 8:30ರ ಸುಮಾರಿಗೆ ಹತ್ಯೆ ಮಾಡಲಾಗಿತ್ತು.
Surathkal Fazil Murder case, 12 people have been detained so far for violating 144 section in Mangalore, Shashi Kumar. No persons in connection with Fazil murder case have been arrested. The Mangalore Police are on search for the accused. 144 section will be ordered in Mangalore till Saturday Morning.
19-10-25 07:00 pm
HK News Desk
Government Bans RSS: ಸರ್ಕಾರಿ ಶಾಲೆ, ಕಾಲೇಜು ಆವರ...
19-10-25 05:42 pm
MLA K.N. Rajanna: ರಸ್ತೆಯಲ್ಲಿ ನಮಾಜ್ ಮಾಡಲು ಮುಸ್...
18-10-25 09:11 pm
ಎಂಟು ದಿನಗಳಿಂದ ಲವರ್ ಜೊತೆಗೆ ರೂಮ್ ಮಾಡಿದ್ದ ಪುತ್ತೂ...
18-10-25 08:50 pm
ಅಳಂದ ಮತಗಳವು ಪ್ರಕರಣ ; ಬಿಜೆಪಿ ಮಾಜಿ ಶಾಸಕ ಗುತ್ತೇದ...
17-10-25 08:39 pm
18-10-25 07:34 pm
HK News Desk
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
ಕಂದಹಾರ್ ಮೇಲೆ ಪಾಕ್ ವಾಯುಪಡೆ ಬಾಂಬ್ ದಾಳಿ ; ತಾಲಿಬಾ...
15-10-25 11:02 pm
ರಾಜಸ್ಥಾನದಲ್ಲಿ ಭೀಕರ ಬಸ್ ದುರಂತ ; ಮಕ್ಕಳು, ಮಹಿಳೆಯ...
15-10-25 12:09 pm
19-10-25 10:32 pm
Mangalore Correspondent
Karkala Abhishek Suicide Case, Arrest: ಅಭಿಷೇಕ...
19-10-25 07:58 pm
Bindu Jewellery Mangalore: ಮಂಗಳೂರಿನಲ್ಲಿ 'ಬಿಂದ...
19-10-25 07:19 pm
ದಿನೇಶ್ ಮಟ್ಟುಗೆ ಕಾಂಗ್ರೆಸ್ ಸಿದ್ಧಾಂತ ಗೊತ್ತಿಲ್ಲ,...
18-10-25 11:01 pm
Kantara Controversy, Mangalore: ದೈವದ ಹೆಸರಲ್ಲಿ...
18-10-25 07:26 pm
19-10-25 11:09 pm
Mangalore Correspondent
Bangalore engineering College rape, Crime: ಬೆ...
19-10-25 01:26 pm
MSME Fraud, SBI Malikatte, Mangalore': ಕೇಂದ್ರ...
18-10-25 10:49 pm
Auto Driver Assaulted, Traffic Police in Putt...
18-10-25 03:48 pm
Fake Gold Scam, Belthangady Anugraha Society:...
18-10-25 03:27 pm