ಬ್ರೇಕಿಂಗ್ ನ್ಯೂಸ್
08-08-22 10:20 pm Mangalore Correspondent ಕ್ರೈಂ
ಮಂಗಳೂರು, ಆಗಸ್ಟ್ 8: ಹಿಂದು ಸಂಘಟನೆಯ ಕಾರ್ಯಕರ್ತರನ್ನು ಹಿಂಬಾಲಿಸುವುದು, ಇಂಟರ್ನೆಟ್ ಕರೆ ಮಾಡಿ ಜೀವ ಬೆದರಿಕೆ ಒಡ್ಡುವ ಕೃತ್ಯಗಳು ಮರುಕಳಿಸುತ್ತಿವೆ. ಈ ಬಗ್ಗೆ ಹಿಂದು ಸಂಘಟನೆ ಕಾರ್ಯಕರ್ತರೊಬ್ಬರು ತನಗೆ ಬಂದ ಬೆದರಿಕೆ ಕರೆ ಬಗ್ಗೆ ಕಂಕನಾಡಿ ನಗರ ಠಾಣೆಗೆ ದೂರು ನೀಡಿದ್ದಾರೆ.
ಭಾನುವಾರ ರಾತ್ರಿ 10.30ಕ್ಕೆ ಪಂಪ್ವೆಲ್ ನಿಂದ ಕಾರಿನಲ್ಲಿ ಬಿಕರ್ನಕಟ್ಟೆಯ ತನ್ನ ಮನೆಗೆ ಹೋಗುತ್ತಿದ್ದಾಗ ಬೈಕಿನಲ್ಲಿ ಇಬ್ಬರು ಯುವಕರು ಹಿಂಬಾಲಿಸಿದ್ದಾರೆ. ಮನೆಗೆ ಮುಟ್ಟುವಷ್ಟರಲ್ಲಿ ಇಂಟರ್ನೆಟ್ ಕರೆ ಬಂದಿದ್ದು ನೀನು ಈ ಬಾರಿ ಬಚಾವಾಗಿದ್ದೀಯಾ.. ನಾವು ಬಿಡೋದಿಲ್ಲ. ನೀನು ಸೇರಿ ಮೂವರಿಗೆ ಸ್ಕೆಚ್ ಹಾಕಿದ್ದೇವೆ. ಇವತ್ತಲ್ಲ ನಾಳೆ, ತೆಗೆದೇ ಬಿಡುತ್ತೇವೆ ಎಂದು ತುಳು ಭಾಷೆಯಲ್ಲಿ ಬೆದರಿಕೆ ಹಾಕಿದ್ದಾರೆ ಎಂದು ಕಂಕನಾಡಿ ನಗರ ಠಾಣೆಯಲ್ಲಿ ದೂರು ನೀಡಿದ್ದಾರೆ. ಪೊಲೀಸರು ಜೀವ ಬೆದರಿಕೆ ಬಗ್ಗೆ ಪ್ರಕರಣ ದಾಖಲಿಸಿದ್ದಾರೆ.
ಎರಡು ದಿನಗಳ ಹಿಂದೆ ಬಳ್ಳಾಲ್ ಬಾಗಿನ ಕಾರ್ಯಕರ್ತನಿಗೂ ಇದೇ ರೀತಿ ಬೆದರಿಕೆ ಕರೆ ಬಂದಿತ್ತು. ಕರೆ ಮಾಡಿ, ತುಳು ಭಾಷೆಯಲ್ಲಿ ನಿಂದಿಸಿದ್ದಲ್ಲದೆ, ನಿನ್ನನ್ನು ತೆಗೆಯದೇ ಬಿಡಲ್ಲ ಎಂದು ಬೆದರಿಕೆ ಹಾಕಲಾಗಿತ್ತು. ಬೆದರಿಕೆ ಹಾಕಿದ್ದ ಆಡಿಯೋ ಜಾಲತಾಣದಲ್ಲಿ ವೈರಲ್ ಆಗಿತ್ತು.
ಕಳೆದ ವಾರದ ಉಳ್ಳಾಲ ಠಾಣೆಯಲ್ಲಿ ತನ್ನನ್ನು ಹಿಂಬಾಲಿಸಿಕೊಂಡು ಬಂದ ಬಗ್ಗೆ ವ್ಯಕ್ತಿಯೊಬ್ಬರು ದೂರು ನೀಡಲು ಬಂದಿದ್ದರು. ಕೊನೆಗೆ, ಪೊಲೀಸರು ವಿಚಾರಣೆ ನಡೆಸಿದಾಗ ತಡಬಡಾಯಿಸಿದ್ದರಿಂದ ಸುಳ್ಳು ದೂರೆಂದು ಪರಿಗಣಿಸಿ ಆತನ ವಿರುದ್ಧವೇ ದೂರು ದಾಖಲಿಸಿದ್ದರು.
Mangalore Hindu activist gets life threat via internet call, says we will surely kill you, A case has been registered at Kankanady Town Police Station. We have already targeted three to kill we will kill you also.
15-05-25 10:16 pm
HK News Desk
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
15-05-25 09:09 pm
HK News Desk
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
15-05-25 08:04 pm
Mangalore Correspondent
Lashkar Terror HQ, Pakistan: ಧ್ವಂಸಗೊಂಡ ಲಷ್ಕರ್...
15-05-25 06:36 pm
Lokayukta raid, Mangalore: ಸರ್ವೆ ಇಲಾಖೆ ಮೇಲ್ವಿ...
15-05-25 03:33 pm
Kundapur Suicide: ಸಾಲಬಾಧೆ, ತಂದೆ- ಮಗ ಬಾವಿಗೆ ಹಾ...
15-05-25 01:34 pm
Manjunath Bhandary, Kukke Temple, Mangalore:...
14-05-25 08:05 pm
15-05-25 11:06 pm
HK News Desk
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm