ಹಾಲು ಮಾರುವ ಸೋಗಿನಲ್ಲಿ ಖೋಟಾ ನೋಟು ಜಾಲ ; ಬಿಜೆಪಿ ಮುಖಂಡ ಸೇರಿ ಮೂವರ ಬಂಧನ 

09-08-22 05:12 pm       HK News Desk   ಕ್ರೈಂ

ಹಾಲು ಮಾರುವ ಸೋಗಿನಲ್ಲಿ ಖೋಟಾ ನೋಟು ಚಲಾವಣೆ ಮಾಡುತ್ತಿದ್ದ ಬಿಜೆಪಿ ಮುಖಂಡ ಸಾಗರ್ ಕಾಶಪ್ಪ ಸೇರಿ ಮೂವರನ್ನು ಧಾರವಾಡ ಜಿಲ್ಲೆ ಕುಂದಗೋಳ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಹುಬ್ಬಳ್ಳಿ, ಆಗಸ್ಟ್ 9 : ಹಾಲು ಮಾರುವ ಸೋಗಿನಲ್ಲಿ ಖೋಟಾ ನೋಟು ಚಲಾವಣೆ ಮಾಡುತ್ತಿದ್ದ ಬಿಜೆಪಿ ಮುಖಂಡ ಸಾಗರ್ ಕಾಶಪ್ಪ ಸೇರಿ ಮೂವರನ್ನು ಧಾರವಾಡ ಜಿಲ್ಲೆ ಕುಂದಗೋಳ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 500 ರೂ. ಮುಖಬೆಲೆಯ 47 ಖೋಟಾ ನೋಟು ಮತ್ತು ಕಲರ್ ಜೆರಾಕ್ಸ್ ಯಂತ್ರವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಧಾರವಾಡ ಬಿಜೆಪಿ ಗ್ರಾಮಾಂತರ ಜಿಲ್ಲೆಯ ಸಾಮಾಜಿಕ ಜಾಲತಾಣದ ಸದಸ್ಯನಾಗಿರುವ ಸಾಗರ ಕಾಶಪ್ಪನವರ ಖೋಟಾ ನೋಟು ಚಲಾವಣೆ ಮಾಡುತ್ತಿದ್ದ ಬಗ್ಗೆ ಪೊಲೀಸರಿಗೆ ಖಚಿತ ಮಾಹಿತಿಗಳಿದ್ದವು.‌ ಅದರಂತೆ, ಕುಂದಗೋಳ ಸಿಪಿಐ ಮಾರುತಿ ಗುಳಾರಿ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಕುಂದಗೋಳದಲ್ಲಿ ಹಾಲಿನ ಅಂಗಡಿ ಇಟ್ಟುಕೊಂಡಿರುವ ಸಾಗರ್, ಬೇರೆ ಕಡೆಯಿಂದ ಖೋಟಾ ನೋಟು ತಂದು ಹಾಲಿನ ವ್ಯಾಪಾರದ ಜೊತೆಗೆ ಕುಂದಗೋಳ ಸುತ್ತಮುತ್ತ ನಕಲಿ ನೋಟು ಚಲಾವಣೆ ನಡೆಸುತ್ತಿದ್ದ ಎಂದು ಪೊಲೀಸರು ಹೇಳಿದ್ದಾರೆ.

ಈತನ ಮಿಲ್ಕ್ ಪಾರ್ಲರ್ ಕುಂದಗೋಳ ಪಟ್ಟಣದ ಪೊಲೀಸ್ ಠಾಣೆಯ ಕೂಗಳತೆ ದೂರದಲ್ಲಿದ್ದು ಖೋಟಾ ನೋಟನ್ನು ಸಾರ್ವಜನಿಕರಿಗೆ ನೀಡುತ್ತಿದ್ದಾಗಲೇ ಪೊಲೀಸರು ಅರೆಸ್ಟ್​ ಮಾಡಿದ್ದಾರೆ.

Bjp leader among three arrested for fake note business in Hubbali. The police have succeeded in seizing colour printers and notes of different denominations.