ಬ್ರೇಕಿಂಗ್ ನ್ಯೂಸ್
04-10-20 09:52 pm Headline Karnataka News Network ಕ್ರೈಂ
ಮಧ್ಯ ಪ್ರದೇಶ, ಅಕ್ಟೋಬರ್.04 : ಮಧ್ಯಪ್ರದೇಶದ ದಾಮೋಹ್ ಜಿಲ್ಲೆಯಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಲ್ಲದೆ, ಘಟನೆಯ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿ ಬಿಡಲಾಗಿದೆ. ವಿಡಿಯೋ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತ ಪೊಲೀಸರು ವಿಡಿಯೋ ಹಂಚಿಕೊಂಡಿದ್ದ 25 ಜನರನ್ನು ವಶಕ್ಕೆ ಪಡೆದಿದ್ದಾರೆ.
ಪ್ರಕರಣದ ಪ್ರಮುಖ ಆರೋಪಿ ಅರುಣ್ ಪಟೇಲ್ ಮತ್ತು ಕೃತ್ಯವನ್ನು ಚಿತ್ರೀಕರಿಸಿದ 15 ವರ್ಷದ ಬಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಸೆಪ್ಟೆಂಬರ್ 22 ರಂದು ಬಾಲಕಿಯ ಮೇಲೆ ಅತ್ಯಾಚಾರ ನಡೆದಿದ್ದು, ವಿಡಿಯೋ ಇಟ್ಟುಕೊಂಡು ಬಾಲಕಿಯನ್ನು ಬ್ಲಾಕ್ ಮೇಲ್ ಮಾಡುತ್ತಿದ್ದರು ಎಂದು ಆರೋಪಿಸಲಾಗಿದೆ.
ಅಶ್ಲೀಲ ಕೃತ್ಯದ ವಿಡಿಯೋವನ್ನು ಗ್ರಾಮದ ವಾಟ್ಸಾಪ್ ಗ್ರೂಪ್‌ನಲ್ಲಿ ಪೋಸ್ಟ್ ಮಾಡಲಾಗಿದ್ದು, ತಕ್ಷಣವೇ ಎಚ್ಚೆತ್ತ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದು ವಿಡಿಯೋ ಡಿಲೀಟ್ ಮಾಡಿಸಿದ್ದಾರೆ.
ದಾಮೋಹ್ ಹೆಚ್ಚುವರಿ ಎಸ್‌ಪಿ ಶಿವ್‌ಕುಮಾರ್ ಸಿಂಗ್ ಅವರು "ನಾವು ಸೈಬರ್ ಸೆಲ್‌ನ ಸಹಾಯವನ್ನು ಪಡೆದುಕೊಂಡಿದ್ದೇವೆ ಮತ್ತು ವಾಟ್ಸಾಪ್ ಗುಂಪಿನ ಎಲ್ಲ ಸದಸ್ಯರನ್ನು ವಶಕ್ಕೆ ಪಡೆದಿದ್ದೇವೆ" ಎಂದು ಮಾಧ್ಯಮವೊಂದರಲ್ಲಿ ಹೇಳಿಕೆ ನೀಡಿದ್ದಾರೆ.
ಭಾರತೀಯ ದಂಡ ಸಂಹಿತೆ (ಐಪಿಸಿ) ಸೆಕ್ಷನ್ 376 (ಅತ್ಯಾಚಾರ) ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೊಕ್ಸೊ) ಕಾಯ್ದೆಯ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 09:55 pm
Mangalore Correspondent
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm