ಶಿವಮೊಗ್ಗದಲ್ಲಿ ಚಾಕು ತೋರಿಸಿ ಪೊಲೀಸರಿಗೆ ಹಲ್ಲೆ ಯತ್ನ ; ಕಾಲಿಗೆ ಗುಂಡು ಹಾರಿಸಿ ಇರಿತದ ಆರೋಪಿ ಬಂಧನ 

16-08-22 12:10 pm       HK News Desk   ಕ್ರೈಂ

ಶಿವಮೊಗ್ಗ ನಗರದಲ್ಲಿ ಯುವಕನಿಗೆ ಚಾಕು ಇರಿತ ಪ್ರಕರಣದ ಪ್ರಮುಖ ಆರೋಪಿಯನ್ನು ಹಿಡಿಯಲು ಹೋದ ಪೊಲೀಸರಿಗೆ ಚಾಕು ತೋರಿಸಿ ಹಲ್ಲೆಗೆ ಯತ್ನಿಸಿದ ಘಟನೆ ನಡೆದಿದ್ದು ಆರೋಪಿಯನ್ನು ಪೊಲೀಸರು ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ. 

ಶಿವಮೊಗ್ಗ, ಆಗಸ್ಟ್ 16: ಶಿವಮೊಗ್ಗ ನಗರದಲ್ಲಿ ಯುವಕನಿಗೆ ಚಾಕು ಇರಿತ ಪ್ರಕರಣದ ಪ್ರಮುಖ ಆರೋಪಿಯನ್ನು ಹಿಡಿಯಲು ಹೋದ ಪೊಲೀಸರಿಗೆ ಚಾಕು ತೋರಿಸಿ ಹಲ್ಲೆಗೆ ಯತ್ನಿಸಿದ ಘಟನೆ ನಡೆದಿದ್ದು ಆರೋಪಿಯನ್ನು ಪೊಲೀಸರು ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ. 

ಸೋಮವಾರ ಸಂಜೆ ಪ್ರೇಮ್ ಸಿಂಗ್ ಎಂಬಾತನಿಗೆ ಚಾಕು ಇರಿಯಲಾಗಿತ್ತು. ಪ್ರಕರಣದ ಪ್ರಮುಖ ಆರೋಪಿ ಜಬೀವುಲ್ಲಾ ಬಂಧನಕ್ಕೆ ತೆರಳಿದ್ದ ಪೊಲೀಸರ ಮೇಲೆಯೇ ಚೂರಿ ತೋರಿಸಿ ಹಲ್ಲೆಗೆ ಯತ್ನಿಸಿದ್ದ ಆರೋಪಿಯ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಶಿವಮೊಗ್ಗದ ತೀರ್ಥಹಳ್ಳಿ ರಸ್ತೆಯಲ್ಲಿರುವ ನಮೋ ಶಂಕರ ಲೇಔಟ್ ನಲ್ಲಿ ಘಟನೆ ನಡೆದಿದ್ದು ಪೊಲೀಸರು ಫೈರಿಂಗ್ ಮಾಡಿ ಸೆರೆಹಿಡಿದಿದ್ದಾರೆ. ಕಾಲಿಗೆ ಗುಂಡೇಟು ತಗಲಿರುವ ಆರೋಪಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.‌

ಶಿವಮೊಗ್ಗ ನಗರದಲ್ಲಿ ಸೋಮವಾರ ವಿಡಿ ಸಾವರ್ಕರ್ ಫ್ಲೆಕ್ಸ್ ಕಿತ್ತೆಸೆದ ಪುಂಡರ ಕಾರಣದಿಂದ ಉದ್ವಿಗ್ನ ವಾತಾವಣ ನೆಲೆಸಿದೆ. ಎರಡು ಕಡೆಗಳಲ್ಲಿ ಇಬ್ಬರಿಗೆ ಚೂರಿಯಿಂದ ಇರಿಯಲಾಗಿದ್ದು ಪರಿಸ್ಥಿತಿ ಹದಗೆಟ್ಟಿದೆ. ಮುಂಜಾಗ್ರತಾ ಕ್ರಮವಾಗಿ ಶಿವಮೊಗ್ಗ ನಗರ ಹಾಗೂ ಭದ್ರಾವತಿಯಲ್ಲಿ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಅಲ್ಲದೆ, ಶಿವಮೊಗ್ಗ ಮತ್ತು ಭದ್ರಾವತಿ ನಗರದ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

Shivamogga police on Tuesday fired at a suspect, Mohammed Jabi, an accused in a stabbing incident that took place on Monday as two groups clashed over displaying banners of their leaders at Amir Ahmed Circle on BH Road to mark Independence Day.