ಬ್ರೇಕಿಂಗ್ ನ್ಯೂಸ್
05-10-20 12:57 pm Headline Karnataka News Network ಕ್ರೈಂ
ನವದೆಹಲಿ, ಅಕ್ಟೋಬರ್ 5: ಹತ್ರಾಸ್ ಸಾಮೂಹಿಕ ಅತ್ಯಾಚಾರ, ಮಹಿಳೆಯ ಸಾವಿನ ಘಟನೆ ವಿರುದ್ಧ ದೇಶಾದ್ಯಂತ ಆಕ್ರೋಶ ಎದ್ದಿರುವ ನಡುವಲ್ಲೇ 25ರ ಮಹಿಳೆ ಮೇಲೆ ನಾಲ್ವರು ಸಾಮೂಹಿಕ ಅತ್ಯಾಚಾರ ಎಸಗಿ ಹಲ್ಲೆ ನಡೆಸಿದ ಮತ್ತೊಂದು ಪ್ರಕರಣ ರಾಜಧಾನಿ ದೆಹಲಿ ಹೊರವಲಯದ ಗುರುಗ್ರಾಮದಲ್ಲಿ ನಡೆದಿದೆ.
ಸಂತ್ರಸ್ತ ಮಹಿಳೆಯ ತಲೆಗೆ ತೀವ್ರ ಗಾಯವಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಕರಣ ಸಂಬಂಧ ನಾಲ್ಕು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ದಿಲ್ಲಿಯಲ್ಲಿ ವಾಸವಿದ್ದ ಈ ಮಹಿಳೆ ರಾತ್ರಿ 1:30ರ ಸುಮಾರಿಗೆ ಸಿಕಂದರಪುರ ಮೆಟ್ರೋ ಸ್ಟೇಷನ್ ಬಳಿ ನಿಂತಿದ್ದಾಗ ಈ ಘಟನೆ ನಡೆದಿದೆ. ಈ ಸಂದರ್ಭದಲ್ಲಿ ವ್ಯಕ್ತಿಯೊಬ್ಬನ ಪರಿಚಯವಾಗಿದ್ದು, ಆತನ ಬೈಕ್‌ನಲ್ಲಿ ಡಿಎಲ್‌ಎಫ್ 2ನೇ ಹಂತದಲ್ಲಿದ್ದ ಆತನ ಕಚೇರಿಗೆ ಮಹಿಳೆ ತೆರಳಿದ್ದಾಳೆ. ಕಚೇರಿಗೆ ತಲುಪಿದಾಗ ಆರೋಪಿಯ ಮೂವರು ಸ್ನೇಹಿತರು ಅಲ್ಲಿದ್ದರು. ಹೀಗಾಗಿ ಮುಜುಗರ ಅನುಭವಿಸಿದ ಮಹಿಳೆ ಅಲ್ಲಿಂದ ಹೊರಡಲು ಮುಂದಾಗಿದ್ದು ಆರೋಪಿಗಳು ಬಲವಂತವಾಗಿ ಆಕೆಯನ್ನು ತಡೆದು ಹಲ್ಲೆ ನಡೆಸಿದ್ದಾರೆ. ಮಹಿಳೆಯ ತೀವ್ರ ವಿರೋಧದ ನಡುವೆಯೂ ನಾಲ್ಕು ಮಂದಿ ಅತ್ಯಾಚಾರ ಎಸಗಿ ಹಲ್ಲೆ ನಡೆಸಿದರು ಎಂದು ಸಂತ್ರಸ್ತೆಯ ಹೇಳಿಕೆಯನ್ನು ಉಲ್ಲೇಖಿಸಿ ಪೊಲೀಸರು ಹೇಳಿದ್ದಾರೆ. ಮಹಿಳೆಗೆ ಹಲ್ಲೆಗೈದು ಗೋಡೆ ಹಾಗೂ ನೆಲಕ್ಕೆ ತಲೆಯನ್ನು ಚಚ್ಚಿದ್ದಾರೆ.
ಕೃತ್ಯ ಎಸಗಿದ ಬಳಿಕ ದುಷ್ಕರ್ಮಿಗಳು ರಸ್ತೆ ಪಕ್ಕ ಆಕೆಯನ್ನು ಬಿಟ್ಟು ಪರಾರಿಯಾಗಿದ್ದರು. ತೀವ್ರ ರಕ್ತಸ್ರಾವದಿಂದ ಬಳಲಿದ್ದ ಸಂತ್ರಸ್ತೆಯನ್ನು ನೋಡಿದ ಖಾಸಗಿ ಭದ್ರತಾ ಸಿಬ್ಬಂದಿಯೊಬ್ಬರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಪೊಲೀಸರು ಸಂತ್ರಸ್ತೆಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
31-12-25 02:35 pm
Bangalore Correspondent
ಧಾರವಾಡದ ಕೃಷಿ ವಿಶ್ವವಿದ್ಯಾಲಯಕ್ಕೆ ಚಕ್ರವರ್ತಿ ಸೂಲಿ...
30-12-25 11:12 pm
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
ಪ್ರಿಯಾಂಕ ಗಾಂಧಿ ಪುತ್ರ ರೈಹಾನ್ ಮದುವೆ ನಿಶ್ಚಿತಾರ್ಥ...
30-12-25 05:44 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
31-12-25 09:16 pm
Mangalore Correspondent
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
ಹೊಸ ವರ್ಷಾಚರಣೆ ; ಕಾರ್ಯಕ್ರಮಕ್ಕೆ ಪೂರ್ವಾನುಮತಿ ಅಗತ...
30-12-25 10:43 pm
ಯುವತಿಗೆ ಮಗು ಕರುಣಿಸಿದ ಪ್ರಕರಣ ; ಬಿಜೆಪಿಯಿಂದ ಜಗನ್...
29-12-25 11:03 pm
31-12-25 07:05 pm
Mangalore Correspondent
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm