ಬ್ರೇಕಿಂಗ್ ನ್ಯೂಸ್
18-08-22 04:49 pm HK News Desk ಕ್ರೈಂ
ಹುಬ್ಬಳ್ಳಿ, ಆಗಸ್ಟ್ 18 : ಧಾರವಾಡದ ಶಿಕ್ಷಣ ಕಾಶಿ ಎಂಬ ಖ್ಯಾತಿಗೆ ಮಸಿ ಬಳಿಯುವ ಘಟನೆ ನಡೆದಿದೆ. ವಿದ್ಯಾರ್ಥಿನಿಗೆ ಜ್ಯೂಸ್ ಎಂದು ಬಿಯರ್ ಕುಡಿಸಿ ಕಾಲೇಜೊಂದರ ಅಧ್ಯಕ್ಷನೇ ಲೈಂಗಿಕ ಶೋಷಣೆ ಎಸಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ.
ಧಾರವಾಡದ ಜಯನಗರದ ವಿಶ್ವೇಶ್ವರಯ್ಯ ಪಿಯು ವಿಜ್ಞಾನ ಕಾಲೇಜಿನಲ್ಲಿ ಘಟನೆ ನಡೆದಿದೆ. ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಬಸವರಾಜ ಯಡವಣ್ಣವರ ಹಾಗೂ ಪ್ರಾಚಾರ್ಯ ಮಹದೇವ ಕುರವತ್ತಿಗೌಡರ ವಿರುದ್ಧ ವಿದ್ಯಾರ್ಥಿನಿಯರೇ ದೂರು ನೀಡಿದ್ದಾರೆ.
ವಿದ್ಯಾರ್ಥಿನಿಯನ್ನು ಕಾಲೇಜಿನ ಅಧ್ಯಕ್ಷ ಬಸವರಾಜ್ ಪುಸಲಾಯಿಸಿ ದಾಂಡೇಲಿಗೆ ಕರೆದುಕೊಂಡು ಹೋಗಿದ್ದ ಎನ್ನಲಾಗಿದೆ. ಅಲ್ಲಿ ಜ್ಯೂಸ್ ಎಂದು ಹೇಳಿ ಬಿಯರ್ ಕುಡಿಸಿ ಆಕೆ ನಿದ್ದೆಗೆ ಜಾರಿದಾಗ ಲೈಂಗಿಕ ಕಿರುಕುಳ ನೀಡಿದ್ದಾನೆ. ಕೃತ್ಯಕ್ಕೆ ಕಾಲೇಜಿನ ಪ್ರಾಚಾರ್ಯನೇ ಸಾಥ್ ಕೊಟ್ಟಿದ್ದಾನೆ. ಈತನೇ ಅಧ್ಯಕ್ಷರ ಜೊತೆ ವಿದ್ಯಾರ್ಥಿನಿಯರನ್ನು ಕಳುಹಿಸಿ ಕೊಡುತ್ತಿದ್ದ ಅನ್ನೋ ಆರೋಪವೂ ಕೇಳಿಬಂದಿದೆ.
ಕಾಲೇಜು ಅಧ್ಯಕ್ಷ ಎಸ್ಕೇಪ್, ಪ್ರಿನ್ಸಿಪಾಲ್ ಪೊಲೀಸ್ ವಶಕ್ಕೆ!
ನೊಂದ ವಿದ್ಯಾರ್ಥಿನಿಯರು ಕಾಲೇಜು ಅಧ್ಯಕ್ಷ ಬಸವರಾಜ ಯಡವಣ್ಣವರ ಹಾಗೂ ಪ್ರಾಚಾರ್ಯ ಮಹದೇವ ಕುರವತ್ತಿಗೌಡರ ವಿರುದ್ಧ ಧಾರವಾಡ ಉಪನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರು ದಾಖಲಾಗುತ್ತಿದ್ದಂತೆ ಬಸವರಾಜ್ ಪರಾರಿಯಾಗಿದ್ದು, ಪ್ರಾಚಾರ್ಯ ಮಹದೇವನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈ ರೀತಿಯ ಘಟನೆ ಶಿಕ್ಷಣ ಕಾಶಿಯೆಂದು ಹೆಸರಾಗಿರುವ ಇಡೀ ಧಾರವಾಡಕ್ಕೆ ಕಪ್ಪು ಚುಕ್ಕೆಯಂತಾಗಿದೆ. ಧಾರವಾಡದಲ್ಲಿ ಹಲವಾರು ಕಾಲೇಜುಗಳಿದ್ದು ನೀಚ ಕೃತ್ಯದಿಂದಾಗಿ ಇಲ್ಲಿಗೆ ಕಲಿಯಲು ಬಂದಿರುವ ಇತರೇ ಹೆಣ್ಣು ಮಕ್ಕಳಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ.
At school-college or Vidya-Degula, everyone gets a sense of devotion. They say that education is important for survival. Teachers are worshiped and respected as gods. But in Dharwad, an incident like a black spot has happened for the teaching profession.An untoward incident took place at Visvesvaraya PU Science College in Jayanagar, Dharwad. A shocking fact has come to light that students are being sexually exploited in the place of education.There is also a strong allegation that if the governing body of this college hears allegations of sexual assault against the president, the principal supports it.
22-04-25 10:15 pm
Bangalore Correspondent
30 ವರ್ಷಗಳಲ್ಲಿ ಮುಸ್ಲಿಮರು, ಪರಿಶಿಷ್ಟರ ಸಂಖ್ಯೆ ದುಪ...
22-04-25 10:13 pm
Bidar SSLC Student, Blackmail: ಫುಲ್ ಮಾರ್ಕ್ ಕೊ...
22-04-25 02:37 pm
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
22-04-25 10:33 pm
HK News Desk
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 07:37 pm
Bangalore Correspondent
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm