ಬ್ರೇಕಿಂಗ್ ನ್ಯೂಸ್
24-08-22 04:15 pm Bangalore Correspondent ಕ್ರೈಂ
ಬೆಂಗಳೂರು, ಆ 24: ನಕಲಿ ಡಿಗ್ರಿ ಹಾಗೂ ಪಿಯುಸಿ ಮಾರ್ಕ್ಸ್ ಕಾರ್ಡ್‍ಗಳನ್ನು ತಯಾರಿಸಿ ಮಾರಾಟ ಮಾಡ್ತಿದ್ದ ಇಬ್ಬರು ಆರೋಪಿಗಳ ಬಂಧಿಸಲಾಗಿದೆ.
ಶೇಷಾದ್ರಿಪುರಂ ಪೊಲೀಸರು ಅಯೂಬ್ ಪಾಷ ಅಲಿಯಾಸ್ ಅಯೂಬ್ ಹಾಗೂ ಖಲೀಲ್ ವುಲ್ಲಾ ಬೇಗ್ ಅಲಿಯಾಸ್ ಖಲೀಲ್ ಎಂಬಾತರನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳು ಫೇಕ್ ಸರ್ಟಿಫಿಕೇಟ್ ಗಳನ್ನು ತಯಾರಿಸಿ 20 ಸಾವಿರ, 30 ಸಾವಿರ ರೂ.ಗೆ ಮಾರಾಟ ಮಾಡುತ್ತಿದ್ದರು. 10ನೇ ತರಗತಿ, ಪಿಯುಸಿ ಹಾಗೂ ಡಿಗ್ರಿಯ ನಕಲಿ ಅಂಕಪಟ್ಟಿಗಳನ್ನು ಮಾರಾಟ ಮಾಡುತ್ತಿದ್ದರು. ಯಾರಿಗೆ ಅವಶ್ಯಕತೆ ಇರುತ್ತದೋ ಅಂತಹವರಿಗೆ ಅಸಲಿ ತಲೆ ಮೇಲೆ ಹೊಡೆದಂತೆ ನಕಲಿ ದಾಖಲೆಗಳನ್ನು ಸೃಷ್ಟಿಸಿ ಮಾರಾಟ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.
ಸದ್ಯ 6 ಜನ ಮಾರ್ಕ್ ಕಾರ್ಡ್‍ಗಳನ್ನು ಪಡೆದಿರುವ ಫಲಾನುಭವಿಗಳು ಪತ್ತೆಯಾಗಿದ್ದಾರೆ. ಮೂಲತಃ ಚಿಕ್ಕಬಳ್ಳಾಪುರದ ಈ ಆರೋಪಿಗಳು ಶೇಷಾದ್ರಿಪುರಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಾಸವಾಗಿದ್ದರು. 2003ರಲ್ಲಿ ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಒಂದು ಕೇಸ್ ದಾಖಲಾಗಿತ್ತು.
ಸ್ಥಳೀಯ ಹುಡುಗರ ಮೂಲಕ ನಕಲಿ ದಾಖಲೆಗಳನ್ನು ಆರೋಪಿ ಖಲೀಲ್ ವುಲ್ಲಾ ಮಾರಾಟ ಮಾಡುತ್ತಿದ್ದ. ಸದ್ಯ ಇಬ್ಬರು ಬಂಧಿತರನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಿರುವ ಪೊಲೀಸರು ಈ ಬಗ್ಗೆ ಹೆಚ್ಚಿನ ಮಾಹಿತಿ ಕಲೆ ಹಾಕುತ್ತದ್ದಾರೆ. ಬಂಧಿತ ಆರೋಪಿಗಳಿಂದ 38 ನಕಲಿ ಅಂಕಪಟ್ಟಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಸಹ ಕೈಗೊಂಡಿದ್ದಾರೆ.
Bangalore Fake Degree and Puc marks card for 20 thousand, two arrested.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm