ಬ್ರೇಕಿಂಗ್ ನ್ಯೂಸ್
06-10-20 11:34 am Headline Karnataka News Network ಕ್ರೈಂ
ಕಾಸರಗೋಡು, ಅಕ್ಟೋಬರ್ 6: ಜಿಲ್ಲಾಧಿಕಾರಿ ನಿವಾಸದ ಬಳಿಯಿಂದಲೇ ಶ್ರೀಗಂಧದ ಕೊರಡುಗಳನ್ನು ಅಕ್ರಮವಾಗಿ ಸಾಗಾಟಕ್ಕೆ ಯತ್ನಿಸಿದ ಘಟನೆ ನಡೆದಿದ್ದು ಗಂಧದ ಮಾಲನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರ ಅಧಿಕೃತ ನಿವಾಸದ ಸಮೀಪದಿಂದ ಅಕ್ರಮ ಸಾಗಾಟ ಬೆಳಕಿಗೆ ಬಂದಿದೆ. ಸುಮಾರು ಒಂದು ಕ್ವಿಂಟಾಲ್ ಶ್ರೀಗಂಧ ಪತ್ತೆಯಾಗಿದ್ದು ಇದರ ಮೌಲ್ಯ ಸುಮಾರು 2.5 ಕೋಟಿ ರೂ. ಎಂದು ಅಂದಾಜಿಸಲಾಗಿದೆ.
ಇಂದು ಮುಂಜಾನೆ 4.30ರ ಸುಮಾರಿಗೆ ಜಿಲ್ಲಾಧಿಕಾರಿಯ ಮನೆಯಲ್ಲಿ ಕಾರು ಚಾಲಕ ಹಾಗೂ ಗನ್ ಮ್ಯಾನ್ ಎಚ್ಚೆತ್ತಾಗ ಮನೆ ಸಮೀಪ ಭಾರೀ ಶಬ್ದ ಕೇಳಿ ಬಂದಿತ್ತು. ಗನ್ ಮ್ಯಾನ್ ಮತ್ತು ಚಾಲಕ ಹೊರ ಬಂದು ನೋಡಿದಾಗ ಸಮೀಪದ ಮನೆಯಂಗಳದಲ್ಲಿ ಲಾರಿಗೆ ಶ್ರೀಗಂಧದ ಕೊರಡುಗಳನ್ನು ತುಂಬಿಸುತ್ತಿರುವುದು ಗಮನಕ್ಕೆ ಬಂದಿದೆ. ಬಳಿಕ ಜಿಲ್ಲಾಧಿಕಾರಿಯವರಿಗೆ ಮಾಹಿತಿ ನೀಡಿದ್ದು, ಕೂಡಲೇ ಸ್ಥಳಕ್ಕೆ ತೆರಳಿದ ಜಿಲ್ಲಾಧಿಕಾರಿ ಡಾ.ಸಜಿತ್ ಬಾಬು, ಪೊಲೀಸರ ನೆರವಿನೊಂದಿಗೆ ಅಕ್ರಮವನ್ನು ಬೆಳಕಿಗೆ ತರುವಲ್ಲಿ ಯಶಸ್ವಿಯಾಗಿದ್ದಾರೆ.
ಸಿಮೆಂಟ್ ಸಾಗಾಟದ ಲಾರಿಯಲ್ಲಿ ವಿಶೇಷ ಕ್ಯಾಬಿನ್ ನಿರ್ಮಿಸಿ ಅದರೊಳಗೆ ಶ್ರೀಗಂಧದ ಕೊರಡುಗಳನ್ನು ತುಂಬಿಸಿ ಸಾಗಿಸಲಾಗುತ್ತಿತ್ತು. ಮನೆ ಮಾಲಕ ಹಾಗೂ ಆರೋಪಿಗಳು ದಾಳಿ ಸಂದರ್ಭ ಪರಾರಿಯಾಗಿದ್ದಾರೆ. ಶ್ರೀಗಂಧವನ್ನು ಅರಣ್ಯ ಇಲಾಖೆಗೆ ಹಸ್ತಾ೦ತರಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm