ಬ್ರೇಕಿಂಗ್ ನ್ಯೂಸ್
28-08-22 05:57 pm Mangalore Correspondent ಕ್ರೈಂ
ಮಂಗಳೂರು, ಆ.28 : ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ ಅವಾಚ್ಯ ಶಬ್ದಗಳಿಂದ ಬೈದು, ಜೀವ ಬೆದರಿಕೆ ಹಾಕಿದ್ದ ಆರೋಪಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಪೋಕ್ಸೋ ನ್ಯಾಯಾಲಯ 5 ವರ್ಷ ಜೈಲು ಶಿಕ್ಷೆ ಮತ್ತು 8 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ.
ಮೂಡುಬಿದಿರೆ ತಾಲೂಕಿನ ಬೆಳುವಾಯಿ ಗ್ರಾಮದ ಕರಿಯನಂಗಡಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ರಂಜಿತ್ ಕುಮಾರ್ ಎಂಬಾತ ಜೈಲು ಶಿಕ್ಷೆಗೊಳಗಾದ ಆರೋಪಿ. ಈತ ಕಿರುಕುಳಕ್ಕೊಳಗಾದ ಬಾಲಕಿಯ ತಾಯಿ ಪಾಲಿಗೆ ಎರಡನೇ ಪತಿಯಾಗಿದ್ದು, 2019 ಮೇ 8ರಂದು ಲೈಂಗಿಕ ಕಿರುಕುಳ ನೀಡಿ ದೌರ್ಜನ್ಯ ಎಸಗಿದ್ದ ಎಂದು ಆರೋಪಿಸಲಾಗಿತ್ತು.
ಆರೋಪಿಯ ಕೃತ್ಯವನ್ನು ಪ್ರತ್ಯಕ್ಷ ಕಂಡ ಬಾಲಕಿಯ ತಾಯಿ ಪ್ರಶ್ನಿಸಿದಾಗ ರಂಜಿತ್ ಕುಮಾರ್ ಅವಾಚ್ಯ ಶಬ್ದಗಳಿಂದ ಬೈದು ಬೆದರಿಸಿದ್ದ. ಈ ಬಗ್ಗೆ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಬಾಲಕಿ ತಾಯಿ ನೀಡಿದ್ದ ದೂರಿನಂತೆ ರಂಜಿತ್ ಕುಮಾರ್ ವಿರುದ್ಧ ಪೊಕ್ಸೋ ಪ್ರಕರಣ ದಾಖಲಾಗಿತ್ತು.
ಮೂಡುಬಿದಿರೆ ಪೊಲೀಸ್ ಠಾಣೆಯ ಎಸ್ಸೈ ಸಾವಿತ್ರಿ ನಾಯಕ್ ನ್ಯಾಯಾಲಯಕ್ಕೆ ಆರೋಪಿ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ವಾದ ಪ್ರತಿವಾದ ಆಲಿಸಿದ ನ್ಯಾಯಾಧೀಶೆ ಮಂಜುಳಾ ಇಟ್ಟಿ ಆರೋಪಿಗೆ 5 ವರ್ಷ ಜೈಲು ಶಿಕ್ಷೆ ಮತ್ತು 8 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಪೊಕ್ಸೋ ಕಾಯ್ದೆಗೆ ಸಂಬಂಧಿಸಿ 5 ವರ್ಷ ಜೈಲು ಶಿಕ್ಷೆ ಮತ್ತು 5000 ರೂ. ದಂಡ, ಅತ್ಯಾಚಾರ ಪ್ರಕರಣದಲ್ಲಿ ಒಂದು ವರ್ಷ ಜೈಲು ಶಿಕ್ಷೆ ಮತ್ತು 1000 ರೂ. ದಂಡ, ಭಾ.ದಂ.ಸಂ. ಕಲಂ-504ರ ಆರೋಪಕ್ಕೆ ಸಂಬಂಧಿಸಿ 6 ತಿಂಗಳ ಜೈಲು ಶಿಕ್ಷೆ ಮತ್ತು 1000 ದಂಡ, ಭಾ.ದಂ. ಸಂ. ಕಲಂ 506ರ ಆರೋಪಕ್ಕೆ ಸಂಬಂಧಿಸಿ 6 ತಿಂಗಳ ಜೈಲು ಶಿಕ್ಷೆ ಮತ್ತು 1000 ರೂ. ದಂಡ ವಿಧಿಸಿ ಆದೇಶಿಸಿದ್ದಾರೆ. ಅಲ್ಲದೆ ನೊಂದ ಬಾಲಕಿಗೆ ಪರಿಹಾರ ನೀಡುವಂತೆಯೂ ಆದೇಶದಲ್ಲಿ ತಿಳಿಸಿದ್ದಾರೆ. ಪ್ರಾಸಿಕ್ಯೂಶನ್ ಪರವಾಗಿ ವಿಶೇಷ ಸರಕಾರಿ ಅಭಿಯೋಜಕಿ ಸಹನಾದೇವಿ ವಾದ ಮಂಡಿಸಿದ್ದರು.
Mangalore Sexual harassment on daughter by father, court announces 5 years jail with eight thousand rupees fine.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm