ಬ್ರೇಕಿಂಗ್ ನ್ಯೂಸ್
28-08-22 08:18 pm HK News Desk ಕ್ರೈಂ
ಮಧ್ಯಪ್ರದೇಶ, ಆಗಸ್ಟ್ 27: ಅಂತಾರಾಷ್ಟ್ರೀಯ ದರೋಡೆಕೋರರ ಗ್ಯಾಂಗ್ವೊಂದು ಮೊಬೈಲ್ ತುಂಬಿಕೊಂಡು ಹೊರಟಿದ್ದ ಕಂಟೈನರ್ ತಡೆದು, 12 ಕೋಟಿ ರೂಪಾಯಿ ಮೌಲ್ಯದ ಮೊಬೈಲ್ ದರೋಡೆ ಮಾಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.
ಕೃತ್ಯ ನಡೆದ ಕೇವಲ 24 ಗಂಟೆಯೊಳಗೆ ಪ್ರಕರಣ ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.ಮೊಬೈಲ್ ಫೋನ್ಗಳ ಬಾಕ್ಸ್ ತುಂಬಿಕೊಂಡು ತಮಿಳುನಾಡಿನಿಂದ ಹರಿಯಾಣದ ಗುರುಗ್ರಾಮಕ್ಕೆ ಕಂಟೈನರ್ ಹೊರಟಿತ್ತು. ಈ ವೇಳೆ, ಮಧ್ಯಪ್ರದೇಶದ ಸಾಗರ್ ಎಂಬಲ್ಲಿ ನಾಲ್ವರು ದರೋಡೆಕೋರರು ಕಳ್ಳತನ ಮಾಡಿದ್ದಾರೆ. 12 ಕೋಟಿ ರೂಪಾಯಿ ಮೌಲ್ಯದ ಮೊಬೈಲ್ ಬಾಕ್ಸ್ಗಳನ್ನು ಇನ್ನೊಂದು ಲಾರಿಗೆ ತುಂಬಿಕೊಂಡು ಪರಾರಿಯಾಗಿದ್ದರು. ಇದರ ಬಗ್ಗೆ ಮಾಹಿತಿ ಪೊಲೀಸರಿಗೆ ಗೊತ್ತಾಗುತ್ತಿದ್ದಂತೆ ಕಳ್ಳರಿಗೆ ಬಲೆ ಬೀಸಿದ್ದರು. ಗಡಿ ಜಿಲ್ಲೆ ಹಾಗೂ ಇತರೆ ಪೊಲೀಸ್ ಠಾಣೆಗಳಿಗೆ ಮಾಹಿತಿ ನೀಡಲಾಗಿದೆ. ಈ ವೇಳೆ ಮಧ್ಯಪ್ರದೇಶದ ಇಂದೋರ್ನ ಶಿಪ್ರಾ ಎಂಬಲ್ಲಿ ವಾಹನ ತಪಾಸಣೆ ವೇಳೆ ಲಾರಿ ಸಿಕ್ಕಿಬಿದ್ದಿದೆ. ಇದರ ಬೆನ್ನಲ್ಲೇ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.
ಘಟನೆಯ ಸಂಪೂರ್ಣ ವಿವರ:
ಆಗಸ್ಟ್ 25ರಂದು ಮಧ್ಯಾಹ್ನ 1 ಗಂಟೆಗೆ ಪ್ರತಿಷ್ಠಿತ ಕಂಪನಿಯ ಮೊಬೈಲ್ ತುಂಬಿಕೊಂಡು ತಮಿಳುನಾಡಿನಿಂದ ಗುರುಗ್ರಾಮಗೆ ಕಂಟೈನರ್ ತೆರಳುತ್ತಿತ್ತು. ಈ ವೇಳೆ ಮಹಾರಾಜಪುರದಿಂದ ನಗರ ತಿರಹಾ ನಡುವಿನ ರಾಷ್ಟ್ರೀಯ ಹೆದ್ದಾರಿ 44ರಲ್ಲಿ ದರೋಡೆಕೋರರು ತಡೆದು, ಮೊಬೈಲ್ ಕದ್ದಿದ್ದಾರೆ. ಸುದ್ದಿ ತಿಳಿದ ತಕ್ಷಣವೇ ಸಿನಿಮೀಯ ರೀತಿಯಲ್ಲಿ ತನಿಖೆ ಆರಂಭಿಸಿರುವ ಪೊಲೀಸರು ವಿವಿಧ ಪೊಲೀಸ್ ಠಾಣೆಗಳಿಗೆ ಮಾಹಿತಿ ನೀಡಿದ್ದಾರೆ.
ಇದರ ಬೆನ್ನಲ್ಲೇ ಇಂದೋರ್ ಬಳಿಯ ಶಿಪ್ರಾ ಬಳಿಕ ಕದ್ದ ಸರಕುಗಳ ವಾಹನ ಪತ್ತೆಯಾಗಿದ್ದು, ಆರೋಪಿಗಳು ಲಾರಿ ಬಿಟ್ಟು ಪರಾರಿಯಾಗಿದ್ದಾರೆ. ಲಾರಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ. ಮೊಬೈಲ್ ತುಂಬಿದ್ದ ಕಂಟೈನರ್ ಅನ್ನು ಪಶ್ಚಿಮ ಬಂಗಾಳದ ಚಾಲಕ ಮಿಥುನ್ ಎಂಬಾತ ತೆಗೆದುಕೊಂಡು ಹೋಗುತ್ತಿದ್ದನು. ಘಟನೆಗೆ ಸಂಬಂಧಿಸಿದಂತೆ ಗೌರ್ಜಾಮರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದರು. ಇದರ ಬೆನ್ನಲ್ಲೇ ಕಾರ್ಯಪ್ರವೃತ್ತರಾದ ಪೊಲೀಸರು ಪ್ರಕರಣವನ್ನು ಭೇದಿಸಿದ್ದಾರೆ.
Four unidentified men looted mobile phone handsets worth at least ₹ 12 crore from a Haryana-bound container truck in Madhya Pradesh's Sagar district, police said on Saturday.The looted mobile phones were seized by the police within 24 hours from another truck near Indore, over 400 km away from the spot of the crime, but the robbers are on the run.Sagar superintendent of police Tarun Nayak said the police in Gaurjhamar were informed that four unidentified robbers had abducted a truck near Maharajpur village on the national highway no. 44 on Thursday night.
11-01-25 02:11 pm
HK News Desk
Asha Strick, CM Siddaramaiah ಆಶಾ ಕಾರ್ಯಕರ್ತೆಯರ...
10-01-25 11:01 pm
G Parameshwara: ನಕ್ಸಲರು ತಮ್ಮಲ್ಲಿದ್ದ ಶಸ್ತ್ರಾಸ್...
10-01-25 07:03 pm
NT chairman SN Subrahmanyan: ಇನ್ಫೋಸಿಸ್ ನಾರಾಯಣ...
10-01-25 02:44 pm
Car Accident, Chamarajanagar: ಶಬರಿಮಲೆ ಯಾತ್ರಿಕ...
10-01-25 02:06 pm
09-01-25 12:11 pm
HK News Desk
ತಿರುಪತಿಯಲ್ಲಿ ಕಾಲ್ತುಳಿತಕ್ಕೆ ಏಳು ಸಾವು ; ವೈಕುಂಠ...
09-01-25 11:22 am
StalinCM, Lipi: ಸಿಂಧೂ ನಾಗರಿಕತೆಯ ಲಿಪಿಗಳನ್ನು ಅರ...
08-01-25 11:07 pm
Crime News, Nagpur Couple: ಮಧ್ಯರಾತ್ರಿವರೆಗೆ 26...
08-01-25 10:53 pm
ಹೊಸವರ್ಷದ ಆರಂಭದಲ್ಲೇ ಟಿಬೆಟ್ ಮಂದಿಗೆ ಭಾರಿ ಆಘಾತ ;...
07-01-25 06:32 pm
11-01-25 04:57 pm
Mangaluru Correspondent
Lava Kusha Jodukare Kambala, Mangalore; ತೃತೀಯ...
11-01-25 02:25 pm
Mangalore Annamalai, Naxals: ನಕ್ಸಲ್ ಶರಣಾಗತಿ ಬ...
11-01-25 12:44 pm
Mangalore, Missing, Marriage; ಮುಸ್ಲಿಂ ಯುವತಿಯನ...
10-01-25 11:14 pm
Mini Olympics, Mangalore- Uudpi: ಜ.17ರಿಂದ 23...
10-01-25 06:23 pm
10-01-25 11:05 pm
HK News Desk
Bangladeshi national illegal, Mangalore: ಮುಕ್...
10-01-25 09:51 pm
Mangalore Robbery, Crime, Singari Beedi: ಸಿಂಗ...
10-01-25 10:11 am
Share Market Scam, Mangalore: ಷೇರು ಮಾರುಕಟ್ಟೆ...
09-01-25 10:43 pm
Drugs, Mangalore Crime: ಗೋವಾದಿಂದ ಮಂಗಳೂರಿಗೆ ಹೈ...
09-01-25 10:32 pm