ಬ್ರೇಕಿಂಗ್ ನ್ಯೂಸ್
04-09-22 05:44 pm Bangalore Correspondent ಕ್ರೈಂ
ಬೆಂಗಳೂರು,ಸೆ.4: ಅನೈತಿಕ ಸಂಬಂಧವಿದೆ ಎಂದು ಪದೇ ಪದೇ ಅನುಮಾನಿಸುತ್ತಿದ್ದ ಗಂಡನನ್ನು ತನ್ನ ಅಕ್ಕನ ಮಗನ ಸಹಾಯದಿಂದ ಬೆಂಗಳೂರಿನಲ್ಲಿ ಕೊಂದು ಶವವನ್ನು ಊರಿಗೆ ಕೊಂಡೊಯ್ದು ನಾಟಕವಾಡಿದ ಹೆಂಡತಿಯನ್ನು ಮಂಡ್ಯದಲ್ಲಿ ಬಂಧಿಸಲಾಗಿದೆ.ಶಿಲ್ಪಾ ಬಂಧಿತ ಮಹಿಳೆ. ಮಹೇಶ್ ಕೊಲೆಯಾದವರು.
ಪತ್ನಿಯ ಶೀಲ ಶಂಕಿಸಿದ ಪತಿ ಕೊಲೆ:
ಮಂಡ್ಯ ಮೂಲದ ಮಹೇಶ್ ಮತ್ತು ಶಿಲ್ಪಾಗೆ ಎಂಟು ವರ್ಷಗಳ ಹಿಂದೆ ಮದುವೆಯಾಗಿತ್ತು. ಮದುವೆಯಾದ ಬಳಿಕ ಬೆಂಗಳೂರಿನ ಕೋಣನಕುಂಟೆ ಠಾಣಾ ವ್ಯಾಪ್ತಿಯಲ್ಲಿ ದಂಪತಿ ವಾಸವಾಗಿದ್ದರು. ಇತ್ತೀಚಿಗೆ ಶಿಲ್ಪಾ ಬೆಂಗಳೂರಲ್ಲಿ ವಾಸವಿದ್ರೆ ಕೆಲಸದ ನಿಮಿತ್ತ ಮಹೇಶ್ ಮಂಡ್ಯದಲ್ಲಿ ವಾಸವಿದ್ದ. ಆಗಾಗ ಬೆಂಗಳೂರಿಗೆ ಬಂದು ಹೋಗ್ತಿದ್ದ ಮಹೇಶ್ ಕುಡಿದು ನಿನಗೆ ಅನೈತಿಕ ಸಂಬಂಧ ಇದೆ ಎಂದು ಶಿಲ್ಪಾಗೆ ಕಾಟ ನೀಡುತ್ತಿದ್ದ. ಬೇಸತ್ತ ಶಿಲ್ಪಾ ತನ್ನ ತಾಯಿ ಬಳಿ ಹೇಳಿಕೊಂಡಿದ್ದಳು. ಕಳೆದ ಗುರುವಾರವೂ ಶಿಲ್ಪಾಳನ್ನ ಭೇಟಿಯಾಗಲು ಬಂದು ಗಲಾಟೆ ಮಾಡುತ್ತಿದ್ದ ಅಳಿಯನಿಗೆ ಬುದ್ಧಿವಾದ ಹೇಳುವಂತೆ ಶಿಲ್ಪಾಳ ತಾಯಿ ತನ್ನ ಹಿರಿಯ ಮಗಳ ಮಗ ಬಾಲಾಜಿಗೆ ಹೇಳಿದ್ದಳು.
ಬುದ್ಧಿ ಹೇಳಲು ಬಂದಿದ್ದ ಬಾಲಾಜಿ ಸಿಟ್ಟಿನಿಂದ ಮಹೇಶ್ ಮೇಲೆ ಮನಸೋ ಇಚ್ಛೆ ಹಲ್ಲೆ ಮಾಡಿದ್ದ. ಈ ವೇಳೆ ಮಹೇಶ್ ಮೃತಪಟ್ಟಿದ್ದ. ಬಳಿಕ ಮೂರ್ಛೆ ರೋಗದಿಂದ ಮಹೇಶ್ ಸಾವನ್ನಪ್ಪಿದ್ದಾನೆ ಎಂದು ಮೃತದೇಹವನ್ನು ಶಿಲ್ಪಾ ಆತನ ಹುಟ್ಟೂರಿಗೆ ತೆಗೆದುಕೊಂಡು ಹೋಗಿದ್ದಳು. ಅನುಮಾನಗೊಂಡ ಮಹೇಶ್ ಪೋಷಕರು ಮಂಡ್ಯ ಪೊಲೀಸರಿಗೆ ಮಾಹಿತಿ ರವಾನಿಸಿದ್ದರು. ವಶಕ್ಕೆ ಪಡೆದು ವಿಚಾರಿಸಿದಾಗ ಅಸಲಿ ವಿಚಾರ ಬಯಲಾಗಿದೆ. ಕೊಲೆಗೆ ಸಹಕರಿಸಿದ ಶಿಲ್ಪಾ, ಆಕೆಯ ತಾಯಿಯನ್ನ ಮಂಡ್ಯ ಪೊಲೀಸರು ವಶಕ್ಕೆ ಪಡೆದು, ಪ್ರಕರಣವನ್ನು ಕೋಣನಕುಂಟೆ ಠಾಣೆಗೆ ವರ್ಗಾಯಿಸಿದ್ದಾರೆ. ಆರೋಪಿ ಬಾಲಾಜಿ ತಲೆಮರೆಸಿಕೊಂಡಿದ್ದು ಶೋಧಕಾರ್ಯ ಮುಂದುವರೆದಿದೆ.
Bangalore Wife kills the husband with the help of a relative as he was doubting her and takes the body to Mandya stating he died of some health issue but later after the police intervened the matter came to light.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm