ಬ್ರೇಕಿಂಗ್ ನ್ಯೂಸ್
08-10-20 09:58 am Mangaluru Correspondent ಕ್ರೈಂ
ಪುತ್ತೂರು, ಅಕ್ಟೋಬರ್ 8: ಸುಳ್ಯ ಪೇಟೆಯಲ್ಲಿ ಬೆಳ್ಳಂಬೆಳ್ಳಗ್ಗೆ ಗುಂಡಿನ ಸದ್ದು ಮೊಳಗಿದ್ದು ನಗರದ ಜನತೆಯನ್ನು ಬೆಚ್ಚಿ ಬೀಳಿಸಿದೆ. ಎರಡು ವರ್ಷಗಳ ಹಿಂದೆ ನಡೆದ ಕೊಡಗಿನ ಬಿಜೆಪಿ ಮುಖಂಡ ಬಾಲಚಂದ್ರ ಕಳಗಿ ಕೊಲೆ ಆರೋಪಿಯನ್ನು ಗುಂಡು ಹಾರಿಸಿ ಕೊಲೆಗೈಯಲಾಗಿದೆ.
ಪೇಟೆ ವ್ಯಾಪ್ತಿಯ ಶಾಂತಿನಗರದಲ್ಲಿ ಮುಂಜಾನೆ ಘಟನೆ ನಡೆದಿದ್ದು ಕಾರಿನಲ್ಲಿ ಬಂದ ಅಪರಿಚಿತರು ಸಂಪತ್ ಎಂಬವರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.
ಗುಂಡೇಟು ತಗಲಿದ ವ್ಯಕ್ತಿ ಸಂಪತ್, ಈ ಹಿಂದೆ ಬಿಜೆಪಿ ಮುಖಂಡ ಬಾಲಚಂದ್ರ ಕಳಗಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದ.




ಬೆಳಗ್ಗೆ 6 ಗಂಟೆ ಸುಮಾರಿಗೆ ಸಂಪತ್ ತನ್ನ ಕಾರಿನಲ್ಲಿ ಹೊರಟಿದ್ದ ಸಂದರ್ಭ ಇನ್ನೊಂದು ಕಾರಿನಲ್ಲಿ ಬಂದಿದ್ದ ದುಷ್ಕರ್ಮಿಗಳು ಹಠಾತ್ ದಾಳಿ ನಡೆಸಿದ್ದಾರೆ. ಮೊದಲು ಕಾರಿನ ಗ್ಲಾಸಿಗೆ ಗುಂಡು ಬಿದ್ದಿದ್ದು ಅಪಾಯ ಅರಿತ ಸಂಪತ್ ಕಾರು ಬಿಟ್ಟು ತಪ್ಪಿಸಿಕೊಳ್ಳಲು ಯತ್ನ ಮಾಡಿದ್ದಾನೆ. ಸಂಪತ್ ಕೂಡಲೇ ಅಲ್ಲಿಂದ ಬೇರೊಂದು ಮನೆಯತ್ತ ಓಡಿದ್ದು ಬೆನ್ನಟ್ಟಿದ ದುಷ್ಕರ್ಮಿಗಳು ಗುಂಡು ಹಾರಿಸಿದ್ದಾರೆ. ತೀವ್ರ ಗಾಯಗೊಂಡ ಸಂಪತ್ ನನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ. ಅಲ್ಲಿ ಸಾಗಿಸುವಷ್ಟರಲ್ಲಿ ಮೃತಪಟ್ಟಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ. ಸರ್ಕಲ್ ಇನ್ಸ್ಪೆಕ್ಟರ್ ನವೀನ್ ಚಂದ್ರ ಜೋಗಿ, ಎಸ್ ಐ ಹರೀಶ್, ಹಾಗೂ ಪೋಲೀಸರು ಸ್ಥಳದಲ್ಲಿದ್ದಾರೆ.
ಎರಡು ವರ್ಷಗಳ ಹಿಂದೆ ಕೊಡಗಿನ ಬಿಜೆಪಿ ಮುಖಂಡ ಬಾಲಚಂದ್ರ ಕಳಗಿ ಕಾರಿನಲ್ಲಿ ಬರುತ್ತಿದ್ದಾಗ ಬೇರೊಂದು ವಾಹನದಲ್ಲಿ ಅಪಘಾತಕ್ಕೀಡಾಗಿಸಿ ಕೊಲೆ ಮಾಡಲಾಗಿತ್ತು.
Shootout on Samaje Kalagi Balachandra murder accused in sullia causing his death as a result. The deceased has been identified as Sampath
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm