ಬ್ರೇಕಿಂಗ್ ನ್ಯೂಸ್
17-09-22 12:56 pm HK News Desk ಕ್ರೈಂ
ಮೈಸೂರು, ಸೆ.17 : ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಹಾಗೂ ಖಾಸಗಿ ಆಸ್ತಿಗಳ ಮಾರಾಟ ಪ್ರಕರಣದಲ್ಲಿ ಪೊಲೀಸರು, ಮೈಸೂರು ನಗರ ಕಾಂಗ್ರೆಸ್ ಉಪಾಧ್ಯಕ್ಷ ರಾಜಾರಾಂ ಸೇರಿದಂತೆ ಐವರನ್ನು ಬಂಧಿಸಿದ್ದಾರೆ.
ಪ್ರಕರಣ ಸಂಬಂಧಿಸಿ ದಾಳಿ ನಡೆಸಿದ ಕುವೆಂಪು ನಗರ ಪೊಲೀಸರು, ರಾಮಕೃಷ್ಣ ನಗರದ ಐ ಬ್ಲಾಕ್ ನಲ್ಲಿರುವ ಗೋಲ್ಡನ್ ಬೆಲ್ಸ್ ಸರ್ವೀಸ್ ಅಪಾರ್ಟ್ ಮೆಂಟ್ ನಲ್ಲಿ ವಿವಿಧ ಇಲಾಖೆಗೆ ಸಂಬಂಧಿಸಿದ ಸೀಲ್, ಇ-ಸ್ಟಾಂಪ್ ಪೇಪರ್, ಸ್ಕ್ಯಾನರ್, ಪ್ರಿಂಟರ್ ಗಳನ್ನು ಪತ್ತೆ ಮಾಡಿದ್ದಾರೆ. ಬೆಂಗಳೂರಿನ ಕಟ್ಟಿಗೇನಹಳ್ಳಿ ನಿವಾಸಿ ಮಹಮ್ಮದ್ ನಯೀಮ್, ಮೈಸೂರಿನ ಮೊಹಮ್ಮದ್ ಶಹಭಾಜ್ ಮಲ್ಲಿಕ್ ಹಾಗೂ ಗಾಂಧಿನಗರ ನಿವಾಸಿ ಭಾಸ್ಕರ್ ಬಂಧಿತ ಇತರ ಆರೋಪಿಗಳಾಗಿದ್ದಾರೆ.

ಇದೇ ಆರೋಪಿಗಳು ಶಾಸಕ ರಿಜ್ವಾನ್ ಅರ್ಷದ್ ಅವರ ತಂದೆಗೆ ಮಕ್ಮಲ್ ಟೋಪಿ ಹಾಕಿದ್ದಾರೆ. ನಗರದ ಉದಯಗಿರಿ ಎಂಬಲ್ಲಿನ 80*100 ಅಡಿ ವಿಸ್ತೀರ್ಣದ ನಿವೇಶನದ ನಕಲಿ ದಾಖಲೆ ಸೃಷ್ಟಿಸಿ ಮಾರಾಟಕ್ಕೆ ಯತ್ನಿಸಿದ್ದಾರೆ. ಮುಡಾಗೆ ಸೇರಿದ ನಿವೇಶನದ ದಾಖಲೆಯನ್ನು ಕಾಂಗ್ರೆಸ್ ಮುಖಂಡ ರಾಜಾರಾಂ ಅಂಡ್ ಟೀಂ ಪೋರ್ಜರಿ ಮಾಡಿರುವುದು ಕಂಡುಬಂದಿದೆ. ಅದಲ್ಲದೆ, ಅದೇ ನಿವೇಶನ ತೋರಿಸಿ ಬ್ಯಾಂಕ್ ನಲ್ಲಿ ಸಾಲ ಪಡೆಯಲು ಯತ್ನಿಸಿದ್ದೂ ಪತ್ತೆಯಾಗಿದೆ. ಈಗಾಗಲೇ ಹಲವು ನಿವೇಶನಗಳ ನಕಲಿ ದಾಖಲೆ ಸೃಷ್ಟಿಸಿ ಮಾರಾಟ ಮಾಡಲಾಗಿದೆ.

ಪೊಲೀಸರ ವಿಚಾರಣೆ ವೇಳೆ ಸ್ಫೋಟಕ ಮಾಹಿತಿಗಳು ಬಹಿರಂಗವಾಗಿದ್ದು ಅಕ್ರಮ ದಾಖಲೆಗಳ ಮೂಲಕ ಆಸ್ತಿಗಳನ್ನ ಮಾರಾಟ ಮಾಡಿರುವುದು ತನಿಖೆ ವೇಳೆ ಪತ್ತೆಯಾಗಿದೆ. ಕಾಂಗ್ರೆಸ್ ಮುಖಂಡ ರಾಜಾರಾಂ ವಿರುದ್ಧ ಕೊಲೆ ಆರೋಪದ ಮೇಲೆ ವಿಜಯನಗರ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ. ಖಾಸಗಿ ಗನ್ ಮ್ಯಾನ್ ಪಡೆದು ಸಮಾಜದಲ್ಲಿ ಪ್ರತಿಷ್ಠಿತ ವ್ಯಕ್ತಿಯೆಂದು ರಾಜಾರಾಂ ಬಿಲ್ಡ್ ಅಪ್ ನೀಡುತ್ತಿದ್ದ. ಮೈಸೂರು ನಗರದ ಪ್ರಭಾವಿ ಕಾಂಗ್ರೆಸ್ ಮುಖಂಡನಾಗಿರುವ ರಾಜಾರಾಮ್, ಪಕ್ಷ ಸೇರ್ಪಡೆಯಾದ ಒಂದೇ ವರ್ಷಕ್ಕೆ ಕಾಂಗ್ರೆಸ್ ನಗರ ಉಪಾಧ್ಯಕ್ಷ ಸ್ಥಾನ ಪಡೆದಿದ್ದ.

ಪೋರ್ಜರಿ ದಾಖಲೆ ಸೃಷ್ಟಿಸುವುದಕ್ಕಾಗಿ ನಕಲಿ ಸೀಲ್, ಇ-ಸ್ಟ್ಯಾಂಪ್ ಪೇಪರ್ ಸೇರಿದಂತೆ ಇನ್ನಿತರ ವಸ್ತುಗಳನ್ನ ಬೆಂಗಳೂರಿನಿಂದ ತರುತ್ತಿದ್ದರು. ಎರಡು ದಿನಗಳ ಹಿಂದೆ ಪ್ರಕರಣದಲ್ಲಿ ಮೂವರನ್ನು ಬಂಧಿಸಿದ್ದ ಪೊಲೀಸರು, ಕಾಂಗ್ರೆಸ್ ಮುಖಂಡನ ಬಗ್ಗೆ ಗುರುತರ ಆರೋಪ ಕಂಡುಬಂದಿದ್ದರಿಂದ ಬಂಧಿಸಿದ್ದಾರೆ.
Fake government document racket busted, Five including congress Mysuru vice president Rajaram arrested.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm