ಬ್ರೇಕಿಂಗ್ ನ್ಯೂಸ್
04-10-22 04:24 pm HK News Desk ಕ್ರೈಂ
ಗದಗ, ಅ.04: ನಗರದ ಮುಳಗುಂದ ನಾಕಾ ಬಳಿಯ ಎಸ್.ಬಿ ಬೇಕರಿ ಎದುರು ಹಾಡಹಗಲೇ ಮಹಿಳೆಯ ಕೊಲೆ ನಡೆದಿದ್ದು ಬೆಟಗೇರಿ ಜನರು ಬೆಚ್ಚಿಬಿದ್ದಿದ್ದಾರೆ.
ನಗರದ ಗಂಗಿಮಡಿ ಬಡಾವಣೆ ನಿವಾಸಿಯಾಗಿದ್ದ ಶೋಭಾ ಲಮಾಣಿ ಅಲಿಯಾಸ್ ಮಿನಾಜ್ ಬೇಪಾರಿ ಕೊಲೆಯಾದ ಮಹಿಳೆ. ಹಳೆಯ ದ್ವೇಷದ ಹಿನ್ನೆಲೆ ಚೇತನ್ ಕುಮಾರ್ ಹಾಗೂ ರೋಹನ್ ಕುಮಾರ್ ಹತ್ಯೆ ಮಾಡಿದ್ದಾರೆ ಅಂತಾ ಎಸ್.ಪಿ ಶಿವಪ್ರಕಾಶ್ ದೇವರಾಜು ಮಾಹಿತಿ ನೀಡಿದ್ದಾರೆ.
ನ್ಯಾಯಾಲಯದ ಕಲಾಪ ಮುಗಿಸಿಕೊಂಡು ಆಟೋ ಏರಿ ಮಧ್ಯಾಹ್ನ ನಗರದ ಎಸ್.ಬಿ ಬೇಕರಿ ಬಳಿ ಬಂದಾಕೆಯ ಕತ್ತು ಸೀಳಿ ಕೊಲೆ ಮಾಡಲಾಗಿದೆ. ಮೃತ ಶೋಭಾ ಮಗುವಿಗಾಗಿ ಬೇಕರಿ ತಿನಿಸು ಖರೀದಿಸಲು ಬೇಕರಿಗೆ ಬಂದಿದ್ದರು. ಅಲ್ಲೇ ಕಾಯ್ದು ಕೂತಿದ್ದ ಇಬ್ಬರು ಆರೋಪಿಗಳು ಚಾಕುವಿನಿಂದ ಕತ್ತು ಸೀಳಿಸಿದ್ದಾರೆ.
ಘಟನೆ ಸಂಬಂಧ ಗದಗ ಶಹರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.
ಅಣ್ಣನ ಹತ್ಯೆಗೆ ಪ್ರತಿಕಾರ ;
ಗದಗ ನಗರದ ಗಂಗಿಮಡಿಯಲ್ಲಿ 2020 ರಲ್ಲಿ ರಮೇಶ್ ಕುಮಾರ್ ಎಂಬಾತನ ಕೊಲೆ ನಡೆದಿದ್ದು. ಕೊಲೆ ಕೇಸ್ ವಿಚಾರವಾಗಿ ಶೋಭಾ ಅಲಿಯಾಸ್ ಮಿನಾಜ್ ಹಾಗೂ ಗಂಡ ವಾಸೀಂ ಬೇಪಾರಿ ಈ ಕೊಲೆಯಲ್ಲಿ ಭಾಗಿಯಾಗಿದ್ದರು. ಕಳೆದ ಕೆಲ ದಿನಗಳ ಹಿಂದೆ ಜಾಮೀನಿನ ಮೇಲೆ ಇಬ್ಬರು ಹೊರ ಬಂದಿದ್ದರು. ಜಾಮೀನು ಪಡೆದ ನಂತರ ಇಬ್ಬರು ಹುಬ್ಬಳ್ಳಿಯಲ್ಲಿ ವಾಸವಿದ್ದರು.
ಕೋರ್ಟ್ ಕಲಾಪ ಇದ್ದಾಗ ಗದಗ ನಗರಕ್ಕೆ ಬರುತ್ತಿದ್ದರು. ಪ್ರಕರಣದ ವಿಚಾರಣೆಗೆ ಹುಬ್ಬಳ್ಳಿಯಿಂದ ಗದಗ ನಗರಕ್ಕೆ ಶೋಭಾ ಬಂದಿದ್ದರು ಎನ್ನಲಾಗಿದೆ. ಇದೇ ವೇಳೆಗೆ ಕಾಯುತ್ತಿದ್ದ ಆರೋಪಿಗಳಾದ ಚೇತನ್ ಕುಮಾರ್, ರೋಹನ್ ಕುಮಾರ್ ಹತ್ಯೆ ಮಾಡಿದ್ದಾರೆ.
2020 ರಮೇಶ್ ಕೊಲೆ ಹಿನ್ನೆಲೆ ಈ ಪ್ರಕರಣಕ್ಕೆ ಸಂಬಂಧಿಸಿದ ಮತ್ತಷ್ಟು ಮಾಹಿತಿಯನ್ನ ಪೊಲೀಸರು ಕಲೆಹಾಕುತ್ತಿದ್ದಾರೆ.
Revenge murder in Gadag, woman murdered after slitting throat in Bakery on her back from the court.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm