ಬ್ರೇಕಿಂಗ್ ನ್ಯೂಸ್
06-10-22 08:01 pm Mangalore Correspondent ಕ್ರೈಂ
ಮಂಗಳೂರು, ಅ.6: ಇತ್ತೀಚೆಗೆ ಮಂಗಳೂರಿಗೆ ಬಂದಿದ್ದ ಬೆಂಗಳೂರಿನ ಟೆಕ್ಕಿಯೊಬ್ಬ ಕಾಶ್ಮೀರದ ವೈಷ್ಣೋದೇವಿ ದೇವಸ್ಥಾನಕ್ಕೆ ತೆರಳಲು ಹೆಲಿಕಾಪ್ಟರ್ ಇದೆಯಾ ಎಂದು ಗೂಗಲ್ ನಲ್ಲಿ ಸರ್ಚ್ ಮಾಡಿದ್ದರು. ಈ ವೇಳೆ, ನಕಲಿ ವ್ಯಕ್ತಿಯೊಬ್ಬ ಹೆಲಿಕಾಪ್ಟರ್ ಬುಕ್ಕಿಂಗ್ ಮಾಡುವ ನೆಪದಲ್ಲಿ ಹಣ ಪಡೆದು ವಂಚಿಸಿದ ಬಗ್ಗೆ ಮಂಗಳೂರಿನ ಸೈಬರ್ ಠಾಣೆಯಲ್ಲಿ ಕೇಸು ದಾಖಲಾಗಿದೆ.
ಕಳೆದ ಮಾರ್ಚ್ 3ರಂದು ಬೆಂಗಳೂರಿನಲ್ಲಿ ಕೆಲಸ ಮಾಡುವ ಐಟಿ ಸಾಫ್ಟ್ ವೇರ್ ತಂತ್ರಜ್ಞರೊಬ್ಬರು ಮಂಗಳೂರಿಗೆ ಬಂದಿದ್ದರು. ಮಂಗಳೂರಿನಲ್ಲಿ ಸುತ್ತಾಡಿದ ಬಳಿಕ ಜಮ್ಮು ಕಾಶ್ಮೀರದ ವೈಷ್ಣೋದೇವಿ ದೇವಸ್ಥಾನಕ್ಕೆ ತೆರಳಲು ನೇರವಾದ ವಿಮಾನ ಸೌಲಭ್ಯ ಇದೆಯೇ ಎಂದು ಸರ್ಚ್ ನಡೆಸಿದ್ದಾರೆ. ಈ ವೇಳೆ, ವಿಮಾನ ಇಲ್ಲದೇ ಇರುವಾಗ ಖಾಸಗಿ ಹೆಲಿಕಾಪ್ಟರ್ ಇದೆಯೇ ಎಂದು ಸರ್ಚ್ ಮಾಡಿದ್ದರು.
ಗೂಗಲ್ ನಲ್ಲಿ ಸರ್ಚ್ ಮಾಡಿದ ವೇಳೆ ಹೆಲಿಕಾಪ್ಟರ್ ಬುಕ್ಕಿಂಗ್ ಮಾಡುವ ವೆಬ್ ಸೈಟ್ ತೆರೆದುಕೊಂಡಿದ್ದು, ಸಂಪರ್ಕಿಸಿದಾಗ ನಿತಿನ್ ಎಂದು ತನ್ನನ್ನು ಪರಿಚಯಿಸಿದ್ದ ವ್ಯಕ್ತಿ ಫೋನ್ ಕರೆಗೆ ಸಿಕ್ಕಿದ್ದಾನೆ. ಆತ ಕಾಪ್ಟರ್ ಬುಕ್ಕಿಂಗ್ ಮಾಡಲು ಹಣ ನೀಡಬೇಕೆಂದು ಹೇಳಿದ್ದು, ಕ್ಯೂಆರ್ ಕೋಡ್ ಕಳಿಸಿದ್ದಾನೆ. ಬುಕ್ಕಿಂಗ್ ಅಡ್ವಾನ್ಸ್ ಎಂದು 38,060 ರೂಪಾಯಿ ಕಳಿಸಿಕೊಡಲು ಹೇಳಿದ್ದು, ಹಣವನ್ನು ಈ ವ್ಯಕ್ತಿ ಕಳಿಸಿದ್ದಾರೆ. ಆನಂತರ, ಫೋನ್ ಕರೆ ಮಾಡಿದಾಗ ನಿತಿನ್ ಎಂದು ಹೇಳಿಕೊಂಡಿದ್ದ ವ್ಯಕ್ತಿಯ ಫೋನ್ ಸ್ವಿಚ್ ಆಫ್ ಆಗಿತ್ತು. ಆತ ತನ್ನನ್ನು ವೈಷ್ಣೋದೇವಿ ದೇವಸ್ಥಾನದ ಪ್ರತಿನಿಧಿಯೆಂದೂ ಹೇಳಿಕೊಂಡಿದ್ದ. ಮೋಸ ಹೋದ ಟೆಕ್ಕಿ ಆನಂತರ ವೈಷ್ಣೋದೇವಿ ದೇವಸ್ಥಾನದಲ್ಲಿ ಸಂಪರ್ಕಿಸಿದಾಗ, ತಮಗೆ ಯಾವುದೇ ಅಂತಹ ಪ್ರತಿನಿಧಿ ಇಲ್ಲವೆಂದು ಉತ್ತರ ನೀಡಿದ್ದಾರೆ. ಅದರಂತೆ, ಐಟಿ ಉದ್ಯೋಗಿ ತಾನು ಮೋಸ ಹೋಗಿದ್ದು ಅರಿವಿಗೆ ಬಂದಿದ್ದು ಮಂಗಳೂರಿನಲ್ಲಿಯೇ ಬಂದು ಸೈಬರ್ ಠಾಣೆಯಲ್ಲಿ ದೂರು ನೀಡಿದ್ದಾರೆ.
An IT consultant working in Bengaluru, who searched internet for booking a helicopter for Vaishno Devi Temple visit on Google, was cheated by an online fraud. The complainant had arrived in Mangaluru on March 3, and the next day he had searched for information regarding helicopter booking, for travel to the Vaishno Devi Temple on Google. From the search results, he got in touch with one Nithin, who introduced himself as a representative of the Vaishno Devi Temple Board.
03-10-26 05:30 pm
HK News Staffer
Urdu Habba Row: ವಿಧಾನಸೌಧ ಮೆಟ್ಟಿಲುಗಳಲ್ಲಿ ಉರ್ದು...
01-10-26 10:50 pm
‘ಕನ್ನಡದ ಶಿವಮಣಿ’ ಖ್ಯಾತಿಯ ಡ್ರಮ್ಮರ್ ದೇವ್ ನಿಧನ ;...
27-09-26 03:21 pm
ಬೆಂಗಳೂರಿಗೆ ಬಂದ ಶಾಸಕರೆಲ್ಲ ಎರಡೆರಡು ಮದುವೆಯಾಗಿದ್ದ...
25-09-26 04:49 pm
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
04-10-26 07:07 pm
HK News Staffer
Smith Machar, benjamin netanyahu: ಸ್ಮಿತ್ ಮಚ್ಚ...
04-10-26 12:34 pm
Smith Machar, Mankind Pharma: 180 ಜೀವ ಉಳಿಸಿದ...
03-10-26 01:00 pm
ಹನುಮಾನ್ ಚಾಲೀಸಾ ಜಪಿಸುತ್ತಲೇ ಕಾಕ್ಪಿಟ್ ಬಾಗಿಲು ತೆ...
02-10-26 05:28 pm
ಇಸ್ರೇಲ್ ತೆರಳುತ್ತಿದ್ದ ವಿಮಾನ ಹೈಜಾಕ್ ಯತ್ನ ? ಒಮಾ...
02-10-26 10:23 am
03-10-26 09:56 pm
HK News Staffer
Tammanna Shetty, mysore kambala: ಮೈಸೂರು ದಸರಾ...
03-10-26 01:27 pm
KSCA, Mangaluru: ಮಂಗಳೂರಿನಲ್ಲಿ ಅಂತಾರಾಷ್ಟ್ರೀಯ ಕ...
02-10-26 05:20 pm
Sowjanya case, Lokesh Jagalsar: ಸೌಜನ್ಯ ಪ್ರಕರಣ...
02-10-26 10:25 am
Madoor Yusuf Murder Case: ಜೈಲಿನಲ್ಲಿ ಮಾಡೂರು ಯೂ...
01-10-26 10:45 pm
04-10-26 12:51 pm
HK News Staffer
ಪುತ್ತೂರು ; ವಿದ್ಯುತ್ ಸ್ಪರ್ಶಿಸಿ ಪವರ್ಮ್ಯಾನ್ ಸಾ...
03-10-26 08:46 pm
Mangalore Crime, Mangalore Police, Delhi Thie...
03-10-26 06:39 pm
Kasaragod crime: ಕಾಸರಗೋಡು ; ಮನೆ ಮೇಲೆ ಬಿದ್ದ ಬೋ...
03-10-26 05:05 pm
Infra Developers, Vasudevan: ಬೆಂಗಳೂರಿನಲ್ಲಿ ಫ್...
03-10-26 03:41 pm