ಬ್ರೇಕಿಂಗ್ ನ್ಯೂಸ್
08-10-22 05:07 pm HK News Desk ಕ್ರೈಂ
ಕೊಚ್ಚಿ, ಅ.8: ಅಫ್ಘಾನಿಸ್ತಾನದಲ್ಲಿ ತಯಾರಿಸಿದ ಅಂದಾಜು 1200 ಕೋಟಿ ರೂಪಾಯಿ ಮೌಲ್ಯದ 200 ಕೆಜಿ ಹೆರಾಯಿನ್ ಅನ್ನು ಭಾರತದ ನೌಕಾಪಡೆ ಹಾಗೂ ಮಾದಕ ದ್ರವ್ಯ ನಿಯಂತ್ರಣ ಸಂಸ್ಥೆ (ಎನ್‌ಸಿಬಿ) ಜಂಟಿಯಾಗಿ ಕಾರ್ಯಾಚರಣೆ ನಡೆಸಿ, ವಶಕ್ಕೆ ಪಡೆದುಕೊಂಡಿದೆ
ಇರಾನ್ ಹಡಗಿನಲ್ಲಿ ಹೆರಾಯಿನ್ ತುಂಬಿಕೊಂಡು ಪಾಕಿಸ್ತಾನ ಮಾರ್ಗವಾಗಿ ಭಾರತಕ್ಕೆ ತರಲಾಗುತ್ತಿತ್ತು. ಹೆರಾಯಿನ್ ಅನ್ನು ಭಾರತ ಮತ್ತು ಶ್ರೀಲಂಕಾದಲ್ಲಿ ಮಾರಾಟ ಮಾಡುವ ಪ್ರಯತ್ನ ನಡೆದಿತ್ತು. ಸದ್ಯ ಅಷ್ಟೂ ಡ್ರಗ್ಸ್ ಅನ್ನು ಸೀಜ್ ಮಾಡಿರುವ ಅಧಿಕಾರಿಗಳು 6 ಇರಾನ್ ಪ್ರಜೆಗಳನ್ನು ಬಂಧಿಸಿದ್ದಾರೆ.

ಡ್ರಗ್ಸ್ ಅನ್ನು ಜಲನಿರೋಧಕ, ಏಳು ಪದರದ ಪ್ಯಾಕೇಜಿಂಗ್‌ನಲ್ಲಿ ಇರಾನಿನ ಹಡಗಿನಲ್ಲಿ ಸಾಗಿಸಿ, ಅದನ್ನು ಶ್ರೀಲಂಕಾದ ಹಡಗಿಗೆ ವರ್ಗಾಯಿಸಲು ಮುಂದಾಗಿದ್ದರು. ಆದರೆ, ಗುರುವಾರ ಕೇರಳದ ಕೊಚ್ಚಿಯಲ್ಲಿ ನೌಕಾಪಡೆ ಮತ್ತು ಎನ್‌ಸಿಬಿ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ದೊಡ್ಡ ಡ್ರಗ್ಸ್ ಜಾಲವೇ ಸಿಕ್ಕಿಬಿದ್ದಿದೆ ಎಂದು ಎನ್ಸಿಬಿಯ ಹಿರಿಯ ಅಧಿಕಾರಿ ಸಂಜಯ್ ಕುಮಾರ್ ಸಿಂಗ್ ತಿಳಿಸಿದ್ದಾರೆ.
ಡ್ರಗ್ಸ್ ಪ್ಯಾಕೆಟ್‌ಗಳು ಅಫ್ಘಾನಿಸ್ತಾನ ಮತ್ತು ಪಾಕಿಸ್ತಾನದ ಕಾರ್ಟೆಲ್‌ಗಳಿಗೆ ವಿಶಿಷ್ಟವಾದ ಗುರುತುಗಳು ಮತ್ತು ಪ್ಯಾಕಿಂಗ್ ವಿಶೇಷತೆಗಳನ್ನು ಹೊಂದಿವೆ ಎಂದು ಅಧಿಕಾರಿ ಹೇಳಿದರು. ಕೆಲವು ಡ್ರಗ್ ಪ್ಯಾಕೆಟ್‌ಗಳ 'ಚೇಳು' ಸೀಲ್ ಗುರುತುಗಳನ್ನು ಹೊಂದಿದ್ದರೆ, ಇತರವುಗಳು 'ಡ್ರ್ಯಾಗನ್' ಸೀಲ್ ಗುರುತುಗಳನ್ನು ಹೊಂದಿದ್ದವು ಎಂದು ತಿಳಿಸಿದರು.
ಬಹುಶಃ ಹೆರಾಯಿನ್ ಅನ್ನು ಮೊದಲು ಪಾಕಿಸ್ತಾನದಿಂದ ದೋಣಿಯಲ್ಲಿ ಕಳುಹಿಸಲಾಗಿದೆ. ಇದಾದ ಬಳಿಕ ಮಾರ್ಗ ಮಧ್ಯೆ ಇರಾನ್ ಹಡಗಿಗೆ ಡ್ರಗ್ಸ್ ವಿನಿಮಯ ಮಾಡಲಾಗಿದೆ. ನಂತರ ಶ್ರೀಲಂಕಾದ ಹಡಗಿಗೆ ವಿನಿಮಯ ಮಾಡಿಕೊಳ್ಳುವಷ್ಟರಲ್ಲಿ ಭಾರತೀಯ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದೆ. ಅಲ್ಲದೆ, ಇರಾನ್ ಹಡಗಿನಲ್ಲಿದ್ದ ವ್ಯಕ್ತಿಗಳು ಸಮುದ್ರಕ್ಕೆ ಹಾರಿ ತಪ್ಪಿಸಿಕೊಳ್ಳಲು ಮತ್ತು ಹೆರಾಯಿನ್ ಅನ್ನು ನೀರಿನಲ್ಲಿ ಎಸೆಯಲು ಪ್ರಯತ್ನಿಸಿದರು ಎಂದು ಎನ್‌ಸಿಬಿ ಅಧಿಕಾರಿ ಸಿಂಗ್ ಹೇಳಿದ್ದಾರೆ.
In a joint operation with the Indian Navy, the Narcotics Control Bureau intercepted an Iranian fishing vessel off the coast of Kochi and seized 200 kg of Afghan-origin heroin, worth about 1200 crore rupees in the international market. Six crew members of the boat, all Iranian nationals, have been taken into custody and are being interrogated.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm