ಬ್ರೇಕಿಂಗ್ ನ್ಯೂಸ್
11-10-22 12:42 pm Mangalore Correspondent ಕ್ರೈಂ
ಉಳ್ಳಾಲ, ಅ.11: ಗಣಿ ಇಲಾಖೆಯವರು ಜಪ್ತಿ ಪಡಿಸಿದ್ದ ಮರಳನ್ನು ಮಧ್ಯರಾತ್ರಿ ದಂಧೆಕೋರರೇ ಅಕ್ರಮವಾಗಿ ಸಾಗಿಸುತ್ತಿದ್ದ ಪ್ರಸಂಗ ಬೆಳಕಿಗೆ ಬಂದಿದ್ದು ಇದನ್ನ ಪ್ರಶ್ನಿಸಲು ಹೋದ ವ್ಯಕ್ತಿಯನ್ನು ಟಿಪ್ಪರ್ ಡಿಕ್ಕಿಯಾಗಿಸಿ ಕೊಲೆಗೆ ಯತ್ನಿಸಿದ ಘಟನೆ ನಿನ್ನೆ ರಾತ್ರಿ ಉಚ್ಚಿಲ ರೈಲ್ವೇ ಗೇಟ್ ಬಳಿ ನಡೆದಿದೆ.
ಮರಳು ದಂಧೆಕೋರರ ವಿರುದ್ಧ ರೊಚ್ಚಿಗೆದ್ದ ಸ್ಥಳೀಯರು ರಾತ್ರಿಯೇ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮರಳು ಸಾಗಾಟದ ಟಿಪ್ಪರ್ ಡಿಕ್ಕಿಯಾದ ಪರಿಣಾಮ ಸ್ಕೂಟರ್ ಸವಾರ ಉಚ್ಚಿಲ ನಿವಾಸಿ ಕಿಶೋರ್(52) ಗಂಭೀರ ಗಾಯಗೊಂಡು ದೇರಳಕಟ್ಟೆ ಆಸ್ಪತ್ರೆಗೆ ದಾಖಲಾಗಿದ್ದಾರೆ.


ಉಚ್ಚಿಲದ ಬಟ್ಟಂಪಾಡಿ ಎಂಬಲ್ಲಿ ಅಕ್ರಮವಾಗಿ ದಾಸ್ತಾನಿರಿಸಿದ್ದ ಮರಳನ್ನು ಇತ್ತೀಚೆಗೆ ಗಣಿ ಇಲಾಖೆ ಅಧಿಕಾರಿಗಳು ಜಪ್ತಿ ಮಾಡಿದ್ದರು. ಆದರೆ ಜಪ್ತಿಗೊಳಿಸಿದ್ದ ಮರಳನ್ನೇ ರಾತ್ರಿ ವೇಳೆ ಸದ್ದಿಲ್ಲದೆ ಬೇರೆಡೆ ಸಾಗಿಸಲಾಗುತ್ತಿದ್ದು ಪ್ರಶ್ನಿಸಲು ಹೋದವರಿಗೆ ಇಲಾಖೆಯ ಆದೇಶವಿದೆ ಎಂದು ದಂಧೆಕೋರರು ಬೆದರಿಸಿ, ಹಲ್ಲೆ ಮಾಡಲು ಮುಂದಾಗುತ್ತಿದ್ದಾರೆಂದು ಸ್ಥಳೀಯರು ಆರೋಪಿಸಿದ್ದಾರೆ.


ಉಚ್ಚಿಲದ ರೈಲ್ವೇ ಗೇಟ್ ಬಳಿ ನಿನ್ನೆ ರಾತ್ರಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಟಿಪ್ಪರನ್ನ ಕಿಶೋರ್ ಅವರು ತನ್ನ ಸ್ಕೂಟರಲ್ಲಿ ಬೆನ್ನಟ್ಟಿದ್ದು, ಇದನ್ನ ಗಮನಿಸಿದ ಟಿಪ್ಪರ್ ಚಾಲಕ ಹಠತ್ತಾಗಿ ಬ್ರೇಕ್ ಹೊಡೆದು ಅಪಘಾತ ನಡೆಸಿದ್ದಾನೆ. ತಕ್ಷಣ ಸ್ಥಳೀಯರು ಜಮಾಯಿಸಿದ್ದು ಟಿಪ್ಪರನ್ನ ತಡೆದು ಪ್ರತಿಭಟನೆ ನಡೆಸಿದ್ದಾರೆ. ಸ್ಥಳಕ್ಕೆ ಬಂದ ಉಳ್ಳಾಲ ಠಾಣಾ ಪಿಎಸ್ಸೈ ಪ್ರದೀಪ್ ಟಿ.ಆರ್ ಮರಳು ದಂಧೆಕೋರರ ಪರ ಬ್ಯಾಟಿಂಗ್ ನಡೆಸಿದ್ದು, ಉದ್ರಿಕ್ತ ಸ್ಥಳೀಯರು ಪಿಎಸ್ಸೈಯನ್ನ ತರಾಟೆಗೆ ತೆಗೆದಿದ್ದಾರೆ. ಜನರ ಆಕ್ರೋಶಕ್ಕೆ ಬಗ್ಗಿದ ಪೊಲೀಸರು ಅಪಘಾತಕ್ಕೆ ಕಾರಣವಾದ ಟಿಪ್ಪರ್ ಮತ್ತು ಚಾಲಕನನ್ನ ವಶಕ್ಕೆ ಪಡೆದಿದ್ದಾರೆ.
ಪೋಲೀಸರು, ಅಧಿಕಾರಿಗಳು ಅಕ್ರಮ ಮರಳು ಸಾಗಾಟದ ಪರ ವಹಿಸಿದ್ದು, ರಾತ್ರಿಯಿಂದ ಬೆಳಗ್ಗಿನ ವರೆಗೂ ಅಕ್ರಮ ಮರಳು ಸಾಗಾಟವಾಗುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
Mangalore Illegal sand mining in Ullal, seized sand robbed, truck rams two wheeler that hinders, people protest.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm