ಕೇರಳದಲ್ಲಿ ಜೈಲಿನಿಂದ ತಪ್ಪಿಸಿಕೊಂಡಿದ್ದ ಕೈದಿ ಬ್ರಹ್ಮಾವರದಲ್ಲಿ ಪತ್ತೆ ; ಬಾಲಕಿ ಕೊಲೆಗೈದು ಜೀವಾವಧಿ ಶಿಕ್ಷೆಗೀಡಾಗಿದ್ದ ಆರೋಪಿ 

18-10-22 11:13 pm       Udupi Correspondent   ಕ್ರೈಂ

ಕೇರಳದಲ್ಲಿ ಬಾಲಕಿಯ ಅತ್ಯಾಚಾರಗೈದು ಕೊಲೆ ನಡೆಸಿದ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಆರೋಪಿ ಜೈಲಿನಿಂದ ತಪ್ಪಿಸಿಕೊಂಡಿದ್ದ.  

ಉಡುಪಿ, ಅ.18 : ಕೇರಳದಲ್ಲಿ ಬಾಲಕಿಯ ಅತ್ಯಾಚಾರಗೈದು ಕೊಲೆ ನಡೆಸಿದ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಆರೋಪಿ ಜೈಲಿನಿಂದ ತಪ್ಪಿಸಿಕೊಂಡಿದ್ದ. ಎರಡು ವರ್ಷಗಳಿಂದ ಪೊಲೀಸರ ಕೈಗೆ ಸಿಗದೆ ನಾಪತ್ತೆಯಾಗಿದ್ದ ಆರೋಪಿ ಈಗ ಬ್ರಹ್ಮಾವರದಲ್ಲಿ ಪತ್ತೆಯಾಗಿದ್ದು ಉಡುಪಿ ಪೊಲೀಸರು ಬಂಧಿಸಿದ್ದಾರೆ. 

ಕೇರಳ ರಾಜಧಾನಿ ತಿರುವಂತಪುರಂ ಜಿಲ್ಲೆಯ ರಾಜೇಶ (39) ಬಂಧಿತ. ರಾಜೇಶ್ 2012ರಲ್ಲಿ ತಿರುವಂತಪುರಂ ಗ್ರಾಮಾಂತರ ಜಿಲ್ಲೆಯ ವಾಟಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದನು. ಈ ಬಗ್ಗೆ ನ್ಯಾಯಾಲಯವು ತ್ವರಿತಗತಿಯಲ್ಲಿ ವಿಚಾರಣೆ ನಡೆಸಿ 2013ರಲ್ಲಿ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಿ ತೀರ್ಪು ನೀಡಿತ್ತು, ನಂತರ ಶಿಕ್ಷೆಯನ್ನು ಜೀವಾವಧಿ ಶಿಕ್ಷೆಗೆ ಮಾರ್ಪಾಡು ಮಾಡಲಾಗಿತ್ತು.

ತಿರುವಂತಪುರಂ ಕೇಂದ್ರ ಕಾರಾಗೃಹದಲ್ಲಿದ್ದ ಕೈದಿಯನ್ನು ನಂತರ ನೆಟ್ಟುಕತಾರಿ ಜೈಲಿಗೆ ವರ್ಗಾಯಿಸಲಾಗಿತ್ತು. 2020ರ ಡಿ.23 ರಂದು ಜೈಲಿ ನಿಂದ ತಪ್ಪಿಸಿಕೊಂಡಿದ್ದ. ಈ ಬಗ್ಗೆ ನೇಯಾರ್ ಡ್ಯಾಮ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಾಲಾಗಿತ್ತು. ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೈದಿ ಉಡುಪಿಯಲ್ಲಿ ವಾಸವಾಗಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಬ್ರಹ್ಮಾವರ ಪೊಲೀಸರು ಕೇರಳ ಪೊಲೀಸರಿಗೆ ಮಾಹಿತಿ ನೀಡಿದ್ದರು. ಬ್ರಹ್ಮಾವರ ತಾಲ್ಲೂಕಿನ ಬಿಲ್ಲಾಡಿ ಗ್ರಾಮದ ಕಬ್ಬಿನ ಹಿತ್ಲು ಎಂಬಲ್ಲಿ ವಶಕ್ಕೆ ಪಡೆದು ಕೇರಳ ಪೊಲೀಸರಿಗೆ ಮಾಹಿತಿ ನೀಡಿತ್ತು. ಕೇರಳ ಪೊಲೀಸರು ಮಂಗಳವಾರ ಆರೋಪಿ ರಾಜೇಶನನ್ನು ವಶಕ್ಕೆ ಪಡೆದು ಕುಂದಾಪುರ ನ್ಯಾಯಾಲಯದ ಮುಂದೆ ಹಾಜರು ಪಡಿಸಿ ಕೇರಳಕ್ಕೆ ಕರೆದುಕೊಂಡು ಹೋಗಿದ್ದಾರೆ.

Rape accused escaped from Kerala jail found in Udupi.