ಬ್ರೇಕಿಂಗ್ ನ್ಯೂಸ್
21-10-22 01:47 pm Mangalore Correspondent ಕ್ರೈಂ
ಮಂಗಳೂರು, ಅ.21: ಅಪ್ರಾಪ್ತ ವಯಸ್ಕ ಬಾಲಕಿಯ ಜೊತೆ ಸ್ನೇಹ ಸಂಪಾದಿಸಿ, ಆಕೆಯ ಆತ್ಮಹತ್ಯೆಗೆ ಕಾರಣವಾಗಿದ್ದ ಜಿಲ್ಲಾ ಸಶಸ್ತ್ರ ಮೀಸಲು ಪೊಲೀಸ್ ಪಡೆಯ ಕಾನ್ಸ್ ಟೇಬಲ್ ಒಬ್ಬರಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಜಿಲ್ಲಾ ಮೀಸಲು ಪಡೆಯಲ್ಲಿ ಹೆಡ್ ಕಾನ್ಸ್ ಟೇಬಲ್ ಆಗಿದ್ದ ಬಜ್ಪೆ ನಿವಾಸಿ ಪ್ರವೀಣ್ ಸಾಲ್ಯಾನ್(35) ಜೀವಾವಧಿ ಶಿಕ್ಷೆಗೊಳಗಾದ ವ್ಯಕ್ತಿ.
ಬಜ್ಪೆ ಸಿದ್ದಾರ್ಥ ನಗರ ನಿವಾಸಿ ಪ್ರವೀಣ್ ಸಾಲ್ಯಾನ್ 2015ರ ಫೆಬ್ರವರಿ ತಿಂಗಳಲ್ಲಿ ಅಪ್ರಾಪ್ತ ವಯಸ್ಕ ಬಾಲಕಿಯನ್ನು ಫೇಸ್ಬುಕ್ ನಲ್ಲಿ ಪರಿಚಯ ಮಾಡಿಕೊಂಡಿದ್ದು, ಆನಂತರ ತಾನು ಪ್ರೀತಿಸುವುದಾಗಿ ನಾಟಕ ಮಾಡಿದ್ದ. ಮೊಬೈಲ್ ಸಂಖ್ಯೆ ಪಡೆದು ಆಕೆಯೊಂದಿಗೆ ನಿರಂತರ ಸಂಪರ್ಕದಲ್ಲಿದ್ದ. ಈ ನಡುವೆ, ತನ್ನ ಗುಪ್ತಾಂಗದ ಚಿತ್ರಗಳನ್ನು ಕಳುಹಿಸಿ ಆಕೆಯ ಜೊತೆಗೆ ಅಶ್ಲೀಲ ಸಂಭಾಷಣೆಗಳನ್ನು ನಡೆಸುತ್ತಿದ್ದ.
ಬಳಿಕ ಆಕೆಯಲ್ಲಿ ಒಂದು ಲಕ್ಷ ರೂ. ಹಣ ನೀಡಬೇಕು ಎಂದು ಬ್ಲಾಕ್ಮೇಲ್ ಮಾಡಿದ್ದ. ಇದರಿಂದ ಆತಂಕಗೊಂಡಿದ್ದ ಯುವತಿ 2015ರ ಜೂನ್ 10ರಂದು ನಸುಕಿನಲ್ಲಿ ತನ್ನ ಮನೆಯ ಬೆಡ್ ರೂಮಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಳು. ಘಟನೆಗೆ ಸಂಬಂಧಿಸಿ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆತ್ಮಹತ್ಯೆಗೂ ಮುನ್ನ ಯುವತಿ ಡೆತ್ ನೋಟ್ ಬರೆದಿದ್ದು, ಅದರಲ್ಲಿ ತನ್ನ ಸಾವಿಗೆ ಪ್ರವೀಣ್ ಸಾಲ್ಯಾನ್ ಕಾರಣವೆಂದು ಸ್ಪಷ್ಟವಾಗಿ ನಮೂದಿಸಿದ್ದಳು. ವಿಚಾರಣೆ ನಡೆಸಿದ್ದ ಪೊಲೀಸರು ಆಕೆಯ ಡೆತ್ ನೋಟ್, ಮೊಬೈಲಿನಲ್ಲಿದ್ದ ಆಕೆಯೊಂದಿಗೆ ಸಂಭಾಷಣೆ ನಡೆಸಿದ್ದ ಸಾಕ್ಷ್ಯಗಳನ್ನು ಆಧರಿಸಿ ದೋಷಾರೋಪ ಸಲ್ಲಿಸಿದ್ದರು.
ವಿಚಾರಣೆ ನಡೆಸಿದ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶೆ ಮಂಜುಳಾ ಇಟ್ಟಿ, ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದ್ದಾರೆ. ಐಪಿಸಿ ಸೆಕ್ಷನ್ 305ರಡಿ ಜೀವಾವಧಿ ಶಿಕ್ಷೆ ಹಾಗೂ 80 ಸಾವಿರ ರೂ. ದಂಡ, ಸೆಕ್ಷನ್ 12ರ ಪೋಕ್ಸೋ ಕಾಯ್ದೆಯಡಿ 3 ವರ್ಷ ಕಠಿಣ ಸಜೆ, ಒಂದು ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಸರಕಾರದ ಪರವಾಗಿ ವಿಶೇಷ ಸರಕಾರಿ ಅಭಿಯೋಜಕಿ ಸಹನಾದೇವಿ ವಾದ ಮಂಡಿಸಿದ್ದರು.
Praveen Salian (35), a police constable of District Armed Reserve (DAR) police, was sentenced to life imprisonment as the accusation of sexual harassment and abetting suicide of a minor girl on him was proved in the court.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm