ಸಮಸ್ಯೆ ಹೇಳಲು ಬಂದ ಮಹಿಳೆಗೆ ಕೆನ್ನೆಗೆ ಹೊಡೆದ ವಸತಿ ಸಚಿವ ಸೋಮಣ್ಣ ! ವಿಡಿಯೋ ವೈರಲ್

23-10-22 05:11 pm       HK News Desk   ಕ್ರೈಂ

ಹಕ್ಕುಪತ್ರ ವಿತರಣೆ ಕಾರ್ಯಕ್ರಮದಲ್ಲಿ ಸಮಸ್ಯೆ ಹೇಳಲು ಬಂದಿದ್ದ ಮಹಿಳೆಯೊಬ್ಬರಿಗೆ ವಸತಿ ಸಚಿವ ಸೋಮಣ್ಣ ಕೆನ್ನೆಗೆ ಬಾರಿಸಿದ ಘಟನೆ ನಡೆದಿದ್ದು, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಚಾಮರಾಜನಗರ, ಅ.23: ಹಕ್ಕುಪತ್ರ ವಿತರಣೆ ಕಾರ್ಯಕ್ರಮದಲ್ಲಿ ಸಮಸ್ಯೆ ಹೇಳಲು ಬಂದಿದ್ದ ಮಹಿಳೆಯೊಬ್ಬರಿಗೆ ವಸತಿ ಸಚಿವ ಸೋಮಣ್ಣ ಕೆನ್ನೆಗೆ ಬಾರಿಸಿದ ಘಟನೆ ನಡೆದಿದ್ದು, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಗುಂಡ್ಲುಪೇಟೆ ತಾಲೂಕಿನ ಹಂಗಳದಲ್ಲಿ ಶನಿವಾರ ಸಂಜೆ ನಡೆದ ಗ್ರಾಮೀಣ ಪ್ರದೇಶಗಳ ಹಕ್ಕುಪತ್ರ ವಿತರಣೆ ಕಾರ್ಯಕ್ರಮದಲ್ಲಿ ವಸತಿ ಮೂಲಸೌಕರ್ಯ ಮತ್ತು‌ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರು ಮಹಿಳೆಯೊಬ್ಬರಿಗೆ ಹೊಡೆದಿದ್ದು ಅದರ ವಿಡಿಯೊ ತುಣುಕು ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಹಂಗಳ ಗ್ರಾಮ ಪಂಚಾಯತಿಯಿಂದ 173 ಫಲಾನುಭವಿಗಳಿಗೆ ನಿವೇಶನ ಹಕ್ಕುಪತ್ರಗಳನ್ನು ಹಂಚಿಕೆ ಮಾಡಲಾಗಿತ್ತು.

‘ಫಲಾನುಭವಿಗಳನ್ನು ಸರಿಯಾಗಿ ಆಯ್ಕೆ ಮಾಡಿಲ್ಲ. ನಿವೇಶನ ಇದ್ದವರಿಗೇ ಮತ್ತೆ ಕೊಡಲಾಗಿದೆ. ನಮಗೆ ಅನ್ಯಾಯವಾಗಿದೆ. ಕಾಂಗ್ರೆಸ್ ಮುಖಂಡ ನಂಜಪ್ಪ ಅವರು ಹೇಳಿದವರಿಗೆ ನಿವೇಶನ ನೀಡಲಾಗಿದೆ’ ಎಂದು ಆರೋಪಿಸಿ ಕೆಲವು ಮಹಿಳೆಯರು ಸಚಿವರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದರು. ಈ ಸಂದರ್ಭದಲ್ಲಿ ಕೆಂಪಮ್ಮ ಎಂಬ ಮಹಿಳೆ ಸಚಿವರ ಬಳಿಗೆ ಹೋಗಿ ಸಮಸ್ಯೆ ಹೇಳಲು ಹೊರಟಾಗ‌ ಸೋಮಣ್ಣ ಕೆನ್ನೆಗೆ ಹೊಡೆದಿದ್ದಾರೆ. ಒರಟಾಗಿ ವರ್ತಿಸಿ ಬಳಿಕ ಸಚಿವರ ಕಾಲಿಗೆ ಬೀಳುವ ವಿಡಿಯೋ ಇದೆ.

ಘಟನೆಯ ವಿಡಿಯೋ ವೈರಲ್ ಆಗುತ್ತಿದ್ದಂತೆ ಸ್ಥಳೀಯ ಬಿಜೆಪಿ ಮುಖಂಡರು ಮಹಿಳೆಯ ಬಳಿ ಮಾಧ್ಯಮಕ್ಕೆ ಹೇಳಿಕೆ ಕೊಡಿಸಿ ಸಮಜಾಯಿಷಿ ನೀಡಲು ಯತ್ನಿಸಿದ್ದಾರೆ. ತನಗೆ ಸಚಿವರೇನು ಹೊಡೆದಿಲ್ಲ. ಹಕ್ಕುಪತ್ರ ವಿತರಣೆ ಮಾಡಿದ್ದಾರೆ. ಅವರಲ್ಲಿ ಸಮಸ್ಯೆ ಹೇಳಲು ಹೋಗಿದ್ದಷ್ಟೆ. ಮಾತನಾಡಿ ಕಳಿಸಿಕೊಟ್ಟಿದ್ದಾರೆ ಎಂದು ಮಹಿಳೆ ಹೇಳಿದ್ದಾರೆ.

Karnataka minister V Somanna has been caught on camera slapping a woman at an event where he was distributing land titles. Amid outrage and backlash over the incident, chief minister Basavaraj Bommai sought an explanation from the minister. The woman reportedly confronted the minister at the event following which the minister slapped her. In the purported video now going viral, a few women security personnel can be seen, while many men also intervened after the minister slapped the woman.j