ಬ್ರೇಕಿಂಗ್ ನ್ಯೂಸ್
27-10-22 02:52 pm Mangalore Correspondent ಕ್ರೈಂ
ಉಳ್ಳಾಲ, ಅ.27 : ಪತ್ನಿಯ ಮೇಲೆ ಅತಿಯಾದ ಸಂಶಯ ಪಡುತ್ತಿದ್ದ ವ್ಯಕ್ತಿಯೊಬ್ಬ ಪತ್ನಿಯನ್ನ ಕತ್ತು ಹಿಸುಕಿ ಕೊಂದು ತಾನೂ ತೋಟದ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಉಳ್ಳಾಲ ಠಾಣೆ ವ್ಯಾಪ್ತಿಯ ಪಿಲಾರು ಪಂಜಂದಾಯ ದೈವಸ್ಥಾನದ ಬಳಿ ನಡೆದಿದೆ.
ಪಿಲಾರು ನಿವಾಸಿಗಳಾದ ಶೋಭಾ ಪೂಜಾರಿ(45) ಕೊಲೆಯಾದ ಮಹಿಳೆ ಮತ್ತು ಆಕೆಯ ಪತಿ ಶಿವಾನಂದ ಪೂಜಾರಿ (55) ಆತ್ಮಹತ್ಯೆಗೈದವರು. ಇಂದು ಬೆಳಗ್ಗೆ ಹತ್ತು ಗಂಟೆ ವೇಳೆಗೆ ಶೋಭಾ ಅವರು ಮನೆ ಹತ್ತಿರದ ಇನ್ನೂರು ಗುತ್ತು ಕುಟುಂಬಸ್ಥರ ಮನೆಯಿಂದ ಗೊಬ್ಬರ ತಂದಿದ್ದರು. ಮಧ್ಯಾಹ್ನ 12 ಗಂಟೆ ವೇಳೆಗೆ ಶೋಭಾ ಅವರ ಹಿರಿಯ ಮಗ ಕಾರ್ತಿಕ್ ತಾಯಿಗೆ ಕರೆ ಮಾಡಿದ್ದು ಕರೆ ಸ್ವೀಕರಿಸದ ಹಿನ್ನೆಲೆಯಲ್ಲಿ ಪಕ್ಕದ ಇನ್ನೂರು ಗುತ್ತು ಮನೆಯವರಿಗೆ ವಿಚಾರಿಸಲು ತಿಳಿಸಿದ್ದಾನೆ. ಪಕ್ಕದ ಮನೆಯ ಶಕುಂತಳ ಶೆಟ್ಟಿ ಅವರು ಶೋಭಾ ಅವರ ಮನೆಯೊಳಗೆ ಪ್ರವೇಶಿಸಿದಾಗ ಶೋಭಾ ಅವರು ಬೆಡ್ ರೂಮಿನ ಮಂಚದಲ್ಲಿ ಹೆಣವಾಗಿದ್ದರು. ಗಾಬರಿಗೊಂಡ ಶಕುಂತಳಾ ಅವರು ಮನೆಮಂದಿಗೆ ತಿಳಿಸಿದಾಗ ಪಕ್ಕದ ತೋಟದಲ್ಲಿ ಮರಕ್ಕೆ ಗಂಡ ಶಿವಾನಂದ ಅವರು ನೇಣು ಬಿಗಿದುಕೊಂಡಿದ್ದು ತಿಳಿದುಬಂದಿದೆ.
ಶಿವಾನಂದ ಪೂಜಾರಿ ಅವರು ಪೈಂಟರ್ ಕೆಲಸ ಮಾಡುತ್ತಿದ್ದು ಪತ್ನಿ ಅಲ್ಲದೆ ಮಗಳ ಮೇಲೂ ನಿರಂತರವಾಗಿ ಸಂಶಯ ಪಡುತ್ತಿದ್ದರು ಎನ್ನಲಾಗಿದೆ. ಇದರಿಂದ ಸೈಕೋ ರೀತಿ ವರ್ತಿಸುತ್ತಿದ್ದು ನೆರೆಹೊರೆಯವರಲ್ಲೂ ವಿನಾ ಕಾರಣ ತಗಾದೆ ಎತ್ತಿ ಗಲಾಟೆ ನಡೆಸುತ್ತಿದ್ದರೆಂದು ಸ್ಥಳೀಯರು ತಿಳಿಸಿದ್ದಾರೆ. ಪತ್ನಿ ಶೋಭಾ ಅವರಿಗೆ ಯಾರಾದರೂ ಫೋನ್ ಕರೆ ಮಾಡಿದರೂ ಸೈಕೋ ಪತಿರಾಯ ಗಲಾಟೆ ನಡೆಸುತ್ತಿದ್ದನೆಂದು ನೆರೆಹೊರೆಯ ನಿವಾಸಿಗಳು ತಿಳಿಸಿದ್ದಾರೆ.
ಶೋಭಾ ಅವರ ಕಿರಿಯ ಮಗಳು ಕಾವ್ಯ ಎರಡು ವರ್ಷದ ಹಿಂದಷ್ಟೆ ಮದುವೆಯಾಗಿದ್ದಳು. ಹಿರಿಯ ಮಗ ಕಾರ್ತಿಕ್ ಖಾಸಗಿ ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದಾನೆ. ಸೈಕೋ ತಂದೆ ಮಾಡಿದ ಹೀನ ಕೃತ್ಯಕ್ಕೆ ಮಕ್ಕಳೇ ಬಾಯಿಗೆ ಬಂದ ರೀತಿ ಬೈದು ತಾಯಿ ಮೃತದೇಹದ ಮುಂದೆ ಕಣ್ಣೀರಿಟ್ಟಿದ್ದಾರೆ. ಉಳ್ಳಾಲ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ, ಮೃತದೇಹಗಳನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
Mangalore Husband kills wife suspecting affair at Pilar in Ullal, kills himself too. The deceased has been identified as Shoba Poojary (45) and husband Shivanand. Ullal police are now investigating the case.
29-08-25 10:51 pm
HK News Desk
ನಮ್ಮದು ನೆಲ ಜಲ, ಕಲ್ಲು ಮಣ್ಣನ್ನು ದೇವರಂತೆ ಕಾಣೋದು...
29-08-25 10:20 pm
ಚಿಂತಾಮಣಿಯಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆ ; 100...
29-08-25 05:59 pm
Chikkamagaluru, Police, Fine: ಸಾರ್ವಜನಿಕರಿಗೆ ಮ...
28-08-25 06:23 pm
Bidar Bus Driver Suicide: ಬೀದರ್ ಬಸ್ ಡಿಪೋ ನಲ್ಲ...
28-08-25 02:41 pm
29-08-25 05:20 pm
HK News Desk
PM Modi Japan: ಪ್ರಧಾನಿ ಮೋದಿಗೆ ಜಪಾನ್ನಲ್ಲಿ ಗಾಯ...
29-08-25 01:47 pm
ಮೋದಿ 75 ವರ್ಷಕ್ಕೆ ನಿವೃತ್ತರಾಗಬೇಕು ಎಂದು ಹೇಳಿಲ್ಲ...
29-08-25 12:50 pm
ಪ್ರತಿ ಭಾರತೀಯ ಕುಟುಂಬಗಳು ಮೂರಕ್ಕಿಂತ ಹೆಚ್ಚು ಮಕ್ಕಳ...
29-08-25 10:56 am
Kanhangad Suicide: ಕಾಞಂಗಾಡ್ ; ಬೆಳೆದು ನಿಂತ ಇಬ್...
28-08-25 12:19 pm
29-08-25 10:54 pm
Mangalore Correspondent
Talapady Accident, Ksrtc, Death, Mangalore: ತ...
29-08-25 09:08 pm
Mangalore, Eric Ozario, Konkani, Death: ಮಾಂಡ್...
29-08-25 08:13 pm
Mahesh Shetty Thimarodi, SIT, Mangalore: ಬೆಳ್...
29-08-25 03:48 pm
Puttur Tahsildar, Lokayukta Raid: ಜಮೀನು ಪರಭಾರ...
28-08-25 11:00 pm
27-08-25 10:23 pm
HK News Desk
Karkala Murder, Arrest, Crime: ಹೆಂಡ್ತಿ ಮಕ್ಕಳನ...
26-08-25 10:39 pm
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm