ಬ್ರೇಕಿಂಗ್ ನ್ಯೂಸ್
06-11-22 02:28 pm HK News Desk ಕ್ರೈಂ
ಪಾಟ್ನಾ, ನ.6: ವಾಮಾಚಾರ ಮಾಡುತ್ತಿದ್ದಳೆಂದು ಆರೋಪಿಸಿ ಮಹಿಳೆಯೊಬ್ಬಳನ್ನು ಥಳಿಸಿದ್ದಲ್ಲದೆ, ಆಕೆಯನ್ನು ಮನೆಯಲ್ಲೇ ಕೂಡಿಹಾಕಿ ಬೆಂಕಿ ಹಚ್ಚಿ ಸಜೀವ ದಹನ ಮಾಡಿದ ಆಘಾತಕಾರಿ ಘಟನೆ ಬಿಹಾರದ ಗಯಾ ಜಿಲ್ಲೆಯಲ್ಲಿ ಶನಿವಾರ ನಡೆದಿದೆ.
ಮೃತ ಮಹಿಳೆಯನ್ನು ಅರ್ಜುನ್ ದಾಸ್ ಎಂಬವರ ಪತ್ನಿ ರೀಟಾ ದೇವಿ (45) ಎಂದು ಗುರುತಿಸಲಾಗಿದೆ. ನೆರೆಹೊರೆಯ ಮನೆಯವರೇ ಸೇರಿ ಮಹಿಳೆಗೆ ಹಲ್ಲೆಗೈದು ನಂತರ ಮನೆಯಲ್ಲಿ ಕೂಡಿಹಾಕಿ ಬೆಂಕಿ ಹಚ್ಚಿ ಸುಟ್ಟು ಹಾಕಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಒಂಬತ್ತು ಮಹಿಳೆಯರನ್ನು ಬಂಧಿಸಲಾಗಿದೆ.
ತಿಂಗಳ ಹಿಂದಷ್ಟೇ ಭುಯಾನ್ ಸಮುದಾಯದ ಪರಮೇಶ್ವರ್ ಎಂಬ ವ್ಯಕ್ತಿ ಅನಾರೋಗ್ಯದಿಂದ ಸಾವಿಗೀಡಾಗಿದ್ದರು. ಆದರೆ ಅವರ ಕುಟುಂಬದವರು ರೀಟಾ ದೇವಿ ಈತನಿಗೆ ವಾಮಾಚಾರ ಮಾಡಿ ಕೊಲೆ ಮಾಡಿದ್ದಾಳೆ ಎಂದು ದೂರಿದ್ದರು. ಇದರಿಂದ ಎರಡು ಕುಟುಂಬಗಳ ನಡುವೆ ವೈರತ್ವ ಉಂಟಾಗಿತ್ತು. ಪರಮೇಶ್ವರ್ ಸಂಬಂಧಿಕರು ಪ್ರತಿಯಾಗಿ ದೂರದ ಜಾರ್ಖಂಡ್‌ನಿಂದ ವಾಮಾಚಾರ ಮಾಡುವ ವ್ಯಕ್ತಿಯನ್ನು ಕರೆಸಿದ್ದರು. ಆತ, ರೀಟಾಗೆ ಪರಮೇಶ್ವರ್ ಕೊಲೆಯನ್ನು ಒಪ್ಪಿಕೊಳ್ಳುವಂತೆ ಒತ್ತಾಯಿಸಿದ್ದ. ಇದರಿಂದ ಸ್ಥಳದಲ್ಲಿ ಉದ್ವಿಗ್ನ ಸ್ಥಿತಿ ಉಂಟಾಗಿತ್ತು.
ಈ ನಡುವೆ, ಪರಮೇಶ್ವರ್ ಕುಟುಂಬಸ್ಥರು ರೀಟಾಳ ಮನೆಗೆ ಬಂದು ಥಳಿಸಿದ್ದಾರೆ. ಈ ವೇಳೆ, ರೀಟಾ ಪತಿ ಅರ್ಜುನ್ ದಾಸ್ ಮತ್ತು ಮಕ್ಕಳು ಓಡಿ ತಪ್ಪಿಸಿಕೊಂಡಿದ್ದಾರೆ. ಆದರೆ ಮಹಿಳೆಯನ್ನು ಮನೆಯಲ್ಲಿ ಕೂಡಿಹಾಕಿ ಥಳಿಸಿದ್ದು ಆಕೆ ಪ್ರಜ್ಞೆ ತಪ್ಪಿ ಬಿದ್ದಿದ್ದಳು. ಈ ವೇಳೆ, ಮನೆಯ ಗ್ಯಾಸ್ ಓಪನ್ ಮಾಡಿ ಉದ್ರಿಕ್ತರು ಬೆಂಕಿ ಹಚ್ಚಿದ್ದಾರೆ. ಇದರಿಂದ ಮಹಿಳೆ ಸಜೀವ ದಹನವಾಗಿದ್ದಾಳೆ. ವಿಷಯ ತಿಳಿದು ಸ್ಥಳಕ್ಕೆ ಬಂದ ಪೊಲೀಸರ ಮೇಲೂ ಅಲ್ಲಿನ ಜನರು ಹಲ್ಲೆಗೆ ಮುಂದಾಗಿದ್ದರು. ಬಳಿಕ ಹೆಚ್ಚುವರಿ ಪೊಲೀಸರು ಸ್ಥಳಕ್ಕೆ ತೆರಳಿ ಆರೋಪಿಗಳನ್ನು ಬಂಧಿಸಿದ್ದಾರೆ.
The incident happened in a remote hilly region of Pachmah village under Maigra police station limits bordering the forests of Jharkhand. Locals attacked and forced the local police team to return that had reached the spot to rescue the woman, identified as Rita Devi, 45, wife of Arjun Das.
28-07-25 11:07 am
HK News Desk
Raichur Building Fall: ರಾಯಚೂರಿನಲ್ಲಿ ಚರಂಡಿ ಬ್ಲ...
27-07-25 01:09 pm
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
28-07-25 12:28 pm
HK News Desk
Israel, Arabic Language: ಇಸ್ರೇಲ್ ಸೈನಿಕರಿಗೆ ಇಸ...
26-07-25 03:31 pm
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
28-07-25 05:39 pm
Mangalore Correspondent
Dharmasthala Case, SIT Witness at Netravati R...
28-07-25 03:53 pm
ಕಾಸಿಲ್ಲದೇ ಕನ್ಯಾಕುಮಾರಿ ಯಾತ್ರೆ ; ಜನಮನ ಸೆಳೆದ ಮಂಗ...
28-07-25 01:14 pm
Sullia, Rain, Mangalore Death: ಸುಳ್ಯದಲ್ಲಿ ಮಳೆ...
28-07-25 10:51 am
Mangalore Kodakkena Restaurant owner Suicide:...
27-07-25 09:58 pm
27-07-25 08:39 pm
Mangalore Correspondent
ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಯುವತಿಯನ್ನ ಆಸ್ಪತ್ರೆಗ...
27-07-25 07:13 pm
Bangalore Murder, Two Children Killed, Crime:...
27-07-25 03:26 pm
ಸೈಬರ್ ವಂಚಕರ ಜಾಲಕ್ಕೆ ನಕಲಿ ಬ್ಯಾಂಕ್ ಖಾತೆ ಪೂರೈಕೆ...
26-07-25 09:35 pm
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm