ಬ್ರೇಕಿಂಗ್ ನ್ಯೂಸ್
11-11-22 10:24 pm HK News Desk ಕ್ರೈಂ
ಮೂಡುಬಿದ್ರೆ, ನ.11 : ಪಿಯು ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣದಲ್ಲಿ ಮೂಡುಬಿದ್ರೆ ಪೊಲೀಸರು 65 ವರ್ಷದ ವೃದ್ಧನನ್ನು ಬಂಧಿಸಿದ್ದಾರೆ. ಲೈಂಗಿಕ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ವಿದ್ಯಾರ್ಥಿನಿ ಡೆತ್ ನೋಟ್ ಬರೆದಿದ್ದು ಅದನ್ನು ಆಧರಿಸಿ ಪೊಲೀಸರು ಕ್ರಮ ಜರುಗಿಸಿದ್ದಾರೆ.
ಕಾರ್ಕಳ ಮೂಲದ ಬಡ ಕುಟುಂಬದ ಪಿಯುಸಿ ವಿದ್ಯಾರ್ಥಿನಿ ಮೂಡುಬಿದ್ರೆಯಲ್ಲಿ ತನ್ನ ಅತ್ತೆಯ ಮನೆಯಲ್ಲಿದ್ದು ಮೂಡುಬಿದ್ರೆಯ ಕಾಲೇಜು ಹೋಗುತ್ತಿದ್ದಳು. ನ.8ರಂದು ವಿದ್ಯಾರ್ಥಿನಿ ಮನೆ ಬಳಿಯ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಳು. ಪ್ರಕರಣದಲ್ಲಿ ಆಕೆ ಓದುತ್ತಿದ್ದ ಕಾಲೇಜಿನ ನಿವೃತ್ತ ಕ್ಲರ್ಕ್ ಶ್ರೀಧರ್ ಪುರಾಣಿಕ್(65) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ವಿದ್ಯಾರ್ಥಿನಿಗೆ ಕಿವಿ ನೋವೆಂದು ಹೇಳಿದ್ದಕ್ಕೆ ಮನೆಗೆ ಕರೆದುಕೊಂಡು ಹೋಗುವಂತೆ ಕಾಲೇಜಿನ ಕಡೆಯಿಂದ ಆಕೆಯ ಅತ್ತೆಗೆ ಮಾಹಿತಿ ನೀಡಿದ್ದರು. ಹುಡುಗಿಗೆ ಸಂಬಂಧದಲ್ಲಿ ಅತ್ತೆಯಾಗಿದ್ದ ಮಹಿಳೆ ತನ್ನ ಪರಿಚಿತ ಶ್ರೀಧರ್ ಪುರಾಣಿಕ್ ಬಳಿ ಕಾಲೇಜಿನಿಂದ ಆಕೆಯನ್ನು ಕರೆತರುವಂತೆ ತಿಳಿಸಿದ್ದರು. ಕಾರಿನಲ್ಲಿ ಮನೆಗೆ ಕರೆದೊಯ್ಯುತ್ತಿದ್ದ ವೇಳೆ ಶ್ರೀಧರ್, ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ ಎನ್ನಲಾಗಿದೆ. ಇದರಿಂದ ಬೇಸತ್ತ ವಿದ್ಯಾರ್ಥಿನಿ ಶ್ರೀಧರ್ ಹೆಸರು ಉಲ್ಲೇಖಿಸಿ ಡೆತ್ ನೋಟ್ ಬರೆದಿಟ್ಟು ಮನೆ ಪಕ್ಕದ ಹಾಡಿಯಲ್ಲಿ ನೇಣಿಗೆ ಶರಣಾಗಿದ್ದಾಳೆ.
ಮೂಡಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತ ಬಾಲಕಿ 17 ವರ್ಷದ ಅಪ್ರಾಪ್ತೆ ಆಗಿರುವುದರಿಂದ ಆರೋಪಿ ವಿರುದ್ಧ ಪೋಕ್ಸೋ ಮತ್ತು ದಲಿತರ ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಹುಡುಗಿ ಹೆತ್ತವರು ಬಡವರಾಗಿದ್ದು ಏಳು ವರ್ಷಗಳ ಹಿಂದೆ ತಂದೆ ತೀರಿಕೊಂಡಿದ್ದರು. ಪರಿಶಿಷ್ಟ ಜಾತಿಯವರಾಗಿದ್ದು ಬಾಲಕಿಯನ್ನು ಕಾಲೇಜಿಗೆ ಸೇರಿಸಲು ಆಕೆಯ ಅತ್ತೆ ಸಹಾಯ ಮಾಡಿದ್ದರು. ಕಾಲೇಜು ಸೇರಿಸುವ ಸಂದರ್ಭದಲ್ಲಿ ಸ್ವಲ್ಪಾಂಶ ಶುಲ್ಕವನ್ನು ಶ್ರೀಧರ್ ಪುರಾಣಿಕ್ ಪಾವತಿಸಿದ್ದ ಎನ್ನಲಾಗುತ್ತಿದ್ದು, ಅದೇ ನೆಪದಲ್ಲಿ ಆಕೆಯನ್ನು ದುರುಪಯೋಗ ಪಡಿಸಲು ನೋಡಿದ್ದಾನೆ. ಇದರಿಂದ ಬೇಸತ್ತ ಹರೆಯದ ಹುಡುಗಿ ದಿಢೀರ್ ಆಗಿ ಸಾವಿಗೆ ಶರಣಾಗಿದ್ದಾಳೆ.
Moodbidri PU student commits suicide, Sexual harrasment of 65 year old man reason for death says Death note. The deceased girl was a minor whose age was 17. A posco case has been registered against the accused.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm