ನಟ ಸುಶಾಂತ್‌ ಆತ್ಮಹತ್ಯೆ: ಪ್ರಕರಣವನ್ನು ಸಿಬಿಐಗೆ ಒಪ್ಪಿಸಿದ ನಿತೀಶ್‌ ಕುಮಾರ್‌

04-08-20 08:39 am       Headline Karnataka News Network   ಕ್ರೈಂ

ಬಿಹಾರದ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಅವರು ಬಾಲಿವುಡ್ ನಟ ಸುಶಾಂತ್ ಸಿಂಗ್ ಆತ್ಮಹತ್ಯೆ ಪ್ರಕರಣವನ್ನು ಮಂಗಳವಾರ ಸಿಬಿಐ ತನಿಖೆಗೆ ಒಪ್ಪಿಸಿದ್ದಾರೆ.

ಪಟ್ನಾ: ಬಿಹಾರದ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಅವರು ಬಾಲಿವುಡ್ ನಟ ಸುಶಾಂತ್ ಸಿಂಗ್ ಆತ್ಮಹತ್ಯೆ ಪ್ರಕರಣವನ್ನು ಮಂಗಳವಾರ ಸಿಬಿಐ ತನಿಖೆಗೆ ಒಪ್ಪಿಸಿದ್ದಾರೆ. 

ಸುಶಾಂತ್ ಸಿಂಗ್ ಅವರ ತಂದೆ ಮುಖ್ಯಮಂತ್ರಿಗಳ ಜೊತೆ ಮಾತನಾಡಿ ಕೆಲವೇ ಗಂಟೆಗಳ ಬಳಿಕ ಬಿಹಾರ ಸರ್ಕಾರ ಮಹತ್ವ ನಿರ್ಧಾರ ಕೈಗೊಂಡಿದೆ. 

ಸುಶಾಂತ್‌ ಆತ್ಮಹತ್ಯೆ ಹಿಂದೆ ಕಾಣದ ಕೈಗಳ ಕೈವಾಡವಿದೆ ಎಂದು ಅವರ ಕುಟುಂಬಸ್ಥರು ಆರೋಪಿಸಿದ್ದರು. ಈಗಾಗಲೇ ಸುಶಾಂತ್ ಸಾವಿನ ಕುರಿತಂತೆ ಮುಂಬೈ ಹಾಗೂ ಮಹಾರಾಷ್ಟ್ರ ಪೊಲಿಸರು ತನಿಖೆ ನಡೆಸುತ್ತಿದ್ದಾರೆ.

ನನ್ನ ಮಗನ ಆತ್ಮಹತ್ಯೆಗೆ ಪ್ರಚೋಧನೆ ನೀಡಲಾಗಿದೆ ಎಂದು ದೂರಿ ಸುಶಾಂತ್‌ ತಂದೆ ಪಟ್ನಾ ಪೊಲೀಸರಿಗೆ ದೂರು ನೀಡಿದ್ದರು. ಇತ್ತ ಮುಂಬೈ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದರು.

ಇತ್ತ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ದವ್‌ ಠಾಕ್ರೆ ಅವರು ಪ್ರಕರಣವನ್ನು ಸಿಬಿಐಗೆ ಒಪ್ಪಿಸುವುದಿಲ್ಲ, ಮುಂಬೈ ಪೊಲೀಸರು ತನಿಖೆ ನಡೆಸುತ್ತಾರೆ ಎಂದು ಹೇಳಿದ್ದರು.