ಕುಡಿದ ಅಮಲಿನಲ್ಲಿದ್ದ ಫ್ರೀಲ್ಯಾನ್ಸರ್ ಯುವತಿಯ ಅತ್ಯಾಚಾರ ; ರ್ಯಾಪಿಡೋ ಬೈಕ್ ಸವಾರ ಸೇರಿ ಮೂವರ ಸೆರೆ 

29-11-22 11:02 pm       Bangalore Correspondent   ಕ್ರೈಂ

ರಾಜಧಾನಿಯಲ್ಲಿ ಮತ್ತೆ ಗ್ಯಾಂಗ್​ ರೇಪ್​ ನಡೆದಿದೆ. ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ನಗರದಲ್ಲಿ ಕೇರಳ ಮೂಲದ ಯುವತಿ ಮೇಲೆ ಇಬ್ಬರು ಯುವಕರು ಅತ್ಯಾಚಾರವೆಸಗಿದ್ದಾರೆ. ದೂರು ದಾಖಲಾಗುತ್ತಿದ್ದಂತೆ ಎಚ್ಚೆತ್ತ ಪೊಲೀಸರು ಆರೋಪಿಗಳನ್ನ ಬಂಧಿಸಿದ್ದಾರೆ. 

ಬೆಂಗಳೂರು, ನ.29 : ರಾಜಧಾನಿಯಲ್ಲಿ ಮತ್ತೆ ಗ್ಯಾಂಗ್​ ರೇಪ್​ ನಡೆದಿದೆ. ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ನಗರದಲ್ಲಿ ಕೇರಳ ಮೂಲದ ಯುವತಿ ಮೇಲೆ ಇಬ್ಬರು ಯುವಕರು ಅತ್ಯಾಚಾರವೆಸಗಿದ್ದಾರೆ. ದೂರು ದಾಖಲಾಗುತ್ತಿದ್ದಂತೆ ಎಚ್ಚೆತ್ತ ಪೊಲೀಸರು ಆರೋಪಿಗಳನ್ನ ಬಂಧಿಸಿದ್ದಾರೆ. 

ನವೆಂಬರ್​ 25ರ ರಾತ್ರಿ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಬಿಟಿಎಂ ಲೇಔಟ್​ನ ಸಂಸ್ಥೆಯೊಂದರಲ್ಲಿ ಫ್ರೀಲ್ಯಾನ್ಸರ್ ಆಗಿ ಕೆಲಸ ಮಾಡುತ್ತಿದ್ದ ಯುವತಿ ಮೇಲೆ ಗ್ಯಾಂಗ್‌ ರೇಪ್‌ ನಡೆದಿದೆ.‌ ಯುವತಿ ಶುಕ್ರವಾರ ರಾತ್ರಿ ಬಿಟಿಎಂ ಲೇಔಟ್ ನಿಂದ ನೀಲಾದ್ರಿ ನಗರಕ್ಕೆ ರ್ಯಾಪಿಡೋ ಬೈಕ್ ಬುಕ್ಕಿಂಗ್ ಮಾಡಿದ್ದರು. ಪಿಕ್ ಅಪ್ ವೇಳೆ ಯುವತಿ ಮದ್ಯಪಾನ ಮಾಡಿದ್ದಳು. ಅರೆ ಪ್ರಜ್ಞಾವಸ್ಥೆಯಲ್ಲಿದ್ದ ಯುವತಿಯನ್ನು ಡ್ರಾಪ್ ಪಾಯಿಂಟ್ ತಲುಪಿಸದೇ ಸವಾರ ತನ್ನ ಸ್ನೇಹಿತನ ರೂಮ್​ಗೆ ಕರೆದೊಯ್ದಿದ್ದಾನೆ. ಕುಡಿದ ಅಮಲಿನಲ್ಲಿದ್ದ ಯುವತಿಗೆ ಸ್ನೇಹಿತನ ಮತ್ತು ಸವಾರ ಸೇರಿ ಗ್ಯಾಂಗ್ ರೇಪ್ ಮಾಡಿದ್ದಾರೆ.

Kerala girl gang-raped in Bengaluru; Bike taxi driver, 2 others arrested |  ummid.com

ಯುವತಿಗೆ ಬೆದರಿಕೆ ಹಾಕಿದ ಬೈಕ್​ ಸವಾರ

ಪ್ರಜ್ಞೆ ಬಂದ ಬಳಿಕ ಯುವತಿಗೆ ವಿಷಯ ಯಾರಿಗೂ ಹೇಳದಂತೆ ಬೆದರಿಕೆ ಹಾಕಿ ಕಳುಹಿಸಿದ್ದರು. ಘಟನೆ ಬಳಿಕ ಯುವತಿ ಎಲೆಕ್ಟ್ರಾನಿಕ್ ಸಿಟಿ ಪೊಲೀಸರಿಗೆ ದೂರು ನೀಡಿದ್ದರು. ದೂರು ಆಧರಿಸಿ ತನಿಖೆ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಈ ಬಗ್ಗೆ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿದ ಬೆಂಗಳೂರು ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ, ನವೆಂಬರ್​ 25 ರ ರಾತ್ರಿ ಈ ಘಟನೆ ನಡೆದಿದೆ ಎಂದು ಹೇಳಿದ್ದಾರೆ. 22 ವರ್ಷದ ಯುವತಿ ಸ್ನೇಹಿತನ ಮನೆಯಿಂದ ತನ್ನ ಮನೆಗೆ ಹೋಗಬೇಕಿತ್ತು. ಆಗ ಯುವತಿ ರ್ಯಾಪಿಡೋ ಬೈಕ್ ಬುಕ್ ಮಾಡಿದ್ದಾರೆ. ಈ ವೇಳೆ ಯುವತಿಯನ್ನು ಬೈಕ್ ಮೇಲೆ ಕೂರಿಸಿಕೊಂಡ ಯುವಕ ಸ್ನೇಹಿತನ ರೂಮ್​ಗೆ ಕರೆದೊಯ್ದು ಅತ್ಯಾಚಾರ ಮಾಡಿದ್ದಾರೆ. ಇಬ್ಬರು ಯುವಕರ ಕೃತ್ಯಕ್ಕೆ ಓರ್ವ ಯುವತಿ ಕೂಡ ಸಾಥ್ ನೀಡಿದ್ದಾಳೆ. ಈ ಹಿನ್ನೆಲೆಯಲ್ಲಿ ಮೂವರನ್ನು ಬಂಧನ ಮಾಡಲಾಗಿದೆ ಎಂದು ಪೊಲೀಸ್ ಆಯುಕ್ತ ತಿಳಿಸಿದ್ದಾರೆ.

A 22-year-old woman from Kerala was allegedly gang-raped in Bengaluru by a bike taxi driver and his associate, the police said.
According to the police, the incident took place on Friday.In her complaint, the  22-year-old rape survivor claimed that she was at a friend's house on Friday before booking a bike taxi to visit another friend at around midnight. According to the police, the woman was drunk when she booked a bike on the ride-sharing application 'Rapido'.