ಬ್ರೇಕಿಂಗ್ ನ್ಯೂಸ್
30-11-22 12:06 pm Bangalore Correspondent ಕ್ರೈಂ
ಬೆಂಗಳೂರು, ನ.30 : ಶಾಲಾ ಮಕ್ಕಳ ಮೊಬೈಲ್ ಗೀಳು ಅಪ್ರಾಪ್ತ ಮಕ್ಕಳನ್ನು ದುಶ್ಚಟಗಳಿಗೆ ದಾಸರಾಗಿಸುತ್ತಿರುವ ಆತಂಕಕಾರಿ ವಿಚಾರ ಬೆಳಕಿಗೆ ಬಂದಿದೆ. ಮಕ್ಕಳು ಶಾಲೆಗೆ ಮೊಬೈಲ್ ತರಬಾರದು ಎಂಬ ನಿಯಮ ಇದ್ದರೂ, ಇದನ್ನು ಪರಿಶೋಧಿಸುವ ಉದ್ದೇಶದಿಂದ ಬೆಂಗಳೂರಿನ ಶಾಲೆಗಳಲ್ಲಿ ಮಕ್ಕಳ ಬ್ಯಾಗ್ ಪರಿಶೀಲನೆ ನಡೆಸಿದಾಗ ಪೋಷಕರು ಹಾಗೂ ಶಿಕ್ಷಕರನ್ನು ಆಘಾತಕ್ಕೀಡು ಮಾಡುವ ವಸ್ತುಗಳು ಪತ್ತೆಯಾಗಿವೆ.
ಬೆಂಗಳೂರು ನಗರದ 8, 9 ಮತ್ತು 10ನೇ ತರಗತಿ ವಿದ್ಯಾರ್ಥಿಗಳನ್ನು ಪರಿಶೀಲನೆಗೆ ಒಳಪಡಿಸಿದ್ದು ಈ ವೇಳೆ ಮಕ್ಕಳ ಬ್ಯಾಗ್‌ನಲ್ಲಿ ಮೊಬೈಲ್ ಫೋನ್‌ಗಳಲ್ಲದೇ, ಕಾಂಡೋಮ್, ಗರ್ಭ ನಿರೋಧಕ ಮಾತ್ರೆಗಳು, ಸಿಗರೇಟ್‌ಗಳು, ಲೈಟರ್‌ಗಳು ಹಾಗೂ ವೈಟ್‌ನರ್‌ಗಳು, ನಗದು ಹಣ ಪತ್ತೆಯಾಗಿದೆ ಎಂದು 'ಡೆಕ್ಕನ್ ಹೆರಾಲ್ಡ್' ದಿನ ಪತ್ರಿಕೆಯಲ್ಲಿ ವರದಿಯಾಗಿದೆ. ಇದರಿಂದ ಪರಿಶೀಲನೆ ನಡೆಸಿದ ಅಧಿಕಾರಿಗಳು ಹಾಗೂ ಅಧ್ಯಾಪಕರು ಆಘಾತಕ್ಕೊಳಗಾಗಿದ್ದಾರೆ.
ಕೊರೊನಾ ಸಮಯದಲ್ಲಿ ಆನ್‌ಲೈನ್ ಶಿಕ್ಷಣದ ಬಳಿಕ ವಿದ್ಯಾರ್ಥಿಗಳಿಗೆ ಮೊಬೈಲ್ ಗೀಳು ಹೆಚ್ಚಾಗಿದ್ದು, ತರಗತಿಗಳಿಗೆ ಮೊಬೈಲ್ ತಂದು ಬಳಸುವ ಬಗ್ಗೆ ದೂರುಗಳು ಬಂದಿದ್ದವು. ಈ ಹಿನ್ನೆಲೆಯಲ್ಲಿ ಕೆಎಎಂಎಸ್ ಸಹಯೋಗದೊಂದಿಗೆ ಅಧ್ಯಾಪಕರು ಬೆಂಗಳೂರಿನ ಅನೇಕ ಶಾಲೆಯ ಮಕ್ಕಳ ಬ್ಯಾಗ್‌ಗಳನ್ನು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಅಪ್ರಾಪ್ತ ಮಕ್ಕಳ ಬ್ಯಾಗ್‌ನಲ್ಲಿ ಕೆಲವು ಊಹಿಸಲಾರದ ವಸ್ತುಗಳು ಕಂಡುಬಂದಿದೆ.

ಈ ಬಗ್ಗೆ ನಾಗರಬಾವಿ ಬಡಾವಣೆಯ ಶಾಲೆಯೊಂದರ ಮುಖ್ಯೋಪಾಧ್ಯಾಯರು ಪ್ರತಿಕ್ರಿಯಿಸಿದ್ದು, ಈ ಬಗ್ಗೆ ಶಾಲೆಯಲ್ಲಿ ಪೋಷಕರ ಸಭೆ ನಡೆಸುತ್ತೇವೆ. ಮಕ್ಕಳ ಬ್ಯಾಗ್‌ನಲ್ಲಿ ಈ ರೀತಿಯ ವಸ್ತುಗಳು ಪತ್ತೆಯಾಗಿರುವುದರಿಂದ ಪೋಷಕರು ಕೂಡ ಆತಂಕಕ್ಕೊಳಗಾಗಿದ್ದಾರೆ. ಮಕ್ಕಳಲ್ಲಿ ಆಗಿರುವ ಅನಿರೀಕ್ಷಿತ ಬದಲಾವಣೆಗಳ ಬಗ್ಗೆ ನಮ್ಮೊಂದಿಗೆ ಹಂಚಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.
ಶಾಲೆಯ ಅಧ್ಯಾಪಕರು ಹಾಗೂ ಅಧಿಕಾರಿಗಳು ಪರಿಸ್ಥಿತಿಯನ್ನು ಎಚ್ಚರಿಕೆಯಿಂದ ನಿಭಾಯಿಸುವಂತೆ ಪೋಷಕರಿಗೆ ಸೂಚನೆ ನೀಡಿದ್ದಾರೆ. ಅಲ್ಲದೇ ವಿದ್ಯಾರ್ಥಿಗಳನ್ನು ಶಾಲೆಯಿಂದ ಅಮಾನತುಗೊಳಿಸುವ ಬದಲು ಆಪ್ತ ಸಮಾಲೋಚನೆಗೆ ಶಿಫಾರಸು ಮಾಡಲಾಗಿದೆ. ಶಾಲೆಯಲ್ಲಿ ಆಪ್ತ ಸಮಾಲೋಚನೆಗಳನ್ನು ನಡೆಸಲಾಗುತ್ತದೆ. ವಿದ್ಯಾರ್ಥಿಗಳಿಗೆ ಸದ್ಯ 10 ದಿನ ರಜೆ ನೀಡಲಾಗಿದ್ದು, ಪೋಷಕರಿಂದಲೂ ಸಹಾಯ ಕೇಳಿದ್ದೇವೆ ಎಂದು ಮುಖ್ಯೋಪಾಧ್ಯಾಯರು ತಿಳಿಸಿದ್ದಾರೆ.
10ನೇ ತರಗತಿ ವಿದ್ಯಾರ್ಥಿನಿಯ ಬ್ಯಾಗ್‌ನಲ್ಲಿ ಕಾಂಡೋಮ್ ಪತ್ತೆಯಾಗಿದ್ದು, ಈ ಬಗ್ಗೆ ಆಕೆಯನ್ನು ಪ್ರಶ್ನಿಸಿದಾಗ, ಆಕೆ ತನ್ನ ಸಹಪಾಠಿಗಳನ್ನು ಹಾಗೂ ಖಾಸಗಿ ಟ್ಯೂಷನ್ ಬಗ್ಗೆ ಆರೋಪ ಮಾಡಿದ್ದಾಳೆ ಎಂದು ಪರಿಶೀಲನೆ ನಡೆಸಿದ ಅಧ್ಯಾಪಕರೊಬ್ಬರು ತಿಳಿಸಿದ್ದಾರೆ. ಇದೇ ವೇಳೆ, ವಿದ್ಯಾರ್ಥಿಯೊಬ್ಬನ ನೀರಿನ ಬಾಟಲಿಯಲ್ಲಿ ಮದ್ಯವೂ ಪತ್ತೆಯಾಗಿದೆ.
ಈ ಬಗ್ಹೆ ಕೆಎಎಂಎಸ್ ಪ್ರಧಾನ ಕಾರ್ಯದರ್ಶಿ ಡಿ. ಶಶಿಕುಮಾರ್ ಪ್ರತಿಕ್ರಿಯಿಸಿದ್ದು, ನಗರದ ಶೇಕಡಾ 80ರಷ್ಟು ಶಾಲೆಯಲ್ಲಿ ಪರಿಶೀಲನೆ ನಡೆಸಿದ್ದೇವೆ. ಒಬ್ಬ ವಿದ್ಯಾರ್ಥಿಯ ಬ್ಯಾಗ್‌ನಲ್ಲಿ ಗರ್ಭ ನಿರೋಧಕ ಮಾತ್ರೆ ಪತ್ತೆಯಾಗಿದೆ. ಮತ್ತೊಬ್ಬರ ನೀರಿನ ಬಾಟಲಿಯಲ್ಲಿ ಮದ್ಯ ಪತ್ತೆಯಾಗಿದೆ. ಈ ಆಘಾತದಿಂದ ಹೊರಬರಲು ನಾವು ಯತ್ನಿಸುತ್ತಿದ್ದೇವೆ. ಕೆಲ ವಿದ್ಯಾರ್ಥಿಗಳು, ತನ್ನ ಸಹಾಪಾಠಿಗಳಿಗೆ ಹಾಗೂ ಶಿಕ್ಷಕರಿಗೆ ಕಿರುಕುಳ ನೀಡುವುದು, ಅಶ್ಲೀಲ ಭಾಷೆ ಬಳಸಿ ಬೈಯುವುದು, ಕೆಟ್ಟ ಸನ್ನೆಗಳನ್ನು ಮಾಡುವುದು ಕಂಡುಬಂದಿದೆ. ಈ ರೀತಿ ನಡವಳಿಕೆ 5ನೇ ತರಗತಿ ವಿದ್ಯಾರ್ಥಿಯಲ್ಲೂ ಕಂಡುಬಂದಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
An exercise to check cell phone use inside classrooms ended up shocking authorities of several schools in the city. Besides cell phones, authorities found condoms, oral contraceptives, lighters, cigarettes, whiteners and excess cash in bags of students in Classes 8, 9 and 10. Some schools started checking students' bags following complaints that they bring cell phones to classrooms.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
13-11-25 08:41 pm
HK News Desk
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
Delhi Blast: ದೆಹಲಿ ಸ್ಫೋಟಕ್ಕೆ ಟರ್ಕಿ ನಂಟಿನ ಶಂಕೆ...
13-11-25 04:52 pm
ಅಮಾಯಕರನ್ನು ಕೊಲ್ಲುವುದು ಇಸ್ಲಾಂನಲ್ಲಿ ಅತಿದೊಡ್ಡ ಪಾ...
12-11-25 02:54 pm
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
13-11-25 07:41 pm
Mangalore Correspondent
Belthangady, Kadaba Suicide, Mangalore; ಕಡಬದ...
13-11-25 05:01 pm
Kumble Toll Plaza: ಕುಂಬಳೆ ಟೋಲ್ ಪ್ಲಾಜಾಕ್ಕೆ ಭಾರ...
13-11-25 01:44 pm
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm