ಬೈಂದೂರು ಹುಡುಗರಿಗೆ ಹಲ್ಲೆಗೈದು ಚಿನ್ನದ ಸರ, ನಗದು 1.90 ಲಕ್ಷ ಕಿತ್ತುಕೊಂಡಿದ್ದ ಪುಡಿ ರೌಡಿಗಳು ; ವಿಡಿಯೋ ವೈರಲ್ ಬೆನ್ನಲ್ಲೇ ಮೂವರ ಬಂಧನ 

10-12-22 03:02 pm       Bangalore Correspondent   ಕ್ರೈಂ

ಸಿಗರೇಟ್ ಹಣ ಕೇಳಿದ್ದಕ್ಕೆ ಅಂಗಡಿ ಹುಡುಗರ ಮೇಲೆ ಹಲ್ಲೆಗೈದು 1.90 ಲಕ್ಷ ರೂಪಾಯಿ ಮೌಲ್ಯದ ಸೊತ್ತು ಎಗರಿಸಿ, ಪ್ರಾಣ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಎಚ್​ಎಎಲ್‌ ಪೊಲೀಸರು ಬಂಧಿಸಿದ್ದಾರೆ.  

ಬೆಂಗಳೂರು, ಡಿ.10: ಸಿಗರೇಟ್ ಹಣ ಕೇಳಿದ್ದಕ್ಕೆ ಅಂಗಡಿ ಹುಡುಗರ ಮೇಲೆ ಹಲ್ಲೆಗೈದು 1.90 ಲಕ್ಷ ರೂಪಾಯಿ ಮೌಲ್ಯದ ಸೊತ್ತು ಎಗರಿಸಿ, ಪ್ರಾಣ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಎಚ್​ಎಎಲ್‌ ಪೊಲೀಸರು ಬಂಧಿಸಿದ್ದಾರೆ.  ಡೆಲಿವರಿ ಬಾಯ್ ಆಗಿದ್ದ ಕಾರ್ತಿಕ್(20), ಅಲ್ಯೂಮಿನಿಯಂ ವರ್ಕ್ ಮಾಡುತ್ತಿದ್ದ ಸಲ್ಮಾನ್(20) ಹಾಗೂ ಖಾಸಗಿ ಹೊಟೇಲ್ ಮ್ಯಾನೇಜರ್ ಕಾರ್ತಿಕ್(23) ಬಂಧಿತರು. ಮೂವರು ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಲಾಗಿದ್ದು, ತನಿಖೆ ಮುಂದುವರಿದಿದೆ ಎಂದು ವೈಟ್‌ಫೀಲ್ಡ್ ಡಿಸಿಪಿ ಗಿರೀಶ್ ತಿಳಿಸಿದ್ದಾರೆ. 

ಬೈಂದೂರು ಮೂಲದ ನವೀನ್ ಕುಮಾರ್, ಪ್ರಜ್ವಲ್ ಶೆಟ್ಟಿ, ನಿತಿನ್ ಶೆಟ್ಟಿ ಎಂಬವರ ಮೇಲೆ ಗುರುವಾರ ರಾತ್ರಿ ಮಾರಣಾಂತಿಕ ಹಲ್ಲೆ ನಡೆಸಲಾಗಿತ್ತು. ಘಟನೆ ಅಂಗಡಿಯಲ್ಲಿದ್ದ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಭಾರೀ ವೈರಲ್ ಆಗಿತ್ತು. ಡಿ.9ರ ರಾತ್ರಿ 11.30 ರ ಸಮಯದಲ್ಲಿ ಏಳೆಂಟು ಜನರ ರೌಡಿಗಳ ಗುಂಪು ಕುಂದಲಹಳ್ಳಿ ಗೇಟ್ ಬಳಿಯಿರುವ ಬ್ರಹ್ಮಲಿಂಗೇಶ್ವರ ಬೇಕರಿಗೆ ಟೀ ಕುಡಿಯಲು ಮತ್ತು ಸಿಗರೇಟ್ ಸೇದಲು ಬಂದಿದ್ದು ಬೇಕರಿ ಸಿಬಂದಿ ಸಿಗರೇಟ್ ಹಣ ಕೇಳಿದ್ದಕ್ಕೆ ಅವ್ಯಾಚ್ಯ ಶಬ್ಧಗಳಿಂದ ನಿಂದಿಸಿ ಹಿಗ್ಗಾಮುಗ್ಗಾ ಥಳಿಸಿ ಹಣ ಕಿತ್ತುಕೊಂಡು ಪರಾರಿಯಾಗಿದ್ದರು. ಹಲ್ಲೆಗೊಳಗಾದವರು ಎಚ್‌ಎಎಲ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. 

ಇಬ್ಬರು ಯುವಕರು ಅಂಗಡಿ ಒಳಗೆ ಬಂದು ಮನಬಂದಂತೆ ಹೆಲ್ಮೆಟ್ ಹಾಗೂ ಕೈಯಿಂದ ಮನಸೋ ಇಚ್ಛೆ ಥಳಿಸಿದ್ದಾರೆ. ಪ್ರಜ್ವಲ್‌, ನಿತೀನ್ ಮೇಲೆಯೂ ಹಲ್ಲೆ ನಡೆಸಿ ಕಾಲಿನಿಂದ ತುಳಿದಿದ್ದಾರೆ. ಅಲ್ಲದೆ, ಇವರ ಕುತ್ತಿಗೆಯಲ್ಲಿದ್ದ 18 ಗ್ರಾಂ ತೂಕದ ಚಿನ್ನದ ಸರ ತೆಗೆದುಕೊಂಡು ಹೋಗಿದ್ದಾರೆ. ಕಾಂಡಿಮೆಂಟ್ಸ್ ವಸ್ತುಗಳನ್ನು ಹಾಗೂ ಗ್ಲಾಸ್‌ಗಳನ್ನು ಒಡೆದು ಚೆಲ್ಲಾಪಿಲ್ಲಿ ಮಾಡಿ, ಕ್ಯಾಷ್ ಬಾಕ್ಸ್‌ನಲ್ಲಿದ್ದ 1.90 ಲಕ್ಷ ರೂ. ಹಣವನ್ನು ತೆಗೆದುಕೊಂಡು ಹೋಗಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದರು.

ಸಿಗರೇಟ್ ಹಣ ಕೇಳಿದ್ದಕ್ಕೆ ಸಿಲಿಕಾನ್ ಸಿಟಿಯಲ್ಲಿ ಪುಡಿ ರೌಡಿಗಳ ಅಟ್ಟಹಾಸ ; ಬೈಂದೂರಿನ ಹುಡುಗರಿಗೆ ಯದ್ವಾತದ್ವಾ ಹಲ್ಲೆ ಸಿಸಿಟಿವಿಯಲ್ಲಿ ಸೆರೆ 

Bangalore Kundanahalli Gate assault on bakery employees, three arrested after video goes viral. An argument that began over a trivial issue quickly turned into a savage assault on three men inside a shop in Bengaluru on Thursday. In shocking footage recorded on the shop's CCTV camera and released by the victims, a group of raucous men start hitting the two shopkeepers in Kundalahalli.