ಬ್ರೇಕಿಂಗ್ ನ್ಯೂಸ್
23-12-22 10:18 pm HK News Desk ಕ್ರೈಂ
ನವದೆಹಲಿ, ಡಿ.24: ಜಾರ್ಖಂಡಿನಲ್ಲಿ ಕಲ್ಲಿದ್ದಲು ವಿದ್ಯುತ್ ಸ್ಥಾವರ ಹೊಂದಿರುವ ಖಾಸಗಿ ರಂಗದ ಕಾರ್ಪೊರೇಟ್ ಪವರ್ ಲಿಮಿಟೆಡ್ ಕಂಪನಿಯು 4 ಸಾವಿರ ಕೋಟಿ ರೂಪಾಯಿ ಬ್ಯಾಂಕ್ ಸಾಲ ಪಡೆದು ಮೋಸ ನಡೆಸಿರುವ ಬಗ್ಗೆ ಸಿಬಿಐ ಅಧಿಕಾರಿಗಳು ಎಫ್ಐಆರ್ ದಾಖಲಿಸಿದ್ದಾರೆ.
ಕೊಲ್ಕತ್ತಾದಲ್ಲಿ ಪ್ರಧಾನ ಕಚೇರಿ ಹೊಂದಿರುವ ಕಂಪನಿಯ ಡೈರೆಕ್ಟರುಗಳು, ಸರಕಾರಿ ಅಧಿಕಾರಿ ಮತ್ತು ಖಾಸಗಿ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಾಗಿದೆ. ಕಂಪನಿ ಹೆಸರಲ್ಲಿ ನಕಲಿ ದಾಖಲೆ ಪತ್ರಗಳನ್ನು ಮುಂದಿಟ್ಟು 20 ಬ್ಯಾಂಕುಗಳಿಂದ 4037 ಕೋಟಿ ರೂಪಾಯಿ ಸಾಲ ಪಡೆದು ಮೋಸ ಎಸಗಲಾಗಿದೆ. ಈ ಬಗ್ಗೆ ಯೂನಿಯನ್ ಬ್ಯಾಂಕ್ ನೇತೃತ್ವದಲ್ಲಿ ಸಿಬಿಐಗೆ ದೂರು ನೀಡಲಾಗಿತ್ತು.
ಸಿಬಿಐ ಅಧಿಕಾರಿಗಳು ಏಕಕಾಲದಲ್ಲಿ ಪ್ರಕರಣ ಸಂಬಂಧಿಸಿ ಮುಂಬೈ, ಕೊಲ್ಕತ್ತಾ, ನಾಗಪುರ, ರಾಂಚಿ, ವಿಶಾಖಪಟ್ನಂ, ದುರ್ಗಾಪುರ್, ಗಾಜಿಯಾಬಾದ್ ಸೇರಿ 16 ಕಡೆಗಳಲ್ಲಿ ದಾಳಿ ನಡೆಸಿದ್ದಾರೆ. ಕಾರ್ಪೊರೇಟ್ ಪವರ್ ಲಿಮಿಟೆಟ್ ಮಾತೃಸಂಸ್ಥೆಯಾದ ಅಭಿಜಿತ್ ಗ್ರೂಪ್ ಚೇರ್ಮನ್ ಮನೋಜ್ ಜೈಸ್ವಾಲ್, ಆಡಳಿತ ನಿರ್ದೇಶಕ ಅಭಿಷೇಕ್ ಜೈಸ್ವಾಲ್ ಸೇರಿ ಹಲವರ ವಿರುದ್ಧ ಪ್ರಕರಣ ದಾಖಲಾಗಿದೆ.
2009ರಿಂದ 2013ರ ನಡುವೆ ಯೋಜನೆಯ ಬಗ್ಗೆ ತಪ್ಪಾದ ಖರ್ಚು-ವೆಚ್ಚಗಳ ವರದಿ ಕೊಟ್ಟು ಬ್ಯಾಂಕ್ ಅಧಿಕಾರಿಗಳನ್ನು ಮೋಸ ಮಾಡಲಾಗಿದೆ. ವ್ಯಾಪಾರ- ವಹಿವಾಟು ಲೆಕ್ಕ ತೋರಿಸಿ, ಬೇನಾಮಿ ಖಾತೆಗಳಿಗೆ ಹಣವನ್ನು ವರ್ಗಾವಣೆ ಮಾಡಲಾಗಿದೆ. ಅಲ್ಲದೆ, ಆಮೂಲಕ ಬ್ಯಾಂಕಿಗೆ ಮೋಸ ಮಾಡಲಾಗಿದೆ ಎಂದು ಎಫ್ಐಆರ್ ನಲ್ಲಿ ಉಲ್ಲೇಖ ಮಾಡಲಾಗಿದೆ.
The Central Bureau of Investigation (CBI) has filed an FIR against Corporate Power Limited and its directors in an alleged Rs 4,000-crore bank fraud, CNBC TV-18 said on December 23.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm