ಬ್ರೇಕಿಂಗ್ ನ್ಯೂಸ್
24-12-22 12:22 pm HK News Desk ಕ್ರೈಂ
ನವದೆಹಲಿ, ಡಿ.23: ವಿದ್ಯಾರ್ಥಿನಿಯ ಬಳಿ ಲೈಂಗಿಕವಾಗಿ ಸಹಕರಿಸಲು ಬೇಡಿಕೆಯಿಟ್ಟ ಆರೋಪದಲ್ಲಿ ರಾಜಸ್ಥಾನ ತಾಂತ್ರಿಕ ವಿಶ್ವವಿದ್ಯಾನಿಲಯದ ಪ್ರೊಫೆಸರ್ ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.
ರಾಜಸ್ಥಾನ ತಾಂತ್ರಿಕ ವಿವಿಯ ಸಹಾಯಕ ಪ್ರಾಧ್ಯಾಪಕ ಗಿರೀಶ್ ಪರ್ಮಾರ್ ಬಂಧಿತ ಆರೋಪಿ. ಬಿ.ಟೆಕ್ ಅಂತಿಮ ವರ್ಷದ ವಿದ್ಯಾರ್ಥಿನಿಗೆ ಹೆಚ್ಚು ಅಂಕ ನೀಡುವುದಾಗಿ ಆಮಿಷವೊಡ್ಡಿ ಲೈಂಗಿಕವಾಗಿ ಸಹಕರಿಸಲು ಗಿರೀಶ್ ಪರ್ಮಾರ್ ಕೇಳಿದ್ದ. ಇದಕ್ಕೆ ವಿದ್ಯಾರ್ಥಿನಿ ಒಪ್ಪದೇ ಇದ್ದಾಗ ಆಕೆಯನ್ನು ತನ್ನ ಸಬ್ಜೆಕ್ಟ್ನಲ್ಲಿ ಫೇಲ್ ಮಾಡಿದ್ದ.
ಇದರಿಂದ ಮನನೊಂದ ವಿದ್ಯಾರ್ಥಿನಿ ಪೊಲೀಸರಿಗೆ ದೂರು ನೀಡಿದ್ದಳು. ಡಿಸೆಂಬರ್ 21 ರಂದು ಗಿರೀಶ್ ಪರ್ಮಾರ್ ನನ್ನು ಪೊಲೀಸರು ಬಂಧಿಸಿದ್ದು, ಡಿಸೆಂಬರ್ 22 ರಂದು ವಿಶ್ವವಿದ್ಯಾಲಯ ಆತನನ್ನು ಸೇವೆಯಿಂದ ಅಮಾನತುಗೊಳಿಸಿದೆ. ಪೊಲೀಸರು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಮೂರು ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.
ವಿದ್ಯಾರ್ಥಿ ಅರ್ಪಿತ್ ಅಗರ್ವಾಲ್ ಮೂಲಕ ಗಿರೀಶ್ ಪರ್ಮಾರ್ ಆ ವಿದ್ಯಾರ್ಥಿನಿಗೆ ಲೈಂಗಿಕ ಕ್ರಿಯೆಗೆ ಬೇಡಿಕೆಯಿಟ್ಟಿದ್ದ. ಪ್ರಾಧ್ಯಾಪಕನಿಗೆ ಸಹಾಯ ಮಾಡಿದ ಅರ್ಪಿತ್ ಅಗರ್ವಾಲ್ನನ್ನೂ ಪೊಲೀಸರು ಬಂಧಿಸಿದ್ದಾರೆ. ಗಿರೀಶ್ ಪರ್ಮಾರ್ ಮತ್ತು ಅರ್ಪಿತ್ ಅಗರ್ವಾಲ್ ವಿದ್ಯಾರ್ಥಿನಿ ಬಗ್ಗೆ ಅಸಭ್ಯವಾಗಿ ಮಾತನಾಡಿರುವ ಆಡಿಯೋ ಕೂಡ ಲೀಕ್ ಆಗಿದೆ.
ದಾದಾಭರಿ ಪೊಲೀಸ್ ಠಾಣೆಯಲ್ಲಿ ಪ್ರಾಧ್ಯಾಪಕ ಹಾಗೂ ಅರ್ಪಿತ್ ಅಗರ್ವಾಲ್ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 385, 354 (ಎ), 354 (ಡಿ), 384 ಮತ್ತು 509ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ ಅಮರ್ ಸಿಂಗ್ ಹೇಳಿದ್ದಾರೆ.
A professor at the Rajasthan Technical University in Kota was detained after it was alleged that he had pressured a final-year student for sexual favours and had failed her in the course when she refused. The professor is identified as Girish Parmar.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm