ಕೆಲಸಕ್ಕಿದ್ದ ಮನೆಯಿಂದಲೇ ಚಿನ್ನಾಭರಣ ಕಳವು ; ಅಟ್ಟಿಕಾ ಗೋಲ್ಡ್‌ ಕಂಪನಿಯ ವ್ಯವಸ್ಥಾಪಕ ಸಾಥ್, 25 ಲಕ್ಷ ರೂ. ಚಿನ್ನ ವಶಕ್ಕೆ, ಇಬ್ಬರ ಬಂಧನ ! 

29-12-22 04:48 pm       Bangalore Correspondent   ಕ್ರೈಂ

ನಗರದ ಬಸವನಗುಡಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಕೆಲಸಕ್ಕಿದ್ದ ಮನೆಯಿಂದಲೇ ಚಿನ್ನಾಭರಣ ಕಳವು ಮಾಡಿ ತಲೆಮರೆಸಿಕೊಂಡಿದ್ದ ಆರೋಪಿ ಹಾಗೂ ಆರೋಪಿಯಿಂದ ಚಿನ್ನಾಭರಣ ಖರೀದಿಸಿದ್ದ ಅಟ್ಟಿಕಾ ಗೋಲ್ಡ್‌ ಕಂಪನಿಯ ವ್ಯವಸ್ಥಾಪಕ ಸೇರಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು, ಡಿ. 29: ನಗರದ ಬಸವನಗುಡಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಕೆಲಸಕ್ಕಿದ್ದ ಮನೆಯಿಂದಲೇ ಚಿನ್ನಾಭರಣ ಕಳವು ಮಾಡಿ ತಲೆಮರೆಸಿಕೊಂಡಿದ್ದ ಆರೋಪಿ ಹಾಗೂ ಆರೋಪಿಯಿಂದ ಚಿನ್ನಾಭರಣ ಖರೀದಿಸಿದ್ದ ಅಟ್ಟಿಕಾ ಗೋಲ್ಡ್‌ ಕಂಪನಿಯ ವ್ಯವಸ್ಥಾಪಕ ಸೇರಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕಿನ ಬೆಳ್ಳೂರು ಗ್ರಾಮದ ನಿವಾಸಿ ಜೆ.ಮನೋಜ್‌ (26) ಹಾಗೂ ಆರೋಪಿಯಿಂದ ಚಿನ್ನಾಭರಣ ಖರೀದಿಸಿದ್ದ ತಿಲಕ್‌ನಗರ ಬಿಬಿಟಿ ಪ್ರದೇಶದ ನಿವಾಸಿ ಶಿವು (39) ಬಂಧಿತರು.

ಬಂಧಿತರಿಂದ 25 ಲಕ್ಷ ಮೌಲ್ಯದ 503 ಗ್ರಾಂ ಚಿನ್ನಾಭರಣ ಜಪ್ತಿ ಮಾಡಲಾಗಿದೆ' ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಆರೋಪಿಯು ಒಂದು ವರ್ಷದಿಂದ ಮನೆಗೆಲಸ ಮಾಡಿಕೊಂಡಿದ್ದ. ಆ ಸಂದರ್ಭದಲ್ಲಿ ಮಾಲೀಕರ ವಿಶ್ವಾಸ ಸಹ ಗಳಿಸಿದ್ದ. ಮಾಲೀಕರು ಕುಟುಂಬಸ್ಥರ ಜೊತೆಗೆ ಕೆಲಸದ ನಿಮಿತ್ತ ಹೊರಗಡೆ ತೆರಳಿದಾಗ ಆರೋಪಿಗೆ ಮನೆಯ ಜವಾಬ್ದಾರಿ ವಹಿಸಿದ್ದರು. ಆಗ ಮನೆಯಲ್ಲಿದ್ದ ಚಿನ್ನಾಭರಣ ಕಳವು ಮಾಡಿ ಆಟ್ಟಿಕಾ ಗೋಲ್ಡ್‌ ಕಂಪನಿಯ ಶಿವು ಅವರ ನೆರವಿನಿಂದ ಮಾರಾಟ ಮಾಡಿದ್ದ. ಅದರಿಂದ ಬಂದ ಹಣದಲ್ಲಿ ವಿಲಾಸಿ ಜೀವನ ನಡೆಸುತ್ತಿದ್ದ. ಮನೆಯವರಿಗೆ ಅನುಮಾನ ಬಂದು ವಿಚಾರಣೆ ನಡೆಸುತ್ತಿದ್ದಂತೆಯೇ ಆರೋಪಿ ತಲೆಮರೆಸಿಕೊಂಡಿದ್ದ. ದೂರು ದಾಖಲಾದ ಮೇಲೆ ಆರೋಪಿಯ ಪತ್ತೆಗೆ ವಿಶೇಷ ತಂಡ ರಚಿಸಲಾಗಿತ್ತು' ಎಂದು ದಕ್ಷಿಣ ವಿಭಾಗದ ಡಿಸಿಪಿ ಪಿ.ಕೃಷ್ಣಕಾಂತ್‌ ತಿಳಿಸಿದ್ದಾರೆ.

The police have arrested two persons including the manager of Attica Gold Company who had bought the gold jewelery from the accused who had stolen gold jewelery from the house where he was working and was absconding. J. Manoj (26), a resident of Bellur village in Nagamangala taluk of Mandya district, and Shiva (39), a resident of Tilaknagar BBT area, who bought gold jewelery from the accused, were arrested.