ಬ್ರೇಕಿಂಗ್ ನ್ಯೂಸ್
29-12-22 09:04 pm Mangalore Correspondent ಕ್ರೈಂ
ಸುಳ್ಯ, ಡಿ.29 : ಸುಳ್ಯದ ಕೆವಿಜಿ ಡೆಂಟಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ಮೇಲೆ ರ‍್ಯಾಗಿಂಗ್ ನಡೆಸಿರುವ ಆರೋಪ ಕೇಳಿಬಂದಿದ್ದು, ಈ ಬಗ್ಗೆ ಕೇರಳ ಮೂಲದ ಆರು ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಾಗಿದೆ. ಬೆಂಗಳೂರಿನ ವೈಟ್ ಫೀಲ್ಡ್ ನಿವಾಸಿ ಡೆಂಟಲ್ ವಿದ್ಯಾರ್ಥಿನಿಯೊಬ್ಬರು ರ್ಯಾಗಿಂಗ್ ಒಳಗಾಗಿರುವ ಬಗ್ಗೆ ದೂರು ನೀಡಿದ್ದಾರೆ.
ಸುಳ್ಯ ಠಾಣೆಯಲ್ಲಿ ರ‍್ಯಾಗಿಂಗ್ ಮತ್ತು ಪರಿಶಿಷ್ಟ ಜಾತಿ ದೌರ್ಜನ್ಯ ತಡೆ ಕಾಯ್ದೆಯಡಿ ಕೇಸು ದಾಖಲಾಗಿದೆ. ಮೂರನೇ ವರ್ಷದ ಡೆಂಟಲ್ ವಿದ್ಯಾರ್ಥಿಗಳಾದ ಡಾ.ವಿಶಾಖ್, ಐಶ್ವರ್ಯ, ಐಲ್ಪಾ ಮೇರಿ ಮ್ಯಾಥ್ಯೂ, ಡೆನಲ್ ಸೆಬಾಸ್ಟಿಯನ್, ರಿಷಿಕೇಶ್, ದಯಾ ವರ್ಗೀಸ್ ವಿರುದ್ಧ ಸುಳ್ಯ ಠಾಣೆಯಲ್ಲಿ ಕೇಸು ದಾಖಲಾಗಿದೆ. ನಿರಂತರ ಕಿರುಕುಳ ನೀಡಿದ್ದಲ್ಲದೆ ಹಲ್ಲೆ ನಡೆಸಿದ್ದಾರೆ ಎಂದು ದೂರಿನಲ್ಲಿ ವಿದ್ಯಾರ್ಥಿನಿ ತಿಳಿಸಿದ್ದಾಳೆ. ಪರಿಶಿಷ್ಟ ಜಾತಿ ಮೆರಿಟ್ನಲ್ಲಿ ಕಾಲೇಜಿನಲ್ಲಿ ಸೀಟು ಪಡೆದಿದ್ದ ಪಲ್ಲವಿಯನ್ನು ಇದೇ ವಿಚಾರವಾಗಿ ಇತರರು ಕಿರುಕುಳ ನೀಡುತ್ತಿದ್ದರೆಂದು ಆರೋಪ ಮಾಡಿದ್ದಾರೆ. ಈ ಸಂಬಂಧ ಪ್ರಿನ್ಸಿಪಲ್ಗೆ ಮತ್ತು HODಗೆ ದೂರು ನೀಡಿದ್ರೂ ಯಾವುದೇ ಪ್ರಯೋಜನವಿಲ್ಲ. ಡಿಸೆಂಬರ್ 21ರಂದು ಅಣ್ಣನ ಜೊತೆಗೆ ಕಾಲೇಜಿಗೆ ಬಂದಿದ್ದಾಗ ಹಲ್ಲೆ ನಡೆಸಿದ್ದಾರೆ. ಕೆಟ್ಟ ಪದಗಳಿಂದ ನಿಂದನೆ ಮಾಡಿದ್ದಾರೆ. ಕೂಡಲೇ ಕಾಲೇಜು ಪ್ರಿನ್ಸಿಪಾಲ್ ಮತ್ತು ಪೊಲೀಸರಿಗೆ ಮಾಹಿತಿ ನೀಡಿದ್ದೆವು. ಸುಳ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ದಾಖಲಾಗಿದ್ದೇನೆ. ಘಟನೆ ಬಗ್ಗೆ ಡಿಪಾರ್ಟ್‌ಮೆಂಟ್ ಗೆ ತಿಳಿಸಿದರೂ ಕಾಲೇಜು ಆಡಳಿತ ಮಂಡಳಿ ಕ್ರಮ ಕೈಗೊಂಡಿಲ್ಲ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಮೂವರ ಅಮಾನತು ; ಪ್ರಾಂಶುಪಾಲರ ಸ್ಪಷ್ಟನೆ
ಪ್ರಕರಣಕ್ಕೆ ಸಂಬಂಧಿಸಿ ಕಾಲೇಜಿನ ಪ್ರಾಂಶುಪಾಲರು ಸ್ಪಷ್ಟನೆ ನೀಡಿದ್ದು ಘಟನೆ ಹಿನ್ನೆಲೆಯಲ್ಲಿ ದೂರು ನೀಡಿರುವ ವಿದ್ಯಾರ್ಥಿನಿ ಸೇರಿ ಮೂವರನ್ನು ಅಮಾನತು ಮಾಡಿದ್ದಾರೆ. ಡಿಸೆಂಬರ್ 21ರಂದು ಕಾಲೇಜು ಕ್ಯಾಂಪಸ್ ಹೊರಗಡೆ ವಿದ್ಯಾರ್ಥಿನಿ ಮೇಲೆ ಹಲ್ಲೆಯಾಗಿರುವ ವಿಚಾರ ತಿಳಿದು ಬಂದಿದೆ. ಹಲ್ಲೆ ವಿಚಾರವನ್ನು ಪ್ರಾಂಶುಪಾಲರ ಗಮನಕ್ಕೆ ತಂದಿದ್ದರು. ಘಟನೆ ಬಗ್ಗೆ ಕಾಲೇಜಿನ 6 ಪ್ರಾಧ್ಯಾಪಕರ ತಂಡವನ್ನು ರಚಿಸಿ ತನಿಖೆ ಆರಂಭಿಸಲಾಗಿದೆ. ಆರೋಪಿ ಸ್ಥಾನದಲ್ಲಿರುವ ಡಾ.ವೈಶಾಖ್ ಪಣಿಕರ್ ಮತ್ತು ಡಾ.ಹನೀಶ್ ಕಿರಣ್ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ದೂರು ನೀಡಿರುವ ವಿದ್ಯಾರ್ಥಿನಿ ಅನಾರೋಗ್ಯದ ನೆಪ ನೀಡಿ ಸ್ಪಷ್ಟನೆ ನೀಡಿಲ್ಲ. ಆದರೆ ಕಾಲೇಜಿನಲ್ಲಿ ರಾಗಿಂಗ್ ನಡೆದ ವಿಚಾರವನ್ನು ಆಕೆ ನಮ್ಮ ಗಮನಕ್ಕೆ ತಂದಿಲ್ಲ. ತನಿಖೆ ಹಿನ್ನೆಲೆಯಲ್ಲಿ ಮೂವರನ್ನು ಒಂದು ವಾರದ ಮಟ್ಟಿಗೆ ಸಸ್ಪೆಂಡ್ ಮಾಡಲಾಗಿದೆ ಎಂದು ಪ್ರಾಂಶುಪಾಲರು ತಿಳಿಸಿದ್ದಾರೆ.
An incident of ragging has been reported from K V G Dental College in Sullia against a dental college student for posting pro-Modi status on her mobile phone. The victim Anu (name changed) who hails from Bengaluru has filed a complaint against six students hailing from Kerala with the Sullia police complaining of ragging for posting the status on her mobile.
11-02-25 11:12 pm
Bangalore Correspondent
R Ashok, CM Siddaramaiah, Mysuru Fight: ಒಳಿತು...
11-02-25 10:57 pm
Bjp Sandeep Reddy, Dr Sudhakar: ನಿನ್ನ ಅಕ್ರಮಗಳ...
11-02-25 10:34 pm
Mysuru Fight, Crime Update: ಉದಯಗಿರಿ ಠಾಣೆಗೆ ಖಾ...
11-02-25 03:40 pm
NAACbribery case: ನ್ಯಾಕ್ ಮಾನ್ಯತೆಗಾಗಿ ಭ್ರಷ್ಟಾಚ...
11-02-25 02:21 pm
11-02-25 04:19 pm
HK News Desk
Wedding, Cibil Score: ಸಿಬಿಲ್ ಸ್ಕೋರ್ ಚೆನ್ನಾಗಿಲ...
10-02-25 05:48 pm
CBI arrest, Tirupati laddu: ತಿರುಪತಿ ಲಡ್ಡಿನಲ್ಲ...
10-02-25 02:13 pm
ಮೆಕ್ಸಿಕೋ ; ಟ್ರಕ್ ಡಿಕ್ಕಿ ಹೊಡೆದು ಹೊತ್ತಿ ಉರಿದ ಬಸ...
09-02-25 09:32 pm
Delhi Election Results 2025, BJP Win; ದೆಹಲಿಯಲ...
08-02-25 02:23 pm
11-02-25 07:44 pm
Mangalore Correspondent
Ashok Rai, Temple, Nalin Kateel : ನಳಿನ್ ಅವರೇ...
11-02-25 04:50 pm
Mangalore, Brijesh Chowta, Wenlock hospital:...
10-02-25 11:09 pm
Drone, Puttur Konark Rai, Indian Army: ಆಕಾಶದಿ...
10-02-25 10:34 pm
Mangalore News, Wenlock hospital, operation:...
09-02-25 11:03 pm
12-02-25 12:27 pm
HK News Desk
ಮ್ಯಾಟ್ರಿಮನಿ ಸೈಟ್ ನಲ್ಲಿ ಗಾಳ ; ಸರ್ಕಾರಿ ನೌಕರನೆಂದ...
11-02-25 06:41 pm
Mangalore Police, Crime: ಕೊಲೆ ಅಪರಾಧಿಗೆ ಆಶ್ರಯ...
09-02-25 07:35 pm
Bangalore, Udupi crime, Fraud: ಕ್ಯಾಸಿನೋ, ಬಿಟ್...
08-02-25 10:16 pm
ಕಲಬುರಗಿ | ಪರಸ್ತ್ರೀ ಜೊತೆ ಸುತ್ತಾಡುತ್ತಿದ್ದ ಪತಿಯ...
08-02-25 06:21 pm