ಬ್ರೇಕಿಂಗ್ ನ್ಯೂಸ್
02-01-23 06:54 pm Bangalore Correspondent ಕ್ರೈಂ
ಬೆಂಗಳೂರು, ಜ.2 : ತನ್ನನ್ನು ಲವ್ ಮಾಡಿಲ್ಲ ಎಂಬ ಕಾರಣಕ್ಕೆ ವಿದ್ಯಾರ್ಥಿನಿಯನ್ನು ಕಾಲೇಜು ಆವರಣದಲ್ಲಿಯೇ ಯುವಕನೊಬ್ಬ ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆಗೈದ ಘಟನೆ ರಾಜಾನುಕುಂಟೆ ಬಳಿಯ ಖಾಸಗಿ ಕಾಲೇಜಿನಲ್ಲಿ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು 19 ವರ್ಷದ ಲಯಸ್ಮಿತಾ ಎಂದು ಗುರುತಿಸಲಾಗಿದೆ.
ವಿದ್ಯಾರ್ಥಿನಿ ಪ್ರೆಸಿಡೆನ್ಸಿ ವಿಶ್ವವಿದ್ಯಾಲಯದಲ್ಲಿ ಬಿಟೆಕ್ ಮೊದಲ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಹತ್ತಕ್ಕೂ ಹೆಚ್ಚು ಬಾರಿ ಚಾಕುವಿನಿಂದ ಇರಿದಿದ್ದು ಸ್ಥಳದಲ್ಲೇ ರಕ್ತದ ಮಡುವಿನಲ್ಲಿ ಬಿದ್ದು ಹುಡುಗಿ ಸಾವನ್ನಪ್ಪಿದ್ದಾಳೆ. ಕೊಲೆ ಮಾಡಿದ ವಿದ್ಯಾರ್ಥಿಯನ್ನು ಪವನ್ ಕಲ್ಯಾಣ್ ಎಂದು ಗುರುತಿಸಲಾಗಿದೆ.
ಮಧ್ಯಾಹ್ನ 12:30ರ ಸುಮಾರಿಗೆ ಘಟನೆ ನಡೆದಿದ್ದು, ವಿದ್ಯಾರ್ಥಿನಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಆ ಬಳಿಕ ಆರೋಪಿ ಪವನ್ ಕಲ್ಯಾಣ್ ಕೂಡ ಚಾಕುವಿನಿಂದ ತನ್ನನ್ನು ತಾನು ಇರಿದು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಪವನ್ ಕಲ್ಯಾಣ್ ನೃಪತುಂಗ ಯೂನಿವರ್ಸಿಟಿಯಲ್ಲಿ ಬಿಸಿಎ ಮೊದಲ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದ. ಮಧ್ಯಾಹ್ನ ಪ್ರೆಸಿಡೆನ್ಸಿ ಕಾಲೇಜಿನ ಬಳಿ ಆಗಮಿಸಿದ್ದ ಪವನ್ ಮೊದಲು ವಿದ್ಯಾರ್ಥಿನಿಯನ್ನು ಕ್ಯಾಸಿನಿಂದ ಹೊರಗೆ ಬರುವಂತೆ ಹೇಳಿದ್ದು ಹೊರ ಬರುತ್ತಲೇ ಕುತ್ತಿಗೆ, ಎದೆಗೆ ಚಾಕುವಿನಿಂದ ಇರಿದಿದ್ದಾನೆ.
ಕಾಲೇಜು ಭದ್ರತಾ ಸಿಬ್ಬಂದಿ ವಿದ್ಯಾರ್ಥಿನಿಯನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲು ಮುಂದಾಗಿದ್ದಾರೆ. ಆದರೆ ಆ ವೇಳೆಗಾಗಲೇ ಆಕೆ ಸಾವನ್ನಪ್ಪಿದ್ದಳು ಎನ್ನಲಾಗಿದೆ. ಇತ್ತ ಆತ್ಮಹತ್ಯೆ ಯತ್ನಿಸಿದ್ದ ಪವನ್ ಕಲ್ಯಾಣ್ನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇಬ್ಬರು ಕೂಡ ಕೋಲಾರ ಜಿಲ್ಲೆಯ ಮುಳಬಾಗಿಲು ಮೂಲದವರಾಗಿದ್ದು ಪರಿಚಿತರೇ ಆಗಿದ್ದರು. ಪ್ರೀತಿ ವಿಚಾರದಲ್ಲಿ ಗಲಾಟೆ ನಡೆದು ಕೊಲೆ ನಡೆಸಿದ್ದಾನೆ ಎನ್ನಲಾಗುತ್ತಿದೆ.
A 19-year-old woman was stabbed to death in the premises of the Presidency College in Bengaluru. The incident occurred on Monday, January 2. The woman, Layasmitha, was a student at the college. According to reports, the attacker — one Pawan Kalyan — stabbed Layasmitha inside the university. Police told TNM that the incident occurred at 1 pm on Monday. Pawan Kalyan is a 23-year old BTech student and according to the police the duo hail from the same village in Kolar and were acquainted with each other.
17-05-25 01:44 pm
Bangalore Correspondent
Santosh Lad, Modi, Pak, War: ಮೋದಿ ತಾವೇ ಸುಪ್ರೀ...
16-05-25 10:04 am
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
17-05-25 10:51 pm
HK News Desk
Donald Trump, Asim Munir: ಡೊನಾಲ್ಡ್ ಟ್ರಂಪ್ ಕುಟ...
17-05-25 03:42 pm
ಡೊನಾಲ್ಡ್ ಟ್ರಂಪ್ ಟೀಕಿಸಿದ್ದ ಪೋಸ್ಟ್ ಡಿಲೀಟ್ ಮಾಡಿದ...
16-05-25 04:45 pm
ಮುಸ್ಲಿಂ ವ್ಯಕ್ತಿಗೆ ಕುರಾನ್ ಪ್ರಕಾರ ನಾಲ್ಕು ಮದುವೆ...
15-05-25 09:09 pm
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
17-05-25 10:09 pm
Mangalore Correspondent
Mangalore Balmatta Accident, Bus, Video: ನಿಂತ...
17-05-25 08:52 pm
Sakleshpur Subrahmanya Railway Electrificatio...
17-05-25 01:01 pm
CM Siddaramaiah, New Dc Office Mangalore Inau...
16-05-25 10:27 pm
Siddaramaiah, Cm Mangalore, BJP black flag: ಸ...
16-05-25 06:05 pm
17-05-25 05:00 pm
Bangalore Correspondent
Mangalore Stabbing, Panemangalore, Crime, Att...
16-05-25 11:06 pm
Belagavi Protest, Quran Burnt, Police, Crime:...
16-05-25 09:20 pm
Davanagere Crime, Gold Robbery: ಆನ್ಲೈನ್ ಗೇಮಿಂ...
15-05-25 11:06 pm
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm