ಬ್ರೇಕಿಂಗ್ ನ್ಯೂಸ್
03-01-23 05:00 pm Mangalore Correspondent ಕ್ರೈಂ
ಮಂಗಳೂರು, ಜ.3 : ಖೋಟಾ ನೋಟುಗಳನ್ನು ಚಲಾವಣೆ ಮಾಡಲು ಯತ್ನಿಸುತ್ತಿದ್ದ ಇಬ್ಬರನ್ನು ಕದ್ರಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್ ನಿವಾಸಿ ನಿಜಾಮುದ್ದೀನ್ ಯಾನೆ ನಿಜಾಂ (32) ಮತ್ತು ಜೆಪ್ಪಿನಮೊಗರಿನ ರಜೀಮ್ ಯಾನೆ ರಾಫಿ (31) ಬಂಧಿತರು.
ಆರೋಪಿಗಳು ಜನವರಿ 2 ರಂದು ಪಾಂಡೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸ್ಕೂಟರ್ ಒಂದನ್ನು ಸುಲಿಗೆ ಮಾಡಿದ್ದರು. ಅದೇ ದಿನ ಸಂಜೆ ಈ ಸ್ಕೂಟರ್ನಲ್ಲಿ ಆರೋಪಿಗಳು ಖೋಟಾ ನೋಟುಗಳನ್ನು ಸಾಗಿಸುತ್ತಿದ್ದರು. ನಂತೂರಿನಲ್ಲಿ ಅನುಮಾನಾಸ್ಪದ ನೆಲೆಯಲ್ಲಿ ಕಂಡುಬಂದಿದ್ದು ಇವರನ್ನು ತಪಾಸಣೆ ನಡೆಸಿದಾಗ 500 ರೂ. ಮುಖಬೆಲೆಯ 4.50 ಲಕ್ಷ ಮೊತ್ತದ ನಕಲಿ ನೋಟುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಆರೋಪಿಗಳು ಬೆಂಗಳೂರಿನ ಡ್ಯಾನಿಯಲ್ ಎಂಬಾತನಿಂದ ನಕಲಿ ನೋಟುಗಳನ್ನು ಪಡೆದಿದ್ದಾಗಿ ಆರೋಪಿಗಳು ಮಾಹಿತಿ ನೀಡಿದ್ದಾರೆ. ನಂತೂರು ವೃತ್ತದಲ್ಲಿ ಪೊಲೀಸರು ವಾಹನ ತಪಾಸಣೆ ನಡೆಸುತ್ತಿದ್ದಾಗ ಸ್ಕೂಟರ್ ನಿಲ್ಲಿಸದೆ ಅತಿವೇಗದಿಂದ ಸಾಗಿತ್ತು. ಬೆನ್ನತ್ತಿ ಹಿಡಿದು ನಿಲ್ಲಿಸಿ ತಪಾಸಣೆ ನಡೆಸಿದಾಗ ಅದರಲ್ಲಿ ಖೋಟಾ ನೋಟು ಪತ್ತೆಯಾಗಿದೆ.

ಡ್ಯಾನಿಯಲ್ ಎಂಬಾತ ಇದಕ್ಕೂ ಮೊದಲೇ ಖೋಟಾ ನೋಟು ಪ್ರಕರಣದಲ್ಲಿ ಬೆಂಗಳೂರಿನಲ್ಲಿ ಪೊಲೀಸರ ಕೈಗೆ ಸಿಕ್ಕಿದ್ದ. ತಮಿಳುನಾಡಿನ ಕೊಯಮುತ್ತೂರಿನಲ್ಲಿ ನಕಲಿ ನೋಟು ಮುದ್ರಿಸಿ ಕರ್ನಾಟಕದ ವಿವಿಧ ಕಡೆಗಳಲ್ಲಿ ವಿತರಿಸಿದ್ದ ಎಂದು ಪೊಲೀಸ್ ಕಮಿಷನರ್ ಶಶಿಕುಮಾರ್ ಮಾಹಿತಿ ನೀಡಿದ್ದಾರೆ.
ಆರೋಪಿ ನಿಜಾಂ ವಿರುದ್ದ ಈ ಹಿಂದೆ 2015 ರಲ್ಲಿ ವಿಟ್ಲದಲ್ಲಿ ಕೊಲೆ ಪ್ರಕರಣ, 2015 ರಲ್ಲಿ ಮಂಗಳೂರು ಕಾರಾಗೃಹದಲ್ಲಿ ಕೊಲೆ ಪ್ರಕರಣ, 2017 ರಲ್ಲಿ ಕೊಡಗಿನ ಕುಶಾಲನಗರ ಠಾಣೆಯಲ್ಲಿ ದರೋಡೆ ಪ್ರಕರಣ, 2018 ರಲ್ಲಿ ಪುತ್ತೂರು ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕೊಲೆ ಯತ್ನ ಪ್ರಕರಣ ಮತ್ತು ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಸುಲಿಗೆ ಪ್ರಕರಣ ದಾಖಲಾಗಿತ್ತು. ಆರೋಪಿ ರಾಫಿ ವಿರುದ್ದ ಉರ್ವ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿದೆ. ಆರೋಪಿಗಳನ್ನು ಪತ್ತೆ ಹಚ್ಚಿದ ಪೊಲೀಸ್ ತಂಡಕ್ಕೆ 10 ಸಾವಿರ ರೂ. ನಗದು ಬಹುಮಾನವನ್ನು ಕಮಿಷನರ್ ಘೋಷಣೆ ಮಾಡಿದ್ದಾರೆ.
Police arrested two persons with Rs 500 counterfeit currency notes worth Rs 4.5 lac. The arrested are identified as Nizamuddin (32) from BC Road and Rajeem (31) from Jeppu.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm