ಬ್ರೇಕಿಂಗ್ ನ್ಯೂಸ್
24-01-23 11:27 am Udupi Correspondent ಕ್ರೈಂ
ಉಡುಪಿ, ಜ.24: ಕೋಟ ಠಾಣೆ ವ್ಯಾಪ್ತಿಯ ಸಾಸ್ತಾನದಲ್ಲಿ ಬೆಂಗಳೂರಿನ ಹೋಟೇಲ್ ಉದ್ಯಮಿ ರಾಜೇಶ ಪೂಜಾರಿ ಎಂಬವರ ಮನೆಯಲ್ಲಿ ಕಳೆದ ಸೆಪ್ಟಂಬರ್ ನಲ್ಲಿ ನಡೆದ ಕಳವು ಪ್ರಕರಣ ಸಂಬಂಧಿಸಿ ಬ್ರಹ್ಮಾವರ ಪೊಲೀಸರು ಕುಖ್ಯಾತ ಆರೋಪಿಗಳಿಬ್ಬರನ್ನು ಬಂಧಿಸಿದ್ದಾರೆ.
ರಾಜೇಶ ದೇವಾಡಿಗ ಮತ್ತು ಮೊಹಮ್ಮದ್ ರಿಯಾಜ್ ಬಂಧಿತರು. ಪ್ರಕರಣದ ಬಗ್ಗೆ ಬ್ರಹ್ಮಾವರ ಸಿಪಿಐ ಅನಂತಪದ್ಮನಾಭ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವನ್ನು ರಚಿಸಲಾಗಿತ್ತು. ಕೋಟ ಠಾಣೆ ಪಿ.ಎಸ್.ಐ ಮಧು ಬಿ., ಪ್ರೊಬೇಷನರಿ ಪಿ.ಎಸ್.ಐ ನೂತನ್ ಡಿ., ಸಿಬ್ಬಂದಿಗಳಾದ ಪ್ರದೀಪ ನಾಯಕ್, ರಾಘವೇಂದ್ರ, ಪ್ರಸನ್ನ ಬ್ರಹ್ಮಾವರ ಠಾಣೆ ಸಿಬ್ಬಂದಿ ವೆಂಕಟರಮಣ ದೇವಾಡಿಗ ಅವರಿದ್ದ ತಂಡವು ಮನೆ ಕಳ್ಳತನ ಪ್ರಕರಣದ ಹಳೆಯ ಆರೋಪಿಗಳು, ಜೈಲಿನಿಂದ ಬಿಡುಗಡೆಯಾದವರ ಮಾಹಿತಿಯನ್ನು ಕಲೆಹಾಕಿ ಕಾರ್ಯಾಚರಣೆ ನಡೆಸಿತ್ತು.
ಮೊನ್ನೆ ಜ.22ರಂದು ಕೋಟ ಠಾಣೆ ಸರಹದ್ದಿನ ಸಾಯಬರಕಟ್ಟೆ ಬಳಿ ಖಚಿತ ಮಾಹಿತಿಯಂತೆ ವಾಹನ ತಪಾಸಣೆ ನಡೆಸುತ್ತಿದ್ದಾಗ ಫೋರ್ಡ್ ಮಾಂಡಿಯೋ ಕಾರು ಅನುಮಾನದ ನೆಲೆಯಲ್ಲಿ ಪರಿಶೀಲಿಸಿದ್ದಾರೆ. ಕಾರಿನಲ್ಲಿ ರಾಜೇಶ ದೇವಾಡಿಗ ಮತ್ತು ಮೊಹಮ್ಮದ್ ರಿಯಾಜ್ ಹೊಸ್ಮಾರ್ @ ರಿಯಾಜ್ ಎಂಬವರಿದ್ದರು. ಕಾರಿನಲ್ಲಿ ಯಾವುದೇ ದಾಖಲೆಯಿಲ್ಲದ ಚಿನ್ನಾಭರಣ ಕಂಡುಬಂದಿತ್ತು. ವಿಚಾರಣೆ ವೇಳೆ ಸಾಸ್ತಾನದ ಚರ್ಚ್ ಬಳಿಯ ಮನೆಯಿಂದ ಕಳವುಗೈದ ಚಿನ್ನಾಭರಣ ಎಂದು ತಿಳಿಸಿದ್ದರು. ಅವನ್ನು ಮಾರಾಟ ಮಾಡಲು ಶಿವಮೊಗ್ಗ ಕಡೆಗೆ ತೆರಳುತ್ತಿರುವುದಾಗಿ ಹೇಳಿದ್ದರು.
ಈ ಇಬ್ಬರು ಆರೋಪಿಗಳು ಹಿರಿಯಡ್ಕ ಜೈಲಿನಲ್ಲಿ ಜೊತೆಗಿದ್ದಾಗ ಪರಿಚಯವಾಗಿದ್ದು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ರಾತ್ರಿ ಹೊತ್ತು ಬೀಗ ಹಾಕಿದ ಮನೆಗಳನ್ನು ಗುರುತಿಸಿ ಕಳ್ಳತನ ನಡೆಸಲು ಸಂಚು ನಡೆಸುತ್ತಿದ್ದರು. ಆರೋಪಿಗಳಿಂದ ಕಳ್ಳತನ ನಡೆಸಿದ ಸುಮಾರು 15 ಲಕ್ಷದ ಚಿನ್ನಾಭರಣ, ಕಳ್ಳತನ ಮಾಡಿದ ಹಣದಿಂದ ಖರೀದಿಸಿದ ಸುಮಾರು 2 ಲಕ್ಷ 50 ಸಾವಿರ ಮೌಲ್ಯದ ಪೋರ್ಡ್ ಮಾಂಡಿಯೋ ಕಾರು, ಸುಮಾರು 1 ಲಕ್ಷ ಮೌಲ್ಯದ ಹೀರೋ ಕಂಪೆನಿಯ ಡೆಸ್ಟೀನಿ ಬೈಕ್ ಹಾಗೂ ಕೃತ್ಯಕ್ಕೆ ಬಳಸಿದ ಸುಮಾರು 50000 ಸಾವಿರ ಮೌಲ್ಯದ ಹೊಂಡಾ ಆ್ಯಕ್ಟೀವ ಮೋಟಾರ್ ಸೈಕಲ್ ಸ್ವಾಧೀನ ಪಡಿಸಲಾಗಿದೆ.
Police officials under the limits of Kota police station arrested two accused involved in theft during the night and seized gold ornaments worth Rs 15 lacs along with three vehicles. In September 2022, a night theft was reported at Rajesh Poojary's residence who runs a hotel business n Bengaluru. The theft was reported at his residence at Mathada Thotada Sasthana in Pandeshwara village of Brahmavara taluk. The accused had entered the house by breaking the door of the house. A case was filed with Kota police station.
17-09-25 06:02 pm
Bangalore Correspondent
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
17-09-25 11:05 pm
Mangalore Correspondent
Mahesh Shetty Timarodi, Arms, FIR: ಮಹೇಶ್ ಶೆಟ್...
17-09-25 10:37 pm
Poonja International Hotel, Prabhakar Poonja...
17-09-25 10:06 pm
Mangalore, Heart Attack, Puttur: ಕೊಣಾಜೆಕಲ್ಲು...
17-09-25 06:54 pm
Dharmasthala Case. Vittal Gowda: ಧರ್ಮಸ್ಥಳ ಕೇಸ...
17-09-25 03:19 pm
17-09-25 09:44 pm
HK News Desk
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm
Vijayapura Bank Robbery: ಮಹಾರಾಷ್ಟ್ರ ಗಡಿಭಾಗದ ವ...
16-09-25 10:40 pm