ಬ್ರೇಕಿಂಗ್ ನ್ಯೂಸ್
18-02-23 04:32 pm Bangalore Correspondent ಕ್ರೈಂ
ಬೆಂಗಳೂರು, ಫೆ.18: ತಾಲ್ಲೂಕಿನ ದೊಡ್ಡಬೆಳವಂಗಲ ಗ್ರಾಮದಲ್ಲಿ ಶುಕ್ರವಾರ ನಡೆದ ಕ್ರಿಕೆಟ್ ಪಂದ್ಯಾವಳಿ ವೇಳೆ ಎರಡು ಗುಂಪುಗಳ ನಡುವೆ ನಡೆದ ಗಲಾಟೆಯಲ್ಲಿ ಪಿಯುಸಿ ವಿದ್ಯಾರ್ಥಿ ಸೇರಿದಂತೆ ಇಬ್ಬರು ಚಾಕು ಇರಿತಕ್ಕೆ ಬಲಿಯಾಗಿದ್ದಾರೆ.
ಪಿಯುಸಿ ಪ್ರಥಮ ವರ್ಷದ ವಿದ್ಯಾರ್ಥಿ ಪ್ರತೀಕ್ (17) ಮತ್ತು ಬಿ.ಇ ಪದವೀಧರ ಡಿ.ಎಸ್. ಭರತ್‌ಕುಮಾರ್ (23) ಚಾಕು ಇರಿತದಿಂದ ಮೃತಪಟ್ಟಿದ್ದಾರೆ. ಈ ಇಬ್ಬರೂ ದೊಡ್ಡಬೆಳವಂಗಲ ಗ್ರಾಮದ ನಿವಾಸಿಗಳು.
ದೊಡ್ಡಬಳ್ಳಾಪುರ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಧೀರಜ್ ಮುನಿರಾಜು ಅವರು ಕ್ರೀಡಾ ಮತ್ತು ಸಾಂಸ್ಕೃತಿಕ ವೇದಿಕೆ ಮೂಲಕ ಶಿವರಾತ್ರಿ ಅಂಗವಾಗಿ ಆಯೋಜಿಸಿದ್ದ ಟೆನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ ವೇಳೆ ಈ ದುರ್ಘಟನೆ ನಡೆದಿದೆ. ಹುಲಿಕುಂಟೆ ಗ್ರಾಮದ ವಿನಯ್ ಹಾಗೂ ಸ್ನೇಹಿತರು ಈ ಕೃತ್ಯ ಎಸಗಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ವಿನಯ್ ತಂದೆ ಹುಲಿಕುಂಟೆ ಗ್ರಾಮ ಪಂಚಾಯತಿಯ ಮಾಜಿ ಅಧ್ಯಕ್ಷರಾಗಿದ್ದು, ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದಾರೆ.
ಕ್ರಿಕೆಟ್ ಪಂದ್ಯಾವಳಿ ನಡೆಯುತ್ತಿದ್ದ ದೊಡ್ಡಬೆಳವಂಗಲ ಗ್ರಾಮದ ಕರ್ನಾಟಕ ಪಬ್ಲಿಕ್ ಸ್ಕೂಲ್ ಆಟದ ಮೈದಾನದಲ್ಲಿ ಹುಲಿಕುಂಟೆ ತಂಡದ ಬೆಂಬಲಿಗರು ಕಾರುಗಳನ್ನು ನಿಲ್ಲಿಸಿದ್ದರು. ಮೈದಾನದಲ್ಲಿ ಕಾರು ನಿಲ್ಲಿಸದಂತೆ ಆಟಗಾರರು ಮತ್ತು ಆಯೋಜಕರು ಆಕ್ಷೇಪ ಎತ್ತಿದಾಗ ಗಲಾಟೆ ಆರಂಭವಾಗಿದೆ. ಆಗ ಕೆಲವರು ಕಾರಿನ ಗಾಜುಗಳನ್ನು ಪುಡಿಗಟ್ಟಿದರು. ಘರ್ಷಣೆಯಲ್ಲಿ ತೊಡಗಿದ್ದ ಗುಂಪನ್ನು ಚದುರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದರು.
ಗ್ರಾಮದ ಬಸ್ ನಿಲ್ದಾಣದ ಬಳಿಯ ಬೇಕರಿ ಹತ್ತಿರ ಪಂದ್ಯಾವಳಿಯ ಟೀ– ಶರ್ಟ್ ಧರಿಸಿ ನಿಂತಿದ್ದ ಇಬ್ಬರು ಯುವಕರ ಮೇಲೆ, ಕಾರಿನಲ್ಲಿದ್ದ ಗುಂಪಿನ ಯುವಕರು ಡ್ರ್ಯಾಗರ್ ಮತ್ತು ಚಾಕುಗಳಿಂದ ದಾಳಿ ನಡೆಸಿದ್ದಾರೆ. ಈ ಇಬ್ಬರ ಗುಪ್ತಾಂಗ ಹಾಗೂ ಹೊಟ್ಟೆಗೆ ಹಲವು ಬಾರಿ ಚಾಕುವಿನಿಂದ ಇರಿದು ಗುಂಪು ಕಾರಿನಲ್ಲಿ ಪರಾರಿಯಾಗಿದೆ. ಮೃತ ಯುವಕರಿಗೂ ಗಲಾಟೆಗೂ ಯಾವುದೇ ಸಂಬಂಧ ಇರಲಿಲ್ಲ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ರಕ್ತದ ಮಡುವಿನಲ್ಲಿ ಬಿದ್ದಿದ್ದ ಇಬ್ಬರನ್ನೂ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ಯುವಕರು ಮೃತಪಟ್ಟ ವಿಚಾರ ತಿಳಿಯುತ್ತಿದ್ದಂತೆಯೇ ದೊಡ್ಡಬೆಳವಂಗಲ ಗ್ರಾಮದಲ್ಲಿ ಬಿಗುವಿನ ವಾತಾವರಣ ಸೃಷ್ಟಿಯಾಗಿತ್ತು. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಭೇಟಿ ನೀಡಿದ್ದರು.
ಕೃತ್ಯ ಎಸಗಿದ ಆರೋಪಿಗಳ ಪತ್ತೆಗಾಗಿ ಸಮೀಪದ ಅಂಗಡಿಗಳ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ.
Two persons, including a 16-year-old boy, were stabbed to death by a group of assailants in Doddabelavangala village in Doddaballapura taluk, on the city outskirts on Friday afternoon. It is suspected that the murders were a fallout of a fight during a cricket tournament organised by the villagers for Maha Shivaratri festival. The victims are P Bharath (23), an engineering graduate and employee with a private firm, and Prateesh (17), an Ist year PU student, and residents of Doddabelavangala village.
27-07-25 01:09 pm
HK News Desk
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
27-07-25 08:56 pm
Mangalore Correspondent
Dharmasthala Case, SIT, ADGP Pranav Mohanty:...
27-07-25 08:14 pm
Dharmasthala Case, Sowjanya case, Mangalore:...
27-07-25 07:49 pm
Mangalore Congress: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್...
26-07-25 10:41 pm
Mangalore, Dharmasthala Case, SIT, whistle bl...
26-07-25 10:05 pm
27-07-25 08:39 pm
Mangalore Correspondent
ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಯುವತಿಯನ್ನ ಆಸ್ಪತ್ರೆಗ...
27-07-25 07:13 pm
Bangalore Murder, Two Children Killed, Crime:...
27-07-25 03:26 pm
ಸೈಬರ್ ವಂಚಕರ ಜಾಲಕ್ಕೆ ನಕಲಿ ಬ್ಯಾಂಕ್ ಖಾತೆ ಪೂರೈಕೆ...
26-07-25 09:35 pm
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm