ಬ್ರೇಕಿಂಗ್ ನ್ಯೂಸ್
19-02-23 12:06 pm Bangalore Correspondent ಕ್ರೈಂ
ಬೆಂಗಳೂರು, ಫೆ.19: ತನ್ನ ಪ್ರೇಮ ನಿವೇದನೆಯನ್ನು ಒಪ್ಪಿಕೊಳ್ಳದ ಬಾಲಕಿ ಮೇಲೆ ಆ್ಯಸಿಡ್ ಎರಚಿ ಪರಾರಿಯಾಗಿದ್ದ ಯುವಕನನ್ನು ಪೊಲೀಸರು ಶನಿವಾರ ಬಂಧನಕ್ಕೊಳಪಡಿಸಿದ್ದಾರೆ.
ನಗರದ ಕುರುಪೇಟೆ ನಿವಾಸಿ, ಸಾತನೂರು ರಸ್ತೆ ಹೆಂಚಿನ ಫ್ಯಾಕ್ಟರಿ ಮುಂಭಾಗ ಗ್ಯಾರೇಜ್ ನಲ್ಲಿ ಮೆಕ್ಯಾನಿಕ್ ಆಗಿ ಕೆಲಸ ಮಾಡುತ್ತಿದ್ದ ಸುಮಂತ್ ಅಲಿಯಾಸ್ ಅಪ್ಪು (22) ಬಂಧಿತ ಆರೋಪಿಯಾಗಿದ್ದಾನೆ.
ಆ್ಯಸಿಡ್ ದಾಳಿಯಿಂದ ಬಾಲಕಿ ಶೇ.40ರಷ್ಟು ಸುಟ್ಟ ಗಾಯಗಳಿಂದ ಬಳಲುತ್ತಿದ್ದಾಳೆ. ಪಿಯುಸಿ ವಿದ್ಯಾರ್ಥಿನಿಯಾಗಿರುವ ಬಾಲಕಿ ಬೆನ್ನು, ಎಡಗಣ್ಣು, ಭುಜದ ಮೇಲಿನ ಗಾಯಗಳಿಂದ ಬಳಲುತ್ತಿದ್ದು, ನಗರದ ಮಿಂಟೋ ಕಣ್ಣಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.
ಆರೋಪಿ ನಗರದ ಹೊರವಲಯದ ಸಾತನೂರು ರಸ್ತೆಯಲ್ಲಿ ತೆರಳುತ್ತಿದ್ದ ಬಗ್ಗೆ ಖಚಿತ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಪೊಲೀಸರು ಆತನನ್ನು ಬಂಧನಕ್ಕೊಳಪಡಿಸಿದ್ದಾರೆ.
ಆರೋಪಿ ಶುಕ್ರವಾರ ಬೆಳಿಗ್ಗೆ ಸಂತ್ರಸ್ತೆ ಮನೆಗೆ ಕಲ್ಲು ಎಸೆದಿದ್ದ. ತನ್ನಿಂದ ದೂರ ಇರಬೇಕು ಎಂದರೆ ಕನಿಷ್ಟ ಕಾಲಿಗೆ ಬಿದ್ದು ಬೇಡಿಕೊಳ್ಳುವಂತೆ ತಿಳಿಸಿದ್ದ. ಬಳಿಕ ಬಾಲಕಿ ತನ್ನ ಸಹೋದರನೊಂದಿಗೆ ನಾರಾಯಣಪ್ಪ ಕೆರೆ ಬಳಿ ಇರುವ ಬೈಪಾಸ್ ರಸ್ತೆಗೆ ತೆರಳಿ ಆರೋಪಿ ಕಾಲಿಗೆ ಬಿದ್ದಿದ್ದಾಳೆ. ಈ ವೇಳೆ ಆರೋಪಿ ಆ್ಯಸಿಡ್ ಎರಚಿ ಪರಾರಿಯಾಗಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ.
ಸ್ಥಳದಲ್ಲಿದ್ದ ಸಹೋದರ ಕೂಡಲೇ ಆಕೆಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾನೆ. ಸುಮಂತ್ ಬಾಲಕಿ ಹಿಂದೆ ಬಿದ್ದಿರುವುದು ಎರಡೂ ಕುಟುಂಬಕ್ಕೆ ತಿಳಿದಿತ್ತು. ಆದರೆ, ಜಾತಿಗಳು ಬೇರೆಯಾಗಿದ್ದರಿಂದ ಮೌನ ತಾಳಿದ್ದವು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಈ ನಡುವೆ ಬಾಲಕಿಯ ಆರೋಗ್ಯ ಬಗ್ಗೆ ಮಾಹಿತಿ ನೀಡಿರುವ ವೈದ್ಯಕೀಯ ಅಧೀಕ್ಷಕಿ ಮತ್ತು ನಿರ್ದೇಶಕಿ ಡಾ.ಬಿ.ಎಲ್.ಸುಜಾತಾ ರಾಥೋಡ್ ಅವರು, ಹೊರರೋಗಿಗಳ ವಿಭಾಗದಲ್ಲಿ ಬಾಲಕಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾಳೆ. ಆಕೆ ಭಾಗಶಃ ದೃಷ್ಟಿ ಕಳೆದುಕೊಳ್ಳುವ ಸಾಧ್ಯತೆಯಿದೆ ಎಂದು ಹೇಳಿದ್ದಾರೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವ ಹಾಲಪ್ಪ ಬಸಪ್ಪ ಆಚಾರ್ ಅವರು ಶನಿವಾರ ಬೆಳಗ್ಗೆ ಆಸ್ಪತ್ರೆ ಭೇಟಿ ನೀಡಿದ್ದು, ಬಾಲಕಿಯ ಆರೋಗ್ಯ ವಿಚಾರಿಸಿದರು. ಈ ವೇಳೆ ಚಿಕಿತ್ಸೆ ಅಗತ್ಯವಿರುವ ನೆರವನ್ನುನೀಡುವುದಾಗಿ ಭರವಸೆ ನೀಡಿದರು.
ಆಸಿಡ್‌ನಲ್ಲಿನ ರಾಸಾಯನಿಕ ಅಂಶಗಳ ಬಗ್ಗೆ ಖಚಿತಪಡಿಸಿಕೊಳ್ಳಲು ಪೊಲೀಸರು ವಿಧಿ ವಿಜ್ಞಾನ ಪ್ರಯೋಗಾಲಯದ (ಎಫ್‌ಎಸ್‌ಎಲ್) ವರದಿಗಾಗಿ ಕಾಯುತ್ತಿದ್ದಾರೆ. ಆರೋಪಿ ವಿರುದ್ಧ ವಿವಿಧ ಸೆಕ್ಷನ್ ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಕಂಡಿರುವ ಕನಕಪುರ ನಗರ ಠಾಣೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.
Acid attack on minor girl in Bangalore, accused arrested. In the Ramanagara region of Karnataka, a guy has been detained for attacking a young girl with acid and severely hurting her. On February 17, in Kanakapura, a teenager wounded a woman's eye by hurling "acid" at her. The defendant, Sumanth, is a Kurupete resident and a mechanic who works at a business. He is 22 years old. The man was held captive.
13-09-25 04:31 pm
HK News Desk
Hassan truck Accident: ಅರಕಲಗೂಡು ; ಗಣೇಶ ಮೆರವಣಿ...
13-09-25 10:19 am
Shikaripura Bike Accident: ಬೈಕ್ಗೆ ಡಿಕ್ಕಿ ಹೊಡ...
12-09-25 08:26 pm
Yatnal, Maddur: ರಾಜ್ಯದಲ್ಲಿ ಹೊಸ ಹಿಂದು ಪಾರ್ಟಿ ಕ...
12-09-25 03:04 pm
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
13-09-25 03:25 pm
HK News Desk
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
12-09-25 10:58 pm
Mangalore Correspondent
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
Mangalore Road Accident, Pothole, Survery: ರಸ...
12-09-25 05:34 pm
13-09-25 11:36 am
Mangalore Correspondent
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm